ಬಳ್ಳಾರಿ ಜಿಲ್ಲಾಸ್ಪತ್ರೆಯ ವೈದ್ಯರ ಅಪಹರಣ: ದುಷ್ಕರ್ಮಿಗಳಿಂದ ಕೋಟ್ಯಂತರ ರೂ.ಗೆ ಬೇಡಿಕೆ

ಬಳ್ಳಾರಿ: ಬಳ್ಳಾರಿ ಜಿಲ್ಲಾಸ್ಪತ್ರೆಯ ಮಕ್ಕಳ ತಜ್ಞ ವೈದ್ಯ ಡಾ.ಸುನೀಲ್ ಎಂಬವರನ್ನು ತಂಡವೊಂದು ಅಪಹರಣ ಮಾಡಿರುವ ಘಟನೆ ಇಂದು ಮುಂಜಾನೆ ನಗರದ ಸತ್ಯನಾರಾಯಣ ಪೇಟೆಯಲ್ಲಿನ ಶನೇಶ್ವರ ದೇವಸ್ಥಾನದ ಬಳಿ ನಡೆದಿರುವುದು ವರದಿಯಾಗಿದೆ.
ಸುನೀಲ್ ಇಂದು ಮುಂಜಾನೆ 6 ಗಂಟೆ ಸುಮಾರಿಗೆ ವಾಕಿಂಗ್ ತೆರಳಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಕಾರಿನಲ್ಲಿ ಬಂದ ಅಪರಿಚಿತರ ತಂಡ ಡಾ.ಸುನೀಲ್ ರನ್ನು ಅಪಹರಿಸಿದೆ.
ಬಳಿಕ ಸುನೀಲ್ ಮೊಬೈಲ್ ಫೋನಿನಿಂದ ಅವರ ಸಹೋದರ, ಜಿಲ್ಲಾ ಮದ್ಯ ಮಾರಾಟಗಾರರ ಸಂಘದ ಅಧ್ಯಕ್ಷ ವೇಣುಗೋಪಾಲ್ ಗುಪ್ತರಿಗೆ ಕರೆ ಮಾಡಿರುವ ಅಪಹರಣಕಾರರು ಆರು ಕೋಟಿ ರೂ. ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ವಿ.ಜೆ ಸ್ಥಳ ಪರಿಶೀಲನೆ ನಡೆಸಿದ್ದು, ತನಿಖಾ ತಂಡಕ್ಕೆ ಸಲಹೆ ಸೂಚನೆ ನೀಡಿದ್ದಾರೆ. ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.
Next Story