ಕೂಡ್ಲಿಗಿ | ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಅವರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ

ಕೂಡ್ಲಿಗಿ : ಉಜ್ಜಿನಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಭೈರದೇವರಗುಡ್ಡ ಗ್ರಾಮದಲ್ಲಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಅವರು ಮಂಗಳವಾರ (ಜ. 20) ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ 10.60 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ಬಿಸಿಯೂಟದ ಅಡುಗೆ ಕೊಠಡಿ ಕಟ್ಟಡವನ್ನು ಶಾಸಕರು ಲೋಕಾರ್ಪಣೆ ಮಾಡಿದರು. ನಂತರ ಅದೇ ಗ್ರಾಮದಲ್ಲಿ 20 ಲಕ್ಷ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾದ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.
ಸುಂಕದಕಲ್ಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಶಾಲಾ ಪರಿಸರ ಮತ್ತು ಶೈಕ್ಷಣಿಕ ವ್ಯವಸ್ಥೆಯನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಭೈರದೇವರಗುಡ್ಡ ಹಾಗೂ ಸುಂಕದಕಲ್ಲು ಗ್ರಾಮಸ್ಥರ ಮೂಲಭೂತ ಸೌಕರ್ಯಗಳ ಕುರಿತ ಕುಂದುಕೊರತೆಗಳನ್ನು ಆಲಿಸಿದ ಶಾಸಕರು, ಹಂತ ಹಂತವಾಗಿ ಗ್ರಾಮಗಳ ಅಭಿವೃದ್ಧಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಿಕೊಡುವುದಾಗಿ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಪ್ರಮುಖ ಮುಖಂಡರಾದ ಪಾಲಪ್ಪ, ಮಾರೇಶ, ಓಬಣ್ಣ, ಚಂದ್ರಣ್ಣ, ಅಂಜಿನಿ ಹಾಗೂ ಸುಂಕದಕಲ್ಲು ಗ್ರಾಮದ ಮುಖಂಡರಾದ ಅಂಜಿನಪ್ಪ, ಮಂಜಣ್ಣ, ಶಿವನಗೌಡ, ಕರಿಬಸಪ್ಪ, ಹೊನ್ನೂರಪ್ಪ, ಸಿದ್ದೇಶ, ನಾಗರಾಜ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಊರಿನ ಹಿರಿಯರು ಉಪಸ್ಥಿತರಿದ್ದರು.







