Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕೊಪ್ಪಳ | ಮರಕುಂಬಿ ದಲಿತರ ಮೇಲಿನ...

ಕೊಪ್ಪಳ | ಮರಕುಂಬಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣ : ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 97 ಮಂದಿಗೆ ಜಾಮೀನು ಮಂಜೂರು

ವಾರ್ತಾಭಾರತಿವಾರ್ತಾಭಾರತಿ13 Nov 2024 2:10 PM IST
share
ಕೊಪ್ಪಳ | ಮರಕುಂಬಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣ : ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 97 ಮಂದಿಗೆ ಜಾಮೀನು ಮಂಜೂರು

ಕೊಪ್ಪಳ : ಮರಕುಂಬಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 97 ಮಂದಿಗೆ ಧಾರವಾಡದ ಹೈಕೋರ್ಟ್‌ ಪೀಠವು ಬುಧವಾರ ಜಾಮೀನು ಮಂಜೂರು ಮಾಡಿದೆ.

ಎ1 ಆರೋಪಿ ಮಂಜುನಾಥ ಜಾಮೀನಿಗೆ ಅರ್ಜಿ ಸಲ್ಲಿಸಿರಲಿಲ್ಲ. ಅದ್ದರಿಂದ ಅವರನ್ನು ಹೊರತು ಪಡಿಸಿ ಉಳಿದ 97 ಮಂದಿಗೆ ಜಾಮೀನು ಮಂಜೂರು ಮಾಡಿದೆ. ಅಲ್ಲದೆ, ಕೊಪ್ಪಳ ಜಿಲ್ಲಾ ನ್ಯಾಯಾಲಯದ ತೀರ್ಪಿಗೆ ಧಾರವಾಡ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಪತ್ರಿಯೊಬ್ಬರಿಂದ 50 ಸಾವಿರ ರೂ. ಬೆಲೆಯ ಬಾಂಡ್ ಹಾಗೂ ಒಬ್ಬರಿಂದ ಶ್ಯೂರಿಟಿ ಪಡೆದು ಜಾಮೀನು ನೀಡಲಾಗಿದ್ದು, ಇನ್ನೂ ಇದೇ ಪ್ರಕರಣದಲ್ಲಿ ಐದು ವರ್ಷ ಶಿಕ್ಷೆಗೆ ಗುರಿಯಾಗಿದ್ದ ಇಬ್ಬರು ಆರೋಪಿಗಳಿಗೂ ಜಾಮೀನು ಮಂಜೂರು ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಒಟ್ಟು 117 ಜನರು ಅಪರಾಧಿಗಳೆಂದು ಜಿಲ್ಲಾ ನ್ಯಾಯಾಲಯದ ಘೋಷಿಸಿತ್ತು. ಇದರಲ್ಲಿ ಕೆಲವರು ಮೃತರಾಗಿದ್ದರು. ಉಳಿದ 101 ಜನರಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿತ್ತು.

ಏನಿದು ಮರಕುಂಬಿ ಪ್ರಕರಣ:

2014ರ ಆಗಸ್ಟ್ 28ರಂದು ಗಂಗಾವತಿಯ ಚಿತ್ರಮಂದಿರವೊಂದರಲ್ಲಿ ‘ಪವರ್’ ಸಿನಿಮಾ ನೋಡಲು ಟಿಕೆಟ್ ಪಡೆಯುವಾಗ ದಲಿತರು ಹಾಗೂ ಸವರ್ಣೀಯರ ನಡುವೆ ಮಾತಿನ ಚಕಮಕಿಯು ಸಂಘರ್ಷಕ್ಕೆ ತಿರುಗಿತ್ತು.

ಈ ಪ್ರಕರಣದ ಕುರಿತು ಭೀಮೇಶ ಎಂಬುವವರು “ನಮ್ಮ ಗ್ರಾಮದ ಸವರ್ಣೀಯ ಮಂಜುನಾಥ ಈಳಿಗೇರ ಹಾಗೂ ಇತರರು ಟಿಕೆಟ್ ಪಡೆಯುವಾಗ ಯಾರೊ ವ್ಯಕ್ತಿಗಳ ಜೊತೆ ಜಗಳ ಮಾಡಿಕೊಂಡಿದ್ದರು. ಆಗ ಅವರ ಮೇಲೆ ಹಲ್ಲೆಯಾಗಿತ್ತು. ಅದನ್ನು ನಾವೇ ಮಾಡಿಸಿದ್ದೇವೆ ಎಂದು ತಪ್ಪು ತಿಳಿದುಕೊಂಡು ಮಂಜುನಾಥ ಅವರು ಗ್ರಾಮಕ್ಕೆ ಸವರ್ಣೀಯರನ್ನು ಕರೆದುಕೊಂಡು ಬಂದು ನಮ್ಮ ಸಮುದಾಯದ ಜನರ ಜಾತಿನಿಂದನೆ ಮಾಡಿ ಹಲ್ಲೆ ನಡೆಸಿದ್ದ. ಗ್ರಾಮದಲ್ಲಿ ಗುಡಿಸಲುಗಳಿಗೆ ಬೆಂಕಿಯನ್ನೂ ಹಚ್ಚಲಾಗಿತ್ತು” ಎಂದು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ನಂತರ ದೊಡ್ಡ ಹಿಂಸಾಚಾರವೇ ನಡೆದು, ಎರಡೂ ಗುಂಪಿನ ಜನ ಗಾಯಗೊಂಡು ಆಸ್ಪತ್ರೆ ಸೇರಿದ್ದರು.

ದಲಿತರಿಗೆ ಗ್ರಾಮದ ಹೋಟೆಲ್‌ಗಳಲ್ಲಿ ಪ್ರವೇಶವಿರಲಿಲ್ಲ. ಹೋಟೆಲ್‌ಗಳಲ್ಲಿ ಪ್ರತ್ಯೇಕ ಲೋಟ, ಅಂಗಡಿಗಳಲ್ಲಿ ಕ್ಷೌರ ನಿರಾಕರಣೆ, ದಿನಸಿ ಸಾಮಾನು ಕೊಡಲು ನಿರಾಕರಿಸಿದ ಘಟನೆಗಳು ಜರುಗಿದವು.

ಈ ವೇಳೆ ಹಲವು ಸಂಘಟನೆಗಳು ಮಧ್ಯಪ್ರವೇಶಿಸಿ ಮಾತುಕತೆಯಿಂದ ಸಮಸ್ಯೆ ಪರಿಹರಿಸಿಕೊಳ್ಳುವಂತೆ ಬುದ್ಧಿ ಹೇಳಿದ್ದವು. ಅಧಿಕಾರಿಗಳ ದಂಡು ಗ್ರಾಮಕ್ಕೆ ಬಂದು ಶಾಂತಿ ಸಭೆ ನಡೆಸಿ ಸಂಧಾನ ಮಾಡಿ ದಲಿತರಿಗೆ ಹೋಟೆಲ್, ಕ್ಷೌರದಂಗಡಿಗಳಲ್ಲಿ ಅವಕಾಶ ಕಲ್ಪಿಸಿತು.

ಈ ಪ್ರಕರಣದ ಕುರಿತು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶದಾದ ಸಿ.ಚಂದ್ರಶೇಖರ್‌ ಅವರು 9 ವರ್ಷಗಳ ನಂತರ ಆರೋಪ ಸಾಬೀತು ನಿರ್ಧಾರ ಪ್ರಕಟಿಸಿದ್ದರು. 101 ಜನರ ಅಪರಾಧಿಗಳಲ್ಲಿ 98 ಜನರಿಗೆ ಜೀವಾವಧಿ ಶಿಕ್ಷೆ, 5 ಸಾವಿರ ದಂಡ, ಇನ್ನೂ ಮೂವರು ಅಪರಾಧಿಗಳು ಕೂಡಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ್ದರಿಂದ ಜಾತಿ ನಿಂದನೆ ಕಾಯ್ದೆ ಅನ್ವಯವಾಗದ ಕಾರಣ 3 ಜನರಿಗೆ 5 ವರ್ಷ ಜೈಲು ಶಿಕ್ಷೆ, 2 ಸಾವಿರ ರೂ. ದಂಡ ವಿಧಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X