Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಕುರೇಕುಪ್ಪದ 23 ವಾರ್ಡ್‌ಗಳಿಗೂ ಪಟ್ಟಣದ...

ಕುರೇಕುಪ್ಪದ 23 ವಾರ್ಡ್‌ಗಳಿಗೂ ಪಟ್ಟಣದ ಹೆಸರೇ ಇರಲಿ: ಕರವೇ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ19 Oct 2026 9:19 PM IST
share
ಕುರೇಕುಪ್ಪದ 23 ವಾರ್ಡ್‌ಗಳಿಗೂ ಪಟ್ಟಣದ ಹೆಸರೇ ಇರಲಿ: ಕರವೇ ಒತ್ತಾಯ

ಸಂಡೂರು / ಬಳ್ಳಾರಿ : ತಾಲೂಕಿನ ಕುರೇಕುಪ್ಪ ಪಟ್ಟಣದ 23 ವಾರ್ಡ್‌ಗಳ ಅಧಿಕೃತ ಗುರುತನ್ನು “ಕುರೇಕುಪ್ಪ” ಎಂದು ಏಕರೂಪಗೊಳಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕುರೇಕುಪ್ಪ ಘಟಕ ಒತ್ತಾಯಿಸಿದೆ.

ಈ ಕುರಿತು ಬಳ್ಳಾರಿ ಜಿಲ್ಲಾಧಿಕಾರಿಗಳು, ಸಹಾಯಕ ಆಯುಕ್ತರು (ಎಸಿ), ಜಿಲ್ಲಾ ನಗರಾಭಿವೃದ್ಧಿ ಕೋಶದ (DUDC) ಯೋಜನಾ ನಿರ್ದೇಶಕರು ಹಾಗೂ ಕುರೇಕುಪ್ಪ ಪುರಸಭೆಯ ಮುಖ್ಯಾಧಿಕಾರಿಗಳಿಗೆ ಪ್ರತ್ಯೇಕವಾಗಿ ಮನವಿ ಸಲ್ಲಿಸಲಾಗಿದೆ. ಆದರೆ ಮನವಿ ಸಲ್ಲಿಸಿ ಸುಮಾರು ನಾಲ್ಕು ತಿಂಗಳು ಕಳೆದರೂ ಯಾವುದೇ ಸ್ಪಷ್ಟವಾದ ಅಂತಿಮ ಕ್ರಮ ಕೈಗೊಂಡಿಲ್ಲ ಎಂದು ಸಂಘಟನೆಯ ಪದಾಧಿಕಾರಿಗಳು ತಿಳಿಸಿದ್ದಾರೆ.

ಕುರೇಕುಪ್ಪ ಪಟ್ಟಣದ ವ್ಯಾಪ್ತಿಯಲ್ಲಿ ವಿಜಯ ವಿಠಲ ನಗರ, ಶಂಕರಗುಡ್ಡ ಕಾಲೋನಿ, ಜಿಂದಾಲ್ ಟೌನ್‌ಶಿಪ್ ಸೇರಿದಂತೆ ವಿವಿಧ ಸ್ಥಳೀಯ ಪ್ರದೇಶಗಳ ಹೆಸರುಗಳು ಇರಬಹುದು. ಆದರೆ ಪಟ್ಟಣದ ಅಧಿಕೃತ ಗುರುತು ಮಾತ್ರ “ಕುರೇಕುಪ್ಪ” ಎಂದೇ ಇರಬೇಕು ಎಂಬುದು ಕರವೇಯ ಪ್ರಮುಖ ಬೇಡಿಕೆಯಾಗಿದೆ.

ಪುರಸಭೆಯ 23 ವಾರ್ಡ್‌ಗಳನ್ನು ಅವುಗಳ ಸಂಖ್ಯೆಗಳ ಮೂಲಕ ಗುರುತಿಸಬೇಕು. ಕುರೇಕುಪ್ಪ ಪಟ್ಟಣದ ವಾರ್ಡ್‌ಗಳಿಗೆ ವಿವಿಧ ಹೆಸರುಗಳ ಮೂಲಕ ಮತ್ತು “ತೋರಣಗಲ್ಲು ಆರ್‌ಎಸ್‌” ಎಂಬ ಹೆಸರನ್ನು ಬಳಸಬಾರದು. ಬದಲಾಗಿ ಎಲ್ಲ ವಾರ್ಡ್‌ಗಳ ಅಧಿಕೃತ ದಾಖಲಾತಿಗಳಲ್ಲಿಯೂ ಕುರೇಕುಪ್ಪ ಪಟ್ಟಣದ ಹೆಸರನ್ನು ಏಕರೂಪವಾಗಿ ನಮೂದಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆ ಆಗ್ರಹಿಸಿದೆ.

ಪಟ್ಟಣದ ಹೆಸರು ಮತ್ತು ಗುರುತನ್ನು ಉಳಿಸುವ ನಿಟ್ಟಿನಲ್ಲಿ ಸಲ್ಲಿಸಿರುವ ಮನವಿಯನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ಅಗತ್ಯ ಪರಿಶೀಲನೆ ನಡೆಸಿ ಶೀಘ್ರದಲ್ಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕರವೇ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕುರೇಕುಪ್ಪ ಘಟಕದ ಅಧ್ಯಕ್ಷ ಮಲ್ಲಯ್ಯ, ಪ್ರಧಾನ ಕಾರ್ಯದರ್ಶಿ ಹೊನ್ನೂರು ಸ್ವಾಮಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

KurekuppaKarave
share
ವಾರ್ತಾಭಾರತಿ
ವಾರ್ತಾಭಾರತಿ
Next Story
X