Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಕುರುಗೋಡು | ಬಾಲ್ಯ ವಿವಾಹ ತಡೆಗೆ ಎಲ್ಲರೂ...

ಕುರುಗೋಡು | ಬಾಲ್ಯ ವಿವಾಹ ತಡೆಗೆ ಎಲ್ಲರೂ ಕೈಜೋಡಿಸಿ: ರೇಣುಕಾ

ಪೀರಾಸಾಬ್/ವಾರ್ತಾಭಾರತಿಪೀರಾಸಾಬ್/ವಾರ್ತಾಭಾರತಿ18 Nov 2026 6:13 PM IST
share
ಕುರುಗೋಡು | ಬಾಲ್ಯ ವಿವಾಹ ತಡೆಗೆ ಎಲ್ಲರೂ ಕೈಜೋಡಿಸಿ: ರೇಣುಕಾ

ಕುರುಗೋಡು: ಬಾಲ್ಯ ವಿವಾಹ ನಿಷೇಧ ಕಾಯ್ದೆಯು 2007ರ ಜನವರಿ 11ರಿಂದ ಜಾರಿಗೆ ಬಂದಿದ್ದು, ಹುಡುಗಿಗೆ 18 ವರ್ಷ ಹಾಗೂ ಹುಡುಗನಿಗೆ 21 ವರ್ಷ ತುಂಬುವ ಮೊದಲು ನಡೆಯುವ ವಿವಾಹವನ್ನು ಬಾಲ್ಯ ವಿವಾಹ ಎಂದು ಪರಿಗಣಿಸಲಾಗುತ್ತದೆ ಎಂದು ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ರೇಣುಕಾ ಹೇಳಿದರು.

ತಾಲೂಕಿನ ಗೆಣಿಕೆಹಾಳ್ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ‘ಹದಿಹರೆಯದವರ ಆರೋಗ್ಯ ಮತ್ತು ಕ್ಷೇಮ ದಿನಾಚರಣೆ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ’ ಕುರಿತ ವಿಶೇಷ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬಾಲ್ಯ ವಿವಾಹ ನಿಷೇಧ ಕಾಯ್ದೆಯನ್ನು ಉಲ್ಲಂಘಿಸಿದರೆ ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ಒಂದು ಲಕ್ಷ ರೂ.ವರೆಗೆ ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶವಿದೆ. ಬಾಲ್ಯ ವಿವಾಹಕ್ಕೆ ಪ್ರೋತ್ಸಾಹ ನೀಡುವ ಪೋಷಕರು, ಪುರೋಹಿತರು ಹಾಗೂ ವಿವಾಹಕ್ಕೆ ಸಹಕರಿಸಿದವರೂ ಶಿಕ್ಷೆಗೆ ಒಳಗಾಗುತ್ತಾರೆ. ತುರ್ತು ಸಂದರ್ಭದಲ್ಲಿ 1098 ಮಕ್ಕಳ ಸಹಾಯವಾಣಿ ಅಥವಾ 112 ತುರ್ತು ಸೇವೆಗೆ ಕರೆ ಮಾಡಿ ದೂರು ನೀಡಬಹುದು ಎಂದು ತಿಳಿಸಿದರು.

ಗೆಣಿಕೆಹಾಳ್ ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ರೇಣುಕಾ ಮಾತನಾಡಿ, ಬಾಲ್ಯ ವಿವಾಹದಿಂದ ಕಿಶೋರಿಯರಲ್ಲಿ ರಕ್ತಹೀನತೆ, ತಾಯಿ ಮತ್ತು ಶಿಶು ಮರಣ, ಅವಧಿಪೂರ್ವ ಹಾಗೂ ಕಡಿಮೆ ತೂಕದ ಮಕ್ಕಳ ಜನನ ಸೇರಿದಂತೆ ಗಂಭೀರ ಆರೋಗ್ಯ ಸಮಸ್ಯೆಗಳು ಎದುರಾಗುತ್ತವೆ. ಹುಡುಗರಿಗೆ 23 ವರ್ಷ ಹಾಗೂ ಹೆಣ್ಣುಮಕ್ಕಳಿಗೆ 20 ವರ್ಷ ತುಂಬಿದ ನಂತರ ಮದುವೆಯಾಗುವುದರಿಂದ ಅವರು ಬೌದ್ಧಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಿರಲು ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿ ಷಡಕ್ಷರಿಯ್ಯ, ಆಪ್ತ ಸಮಾಲೋಚಕ ಮಹಬೂಬ್ ಭಾಷಾ, ಶಾಲೆಯ ಮುಖ್ಯಗುರು ಹುಸೇನ್ ಭಾಷಾ, ಸಮುದಾಯ ಆರೋಗ್ಯ ಅಧಿಕಾರಿ ಸೈಯದ್ ಸುಲ್ತಾನ, ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

Tags

BallariChild marriageKurugodu
share
ಪೀರಾಸಾಬ್/ವಾರ್ತಾಭಾರತಿ
ಪೀರಾಸಾಬ್/ವಾರ್ತಾಭಾರತಿ

ಬೂದುಗುಪ್ಪ ಪೀರಾಸಾಬ್ ಅವರು ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ವೆಬ್ ಪತ್ರಿಕೋದ್ಯಮದ ಜೊತೆಗೆ ಸಾಮಾಜಿಕ ಹಾಗೂ ರಾಜಕೀಯ ವಿಷಯಗಳ ವರದಿಗಾರಿಕೆಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿಯಲ್ಲಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ

Next Story
X