ಬಳ್ಳಾರಿ RTO ಕಚೇರಿ ಮೇಲೆ ಲೋಕಾಯುಕ್ತ ದಾಳಿ, ಪರಿಶೀಲನೆ

ಬಳ್ಳಾರಿ: ನಗರದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ಗುರುವಾರ ದಿಢೀರ್ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸಿದರು.
ಬೆಂಗಳೂರಿನ ಲೋಕಾಯುಕ್ತ ಡಿವೈಎಸ್ಪಿ ಶ್ರೀನಿವಾಸ ನೇತೃತ್ವದ ಅಧಿಕಾರಿಗಳ ತಂಡ ಆರ್ ಟಿಒ ಕಚೇರಿಯಲ್ಲಿರುವ ಕಡತಗಳು, ದಾಖಲೆಗಳು ಹಾಗೂ ಆಡಳಿತಾತ್ಮಕ ವ್ಯವಹಾರಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಪರಿಶೀಲಿಸುತ್ತಿದ್ದು, ಸಿಬ್ಬಂದಿಯಿಂದ ಅಗತ್ಯ ಮಾಹಿತಿ ಪಡೆಯುತ್ತಿದ್ದಾರೆ.
Next Story




