ಬಳ್ಳಾರಿ|ಕರವೇ ಕಂಪ್ಲಿ ತಾಲೂಕು ಘಟಕದ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ನೇಮಕ

ಬಳ್ಳಾರಿ: ಕರ್ನಾಟಕ ರಕ್ಷಣಾ ವೇದಿಕೆ(ನಾರಾಯಣಗೌಡ ಬಣ) ಕಂಪ್ಲಿ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಬಳೆ ಮಲ್ಲಿಕಾರ್ಜುನ ನೇಮಕಗೊಂಡಿದ್ದಾರೆ.
ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಇವರ ಮಾರ್ಗದರ್ಶನದ ಮೇರೆಗೆ ಹಾಗೂ ರಾಜ್ಯ ಉಪಾಧ್ಯಕ್ಷ ಚಾನಾಳ್ ಶೇಖರ್ ಇವರ ಸೂಚನೆಯ ಮೇರೆಗೆ ಕರ್ನಾಟಕ ರಕ್ಷಣಾ ವೇದಿಕೆಯ ಕಂಪ್ಲಿ ವಿಧಾನಸಭಾ ಕ್ಷೇತ್ರದ ಕಂಪ್ಲಿ ನೂತನ ತಾಲೂಕು ಘಟಕದ ಅಧ್ಯಕ್ಷರನ್ನಾಗಿ ಮಲ್ಲಿಕಾರ್ಜುನ ಅವರನ್ನು ನೇಮಿಸಿ ಜಿಲ್ಲಾಧ್ಯಕ್ಷರಾದ ಅಂಗಡಿ ಶಂಕ್ರಪ್ಪ ಆದೇಶ ಹೊರಡಿಸಿದ್ದಾರೆ.
ನೂತನ ತಾಲೂಕಾಧ್ಯಕ್ಷ ಬಳೆ ಮಲ್ಲಿಕಾರ್ಜುನ ಮಾತನಾಡಿ, ಕಂಪ್ಲಿ ತಾಲೂಕು ಅಧ್ಯಕ್ಷ ಸ್ಥಾನ ನೀಡಿರುವುದು ಸಂತಸದ ಜೊತೆಗೆ ಇನ್ನಷ್ಟು ಸೇವೆಗೆ ಅವಕಾಶ ಮಾಡಿಕೊಟ್ಟಿದೆ. ಜಿಲ್ಲಾ ಪದಾಧಿಕಾರಿಗಳು, ಸ್ಥಳೀಯ ಮುಖಂಡರ, ಪದಾಧಿಕಾರಿಗಳ ಸಹಕಾರದೊಂದಿಗೆ ನಮ್ಮ ಕನ್ನಡ ನಾಡು, ನುಡಿ, ಜಲ ಸಂರಕ್ಷಣೆಗಾಗಿ ದುಡಿಯುತ್ತೇನೆ ಎಂದು ಹೇಳಿದ್ದಾರೆ.
Next Story





