Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Sandur | ಸ್ಥಳೀಯ ಲಾರಿಗಳಿಗೆ ಆದ್ಯತೆ...

Sandur | ಸ್ಥಳೀಯ ಲಾರಿಗಳಿಗೆ ಆದ್ಯತೆ ನೀಡುವಂತೆ ಗಣಿ ಲಾರಿ ಮಾಲಕರ ಸಂಘದಿಂದ ಮನವಿ

ವಾರ್ತಾಭಾರತಿವಾರ್ತಾಭಾರತಿ11 May 2026 5:43 PM IST
share
Sandur | ಸ್ಥಳೀಯ ಲಾರಿಗಳಿಗೆ ಆದ್ಯತೆ ನೀಡುವಂತೆ ಗಣಿ ಲಾರಿ ಮಾಲಕರ ಸಂಘದಿಂದ ಮನವಿ

ಸಂಡೂರು : ತಾಲೂಕಿನ ಧರ್ಮಾಪುರ ಗ್ರಾಮದ ಸಮೀಪದ ನರಸಿಂಹ ಐರನ್ ಓರ್ ಗಣಿ ಕಂಪನಿ ಹಾಗೂ ಸಿದ್ದಾಪುರ ಗ್ರಾಮದ ಬಳಿಯ ಕರಡಿಕೊಳ್ಳಿ ಐರನ್ ಓರ್ ಗಣಿ ಕಂಪನಿಗಳಿಂದ ಎಂಎಸ್‌ಪಿಎಲ್ ಬಲ್ಡೋಟ ಹಾಲವರ್ತಿ, ಕೊಪ್ಪಳ ಕಾರ್ಖಾನೆ ಮತ್ತು ವೈಟಿಜಿ ಎಂಎಸ್‌ಪಿಎಲ್ ಪ್ಲಾಂಟ್‌ಗೆ ನಡೆಯುತ್ತಿರುವ ಅದಿರು ಸಾಗಾಣಿಕೆಯಲ್ಲಿ ಹೊರ ಜಿಲ್ಲೆಗಳ 14 ಹಾಗೂ 16 ಚಕ್ರದ ಲಾರಿಗಳನ್ನು ಬಳಸುತ್ತಿರುವುದನ್ನು ತಕ್ಷಣ ನಿಲ್ಲಿಸಿ, ಸ್ಥಳೀಯ 10 ಹಾಗೂ 12 ಚಕ್ರದ ಲಾರಿಗಳಿಗೆ ಆದ್ಯತೆ ನೀಡುವಂತೆ ಗಣಿ ಲಾರಿ ಮಾಲೀಕರ ಸಂಘ ಸಂಡೂರು ತಾಲೂಕು (ರಿ) ವತಿಯಿಂದ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಸಂಘದ ಅಧ್ಯಕ್ಷ ಜೆ. ಬಾಬುನಾಯ್ಕ ಅವರ ನೇತೃತ್ವದಲ್ಲಿ ಸಲ್ಲಿಸಲಾದ ಮನವಿಯಲ್ಲಿ, ಕಳೆದ ಒಂದು ವರ್ಷದಿಂದ ಹೊರ ಜಿಲ್ಲೆಗಳ ಭಾರೀ ಗಾತ್ರದ ಲಾರಿಗಳ ಮೂಲಕ ಅದಿರು ಸಾಗಾಣಿಕೆ ನಡೆಯುತ್ತಿದ್ದು, ಇದರಿಂದ ಟ್ರಾಫಿಕ್ ಜಾಮ್, ಅಪಘಾತಗಳ ಸಂಭವ, ರಸ್ತೆಗಳಲ್ಲಿ ಧೂಳು ಹೆಚ್ಚಳ ಸೇರಿದಂತೆ ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗುತ್ತಿದೆ ಎಂದು ಆರೋಪಿಸಲಾಗಿದೆ.

ರೈತರು, ವಿದ್ಯಾರ್ಥಿಗಳು, ಆಂಬ್ಯುಲೆನ್ಸ್ ಸಂಚಾರ ಹಾಗೂ ಸಾಮಾನ್ಯ ಜನರ ಓಡಾಟಕ್ಕೂ ಸಮಸ್ಯೆಯಾಗುತ್ತಿದ್ದು, ಸ್ಥಳೀಯರ ಬದುಕಿನ ಮೇಲೂ ದುಷ್ಪರಿಣಾಮ ಬೀರುತ್ತಿದೆ ಎಂದು ಸಂಘದ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದರು.

ಸಂಡೂರು, ಬಳ್ಳಾರಿ, ಹೊಸಪೇಟೆ ಹಾಗೂ ಕೊಪ್ಪಳ ಭಾಗಗಳಲ್ಲಿ ಸುಮಾರು 7 ಸಾವಿರಕ್ಕೂ ಹೆಚ್ಚು 10 ಮತ್ತು 12 ಚಕ್ರದ ಲಾರಿಗಳಿದ್ದು, 50 ಸಾವಿರಕ್ಕೂ ಹೆಚ್ಚು ಕುಟುಂಬಗಳು ಲಾರಿ ಉದ್ಯಮವನ್ನೇ ಅವಲಂಬಿಸಿ ಜೀವನ ಸಾಗಿಸುತ್ತಿವೆ. ಗಣಿ ಪ್ರದೇಶದ ಅನೇಕರು ಚಾಲಕರು ಹಾಗೂ ಕ್ಲೀನರ್‌ಗಳಾಗಿ ಕೆಲಸ ಆರಂಭಿಸಿ ನಂತರ ಸ್ವಂತ ಲಾರಿಗಳನ್ನು ಖರೀದಿಸಿ ಜೀವನ ಕಟ್ಟಿಕೊಂಡಿದ್ದಾರೆ. ಆದರೆ ಇದೀಗ ಹೊರ ಜಿಲ್ಲೆಗಳ ಲಾರಿಗಳಿಗೆ ಹೆಚ್ಚಿನ ಅವಕಾಶ ನೀಡುತ್ತಿರುವುದು ಸ್ಥಳೀಯ ಲಾರಿ ಮಾಲೀಕರು ಹಾಗೂ ಚಾಲಕರ ಬದುಕಿಗೆ ದೊಡ್ಡ ಹೊಡೆತವಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಗಣಿ ಕಂಪನಿಗಳಿಗೆ ಲೀಸ್ ನೀಡುವ ಸಂದರ್ಭದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯಲ್ಲಿ ಸ್ಥಳೀಯ ಲಾರಿಗಳಿಗೆ ಸಾಗಾಣಿಕೆ ಅವಕಾಶ ಕಲ್ಪಿಸುವುದು, ಸ್ಥಳೀಯ ಯುವಕರಿಗೆ ಉದ್ಯೋಗ ಹಾಗೂ ಟ್ರಾನ್ಸ್‌ಪೋರ್ಟ್ ಕೆಲಸ ನೀಡುವ ಭರವಸೆ ನೀಡಲಾಗಿತ್ತು. ಆದರೆ ಈಗ ಆ ಭರವಸೆಗಳನ್ನು ಕಡೆಗಣಿಸಿ ಹೊರ ಜಿಲ್ಲೆಗಳ ಲಾರಿಗಳಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಸಂಘ ಅಸಮಾಧಾನ ವ್ಯಕ್ತಪಡಿಸಿದೆ.

ಆದುದರಿಂದ ಹೊರ ಜಿಲ್ಲೆಗಳ 14 ಹಾಗೂ 16 ಚಕ್ರದ ಲಾರಿಗಳ ಮೂಲಕ ನಡೆಯುತ್ತಿರುವ ಅದಿರು ಸಾಗಾಣಿಕೆಯನ್ನು ತಕ್ಷಣ ನಿಲ್ಲಿಸಿ, ಸ್ಥಳೀಯ ಲಾರಿಗಳಿಗೆ ಅವಕಾಶ ನೀಡುವುದರ ಜೊತೆಗೆ ನ್ಯಾಯಸಮ್ಮತ ಹಾಗೂ ವೈಜ್ಞಾನಿಕ ದರ ನಿಗದಿ ಮಾಡಿಸಬೇಕು ಎಂದು ಒತ್ತಾಯಿಸಲಾಗಿದೆ.

ಮನವಿಯನ್ನು ಪರಿಶೀಲಿಸಿ ಏಳು ದಿನಗಳೊಳಗಾಗಿ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಕಾನೂನುಬದ್ಧವಾಗಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಸಂಘ ಎಚ್ಚರಿಕೆ ನೀಡಿದೆ.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಜಿ. ಸಿದ್ದಪ್ಪ, ಉಪಾಧ್ಯಕ್ಷ ಕೆ. ಹೊಳಿಯಪ್ಪ, ಕೆ.ಕೆ.ದಾದಾಖಲಂದರ್, ಚಂದ್ರಶೇಖರ್ ಎಚ್.ಒ., ಸ್ವಾಮಿ (ಒಟಿಎಸ್), ಕುಂಬಾರ್ ಶಿವಮೂರ್ತಿ, ಸಿದ್ದಪ್ಪ, ಮಂಜುನಾಯ್ಕ, ಎಂ.ಬಸವರಾಜ್, ಎಚ್.ಜಂಬಯ್ಯ, ಹೆಚ್. ಹುಸೇನ್ ಬಾಷಾ, ಜಿ.ಸಿ.ಮದ್ದಾನಸ್ವಾಮಿ, ಟಿ.ಜಿ.ವಿಜಯ್ ಕುಮಾರ್, ಪ್ರಧಾನ ಕಾರ್ಯದರ್ಶಿ ಬಿ.ಜಿ.ಮಲ್ಲಿಕಾರ್ಜುನ ಸೇರಿದಂತೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Tags

Sandur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X