ಬಳ್ಳಾರಿ ಜಿಲ್ಲೆಯ ವಿವಿಧೆಡೆ ಮೊಹರಂ ಹಬ್ಬ ನಿಷೇಧ : ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ

ಬಳ್ಳಾರಿ : ಜಿಲ್ಲೆಯ ವಿವಿಧ ತಾಲ್ಲೂಕಿನ ಕೆಲ ಗ್ರಾಮಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಜೂ.27 ರಿಂದ ಜು.7 ರವರೆಗೆ ಜರುಗುವ ಮೊಹರಂ ಹಬ್ಬದ ಆಚರಣೆಯನ್ನು ನಿಷೇಧಿಸಿ ಎಂದು ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶ ಹೊರಡಿಸಿದ್ದಾರೆ.
ಮೊಹರಂ ಹಬ್ಬದ ಆಚರಣೆಯ ಸಂದರ್ಭದಲ್ಲಿ ವಿವಿಧ ತಾಲ್ಲೂಕುಗಳ ಕೆಲ ಗ್ರಾಮಗಳಲ್ಲಿ ಲಕ ಕಾರಣಗಳಿಂದ ಗಲಾಟೆಗಳು ಸಂಭವಿಸಿದ ಹಿನ್ನಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಮೊಹರಂ ಆಚರಿಸುವ ಸಂದರ್ಭದಲ್ಲಿ ಶಾಂತಿ ಮತ್ತು ಸುವ್ಯಸ್ಥೆಗೆ ಧಕ್ಕೆ ಉಂಟಾಗುವ ಬಗ್ಗೆ ವರದಿಗಳು ಇರುವುದರಿಂದ ಮುಂಜಾಗೃತ ಕ್ರಮವಾಗಿ ಜಿಲ್ಲೆಯ ವಿವಿಧೆಡೆ ಮೊಹರಂ ಹಬ್ಬ ನಿಷೇಧ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಮೊಹರಂ ಹಬ್ಬ ನಿಷೇಧಿಸಲ್ಪಟ್ಟ ಗ್ರಾಮಗಳು:
ಬಳ್ಳಾರಿಯ ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ತಾಳೂರು ರಸ್ತೆಯ ಕನ್ನಡ ನಗರ ಮುಖ್ಯ ರಸ್ತೆಯ (ನ್ಯಾಯಾಧೀಶರ ವಸತಿಗೃಹ ಕಾಂಪೌಂಡ್ ಪಕ್ಕದಲ್ಲಿ) ಮಹಾನಂದಿಕೊಟ್ಟ ಒಳಗಡೆ.
ಸಿರುಗುಪ್ಪ ಪೊಲೀಸ್ ಠಾಣೆ ವ್ಯಾಪ್ತಿಯ ಕೆ.ಸೂಗೂರು, ಮುದೇನೂರು, ಹೀರೆಹಾಳ್, ನಾಡಂಗ, ಬಂಡ್ರಾಳ್, ದೇಶನೂರು, ಕೆ.ಬೆಳಗಲ್, ಅಲಬನೂರು ಗ್ರಾಮಗಳು. ತೆಕ್ಕಲಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ ತೆಕ್ಕಲಕೋಟೆ, ಹಳೇಕೋಟೆ, ಉಪ್ಪಾರಹೊಸಳ್ಳಿ, ಉಡೇಗೋಳ, ಅರಳಿಗನೂರು ಗ್ರಾಮಗಳು.
ಸಿರಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಸಿರಿಗೇರಿ, ಕೂರಿಗನೂರು, ತಾಳೂರು, ಕರೂರು ಗ್ರಾಮಗಳು. ಪಿಡಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅಸುಂಡಿ ಗ್ರಾಮ.
ಕಂಪ್ಲಿ ಪೊಲೀಸ್ ಠಾಣೆ ವ್ಯಾಪ್ತಿಯ ನಂ.15-ಗೋನಾಳು ಗ್ರಾಮದಲ್ಲಿ ನಿಷೇಧಿಸಲಾಗಿದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.