Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. SIR ಯಶಸ್ವಿಗೆ ಅಧಿಕಾರಿಗಳ ಸಮರ್ಪಿತ...

SIR ಯಶಸ್ವಿಗೆ ಅಧಿಕಾರಿಗಳ ಸಮರ್ಪಿತ ಕಾರ್ಯ ಅಗತ್ಯ: ಬಳ್ಳಾರಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್

ವಾರ್ತಾಭಾರತಿವಾರ್ತಾಭಾರತಿ12 Jun 2026 12:18 AM IST
share
SIR ಯಶಸ್ವಿಗೆ ಅಧಿಕಾರಿಗಳ ಸಮರ್ಪಿತ ಕಾರ್ಯ ಅಗತ್ಯ: ಬಳ್ಳಾರಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್

ಸಂಡೂರು/ಬಳ್ಳಾರಿ: ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಕಾರ್ಯವನ್ನು ನಿಖರವಾಗಿ ಹಾಗೂ ಪಾರದರ್ಶಕವಾಗಿ ಜಾರಿಗೊಳಿಸಲು ಮತಗಟ್ಟೆ ಅಧಿಕಾರಿಗಳು ಮತ್ತು ಮತಗಟ್ಟೆ ಮೇಲ್ವಿಚಾರಕರು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಬಳ್ಳಾರಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ನಾಗೇಂದ್ರ ಪ್ರಸಾದ್ ಸೂಚಿಸಿದರು.

ಪಟ್ಟಣದ ಬಳ್ಳಾರಿ ರಸ್ತೆಯಲ್ಲಿರುವ ಕುಮಾರಸ್ವಾಮಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಆಯೋಜಿಸಲಾಗಿದ್ದ ಸಂಡೂರು ವಿಧಾನಸಭಾ ಕ್ಷೇತ್ರದ ಮತಗಟ್ಟೆ ಅಧಿಕಾರಿಗಳು ಹಾಗೂ ಮತಗಟ್ಟೆ ಮೇಲ್ವಿಚಾರಕರಿಗೆ ಚುನಾವಣಾ ಆಯೋಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಶೇಷ ತೀವ್ರ ಪರಿಷ್ಕರಣೆ (SIR) ತರಬೇತಿ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಅಗತ್ಯ ಮಾರ್ಗದರ್ಶನ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯ ಚುನಾವಣಾ ಆಯೋಗವು ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮದ ವೇಳಾಪಟ್ಟಿಯನ್ನು ಈಗಾಗಲೇ ಪ್ರಕಟಿಸಿದ್ದು, ಅದರಂತೆ ಪ್ರತಿಯೊಬ್ಬ ಮತಗಟ್ಟೆ ಅಧಿಕಾರಿ ತಮ್ಮ ವ್ಯಾಪ್ತಿಯ ಮನೆಗಳಿಗೆ ಭೇಟಿ ನೀಡಿ ಚುನಾವಣಾ ಆಯೋಗದಿಂದ ನೀಡಲಾಗುವ Enumeration ಫಾರಂಗಳನ್ನು ಮತದಾರರಿಗೆ ವಿತರಿಸಬೇಕು ಎಂದು ತಿಳಿಸಿದರು.

ಮತದಾರರಿಂದ ಭರ್ತಿ ಮಾಡಿದ ಅರ್ಜಿಗಳಿಗೆ ಸಹಿ ಪಡೆದು, ಸಂಬಂಧಿಸಿದ ಮಾಹಿತಿಯನ್ನು ತಮ್ಮ ಅಧಿಕೃತ ಲಾಗಿನ್ ವ್ಯವಸ್ಥೆಯಲ್ಲಿ ದಾಖಲಿಸುವ ಜವಾಬ್ದಾರಿ ಮತಗಟ್ಟೆ ಅಧಿಕಾರಿಗಳ ಮೇಲಿದೆ. ಮತದಾರರ ಪಟ್ಟಿಯ ಶುದ್ಧೀಕರಣದ ದೃಷ್ಟಿಯಿಂದ ಮರಣ ಹೊಂದಿದ ಮತದಾರರು ಹಾಗೂ ಶಾಶ್ವತವಾಗಿ ವಲಸೆ ಹೋಗಿರುವ ಮತದಾರರ ಮಾಹಿತಿಯನ್ನು ನಿಖರವಾಗಿ ಸಂಗ್ರಹಿಸಿ ದಾಖಲಿಸಬೇಕು ಎಂದು ಸೂಚಿಸಿದರು.

ಪ್ರತಿ ಮನೆಗೆ ಕನಿಷ್ಠ ಮೂರು ಬಾರಿ ಭೇಟಿ ನೀಡಿ ಮಾಹಿತಿ ಸಂಗ್ರಹಿಸಬೇಕು. ಯಾವುದೇ ಮತದಾರರು ಮಾಹಿತಿಯಿಂದ ವಂಚಿತರಾಗದಂತೆ ಎಚ್ಚರಿಕೆ ವಹಿಸಬೇಕು. ಮತದಾರರ ಪಟ್ಟಿಯು ಪ್ರಜಾಪ್ರಭುತ್ವದ ಮೂಲಾಧಾರವಾಗಿದ್ದು, ಅದರ ಪರಿಷ್ಕರಣೆ ಕಾರ್ಯದಲ್ಲಿ ಯಾವುದೇ ಲೋಪಕ್ಕೆ ಅವಕಾಶ ನೀಡಬಾರದು ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ತರಬೇತಿ ಕಾರ್ಯಕ್ರಮದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯದ ಅನುಷ್ಠಾನ, ಮನೆ-ಮನೆ ಸಮೀಕ್ಷೆ, ದಾಖಲೆ ಪರಿಶೀಲನೆ, ಡಿಜಿಟಲ್ ದಾಖಲಾತಿ, ಮತದಾರರ ಮಾಹಿತಿಯ ನವೀಕರಣ ಸೇರಿದಂತೆ ವಿವಿಧ ವಿಷಯಗಳ ಕುರಿತು ಅಧಿಕಾರಿಗಳಿಗೆ ಸಮಗ್ರ ಮಾಹಿತಿ ನೀಡಲಾಯಿತು.

ಕಾರ್ಯಕ್ರಮದಲ್ಲಿ 95 ಸಂಡೂರು ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿಯಾಗಿರುವ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಶ್ರೀ ಚಿದಾನಂದ, ಸಹಾಯಕ ಮತದಾರರ ನೋಂದಣಾಧಿಕಾರಿ ಹಾಗೂ ತಹಶೀಲ್ದಾರ್ ಶ್ರೀ ಜಿ. ಅನಿಲ್ ಕುಮಾರ್ ಉಪಸ್ಥಿತರಿದ್ದರು.

ಇದೇ ವೇಳೆ ಸಂಡೂರು ವಿಧಾನಸಭಾ ಕ್ಷೇತ್ರದ ಎಲ್ಲಾ ಮತಗಟ್ಟೆ ಅಧಿಕಾರಿಗಳು, ಮತಗಟ್ಟೆ ಮೇಲ್ವಿಚಾರಕರು, ಕಂದಾಯ ನಿರೀಕ್ಷಕರು ಹಾಗೂ ಚುನಾವಣೆ ಕಾರ್ಯದಲ್ಲಿ ತೊಡಗಿರುವ ಸಿಬ್ಬಂದಿ ತರಬೇತಿಯಲ್ಲಿ ಭಾಗವಹಿಸಿ ಮಾರ್ಗದರ್ಶನ ಪಡೆದರು.

Tags

BallariSIR
share
ವಾರ್ತಾಭಾರತಿ
ವಾರ್ತಾಭಾರತಿ
Next Story
X