Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಮಾಲಿನ್ಯ ನಿಯಂತ್ರಣ, ರೈತರ ಸ್ವಾವಲಂಬನೆ,...

ಮಾಲಿನ್ಯ ನಿಯಂತ್ರಣ, ರೈತರ ಸ್ವಾವಲಂಬನೆ, ಮಕ್ಕಳ ಶಿಕ್ಷಣ–ಆರೋಗ್ಯಕ್ಕೆ ಆದ್ಯತೆ: ಶಾಸಕಿ ಅನ್ನಪೂರ್ಣ ಈ. ತುಕಾರಾಂ

ವಾರ್ತಾಭಾರತಿವಾರ್ತಾಭಾರತಿ10 Aug 2026 8:52 PM IST
share
ಮಾಲಿನ್ಯ ನಿಯಂತ್ರಣ, ರೈತರ ಸ್ವಾವಲಂಬನೆ, ಮಕ್ಕಳ ಶಿಕ್ಷಣ–ಆರೋಗ್ಯಕ್ಕೆ ಆದ್ಯತೆ: ಶಾಸಕಿ ಅನ್ನಪೂರ್ಣ ಈ. ತುಕಾರಾಂ

ಸಂಡೂರು/ಬಳ್ಳಾರಿ: ತಾಲೂಕಿನ ಅಭಿವೃದ್ಧಿಯ ಹೆಸರಿನಲ್ಲಿ ಜನರ ಆರೋಗ್ಯ ಮತ್ತು ಪರಿಸರದ ಜತೆ ಯಾವುದೇ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ಕೈಗಾರಿಕೆಗಳು ವೈಜ್ಞಾನಿಕ ನಿಯಮಗಳನ್ನು ಪಾಲಿಸುವುದರ ಜತೆಗೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಾರ್ಯನಿರ್ವಹಿಸಬೇಕು. ಅಧಿಕಾರಿಗಳು ಕಚೇರಿಯಲ್ಲೇ ಕುಳಿತು ಕಡತಗಳ ಮೇಲೆ ಕೆಲಸ ತೋರಿಸದೆ, ಸ್ಥಳಕ್ಕೆ ತೆರಳಿ ಸಮಸ್ಯೆಗಳನ್ನು ಪರಿಶೀಲಿಸಿ ಪರಿಹಾರ ಕಲ್ಪಿಸಬೇಕು ಎಂದು ಸಂಡೂರು ಶಾಸಕಿ ಅನ್ನಪೂರ್ಣ ಈ. ತುಕಾರಾಂ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ತಾಲೂಕು ಪಂಚಾಯಿತಿ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಮಾಲಿನ್ಯ ನಿಯಂತ್ರಣ, ಕೃಷಿ, ಶಿಕ್ಷಣ, ಮಕ್ಕಳ ಆರೋಗ್ಯ, ಅಂಗನವಾಡಿ ಹಾಗೂ ಸಾಮಾಜಿಕ ಅನಿಷ್ಟ ಪದ್ಧತಿಗಳ ನಿರ್ಮೂಲನೆಗೆ ವಿಶೇಷ ಆದ್ಯತೆ ನೀಡುವಂತೆ ಸೂಚಿಸಿದರು.

ಜಿಂದಾಲ್ ಸೇರಿದಂತೆ ವಿವಿಧ ಕೈಗಾರಿಕೆಗಳು ಹಾಗೂ ಅದಿರು ಸಾಗಿಸುವ ವಾಹನಗಳಿಂದ ಉಂಟಾಗುತ್ತಿರುವ ವಾಯು ಮತ್ತು ಜಲ ಮಾಲಿನ್ಯದ ಕುರಿತು ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ, ಪರಿಸರ ಅಧಿಕಾರಿಗಳು ಕೈಗಾರಿಕೆಗಳಿಗೆ ನಿಯಮಿತವಾಗಿ ಭೇಟಿ ನೀಡಿ ಚಿಮಣಿ ಎತ್ತರ, ಹೊಗೆ ಹೊರಸೂಸುವಿಕೆ, ತ್ಯಾಜ್ಯ ನಿರ್ವಹಣೆ ಹಾಗೂ ಪರಿಸರ ನಿಯಮಗಳ ಪಾಲನೆಯನ್ನು ಕಟ್ಟುನಿಟ್ಟಾಗಿ ಪರಿಶೀಲಿಸಬೇಕು ಎಂದರು.

ದರೋಜಿ ಭಾಗದ ನೀರು ಕಲುಷಿತಗೊಂಡಿರುವ ಹಿನ್ನೆಲೆಯಲ್ಲಿ ಕೆರೆ ಹಾಗೂ ಸುತ್ತಮುತ್ತಲಿನ ಮಣ್ಣು ಮತ್ತು ನೀರಿನ ಮಾದರಿಗಳನ್ನು ಪ್ರಯೋಗಾಲಯದಲ್ಲಿ ಪರೀಕ್ಷಿಸಿ ಶೀಘ್ರ ವರದಿ ನೀಡಬೇಕು ಎಂದು ಸೂಚಿಸಿದ ಅವರು, ಕೈಗಾರಿಕೆಗಳನ್ನೂ ಸ್ಥಳಕ್ಕೆ ತೆರಳಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದರು.

ಕೃಷಿಯಲ್ಲಿ ಪರ್ಯಾಯ ಬೆಳೆಗಳಿಗೆ ಒತ್ತು

ಸಾಂಪ್ರದಾಯಿಕ ಬೆಳೆಗಳ ಜತೆಗೆ ತರಕಾರಿ, ಬಾಳೆ, ಮಾವು, ಕೊಕೋ, ತೆಂಗು ಸೇರಿದಂತೆ ತೋಟಗಾರಿಕಾ ಬೆಳೆಗಳನ್ನು ಬೆಳೆಯಲು ರೈತರನ್ನು ಪ್ರೋತ್ಸಾಹಿಸಬೇಕು. ‘ಮಾವು ಮೇಳ’ದಂತಹ ಕಾರ್ಯಕ್ರಮಗಳನ್ನು ಆಯೋಜಿಸಿ ರೈತರಿಗೆ ಅರಿವು ಮೂಡಿಸಬೇಕು. ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಹನಿ ನೀರಾವರಿ, ಸೋಲಾರ್ ಫೆನ್ಸಿಂಗ್ ಹಾಗೂ ಕೃಷಿ ಯಂತ್ರೋಪಕರಣಗಳ ಸಹಾಯಧನ ತಲುಪಿಸಿ ಸ್ವಾವಲಂಬಿಗಳನ್ನಾಗಿ ಮಾಡಬೇಕು ಎಂದು ಶಾಸಕಿ ಸೂಚಿಸಿದರು.

32,815 ಮಕ್ಕಳಿಗೆ ಪೌಷ್ಟಿಕ ಆಹಾರ

ತಾಲೂಕಿನ 32,815 ವಿದ್ಯಾರ್ಥಿಗಳು ವಿವಿಧ ಪೌಷ್ಟಿಕ ಆಹಾರ ಯೋಜನೆಗಳ ಫಲಾನುಭವಿಗಳಾಗಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಐ.ಆರ್. ಅಕ್ಕಿ ಸಭೆಗೆ ಮಾಹಿತಿ ನೀಡಿದರು. 169 ಸರ್ಕಾರಿ ಶಾಲೆಗಳ 26,209 ಮಕ್ಕಳಿಗೆ ರೂ. 13.38 ಕೋಟಿ ವೆಚ್ಚದಲ್ಲಿ ಮೂರು ವರ್ಷಗಳ ವಿಶೇಷ ಸಂಜೆ ಉಪಹಾರ ಯೋಜನೆ ಜಾರಿಯಲ್ಲಿದೆ. ತಾಲೂಕಿನ 94 ಶಾಲೆಗಳಿಗೆ ಅಕ್ಷಯಪಾತ್ರ ಸಂಸ್ಥೆಯ ಮೂಲಕ ಬಿಸಿಯೂಟ ಪೂರೈಕೆಯಾಗುತ್ತಿದೆ ಎಂದು ತಿಳಿಸಿದರು.

ಮಕ್ಕಳಿಗೆ ವಾರಕ್ಕೆ ಎರಡು ಪೀರಿಯಡ್ ಪುಸ್ತಕ ಓದಲು ಅವಕಾಶ, ದಿನನಿತ್ಯ ಪಾಠದ ಪುನರಾವರ್ತನೆ, ತಂಡ ಕಾರ್ಯ ಹಾಗೂ ನಾಯಕತ್ವ ಚಟುವಟಿಕೆಗಳನ್ನು ಉತ್ತೇಜಿಸಬೇಕು. ಜಾತಿ–ಧರ್ಮದ ಭೇದವಿಲ್ಲದೆ ಸೌಹಾರ್ದತೆ ಮತ್ತು ಮೌಲ್ಯಾಧಾರಿತ ಶಿಕ್ಷಣ ನೀಡಬೇಕು ಎಂದು ಶಾಸಕಿ ಶಿಕ್ಷಣ ಇಲಾಖೆಗೆ ಸೂಚಿಸಿದರು.

ಕ್ರೀಡೆಯಲ್ಲಿ ಪ್ರತಿಭೆ ಹೊಂದಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಖೋ-ಖೋ, ವಾಲಿಬಾಲ್, ಬಾಸ್ಕೆಟ್‌ಬಾಲ್, ಯೋಗ, ಚೆಸ್ ಸೇರಿದಂತೆ ವಿವಿಧ ಕ್ರೀಡೆಗಳಲ್ಲಿ ತರಬೇತಿ ನೀಡಿ ರಾಜ್ಯ, ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟಕ್ಕೆ ಪ್ರೋತ್ಸಾಹಿಸಬೇಕು ಎಂದರು.

ಶಾಲೆ ಬಿಡುವ ಮಕ್ಕಳ ಸಂಖ್ಯೆ ಶೂನ್ಯವಾಗಲಿ

ಶಾಲೆಯಿಂದ ಹೊರಗುಳಿಯುವ ಮಕ್ಕಳನ್ನು ತಡೆಯಲು ಆಗಸ್ಟ್‌ನಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕು. ಶಿಕ್ಷಣ ಇಲಾಖೆ, ಮಕ್ಕಳ ರಕ್ಷಣಾ ಘಟಕ ಹಾಗೂ ಚೈಲ್ಡ್ ಹೆಲ್ಪ್‌ಲೈನ್ ಸಹಯೋಗದಲ್ಲಿ ಬೀದಿ ನಾಟಕ ಮತ್ತು ಕಿರುಚಿತ್ರಗಳ ಮೂಲಕ ಅರಿವು ಮೂಡಿಸಬೇಕು ಎಂದು ಸೂಚಿಸಿದರು.

ಅಂಗನವಾಡಿ, ಮಕ್ಕಳ ಆರೋಗ್ಯಕ್ಕೂ ಆದ್ಯತೆ

ಕೆಎಂಆರ್‌ಎಸ್ ಯೋಜನೆಯಡಿ ₹15.67 ಕೋಟಿ ವೆಚ್ಚದಲ್ಲಿ 52 ಅಂಗನವಾಡಿ ಕಟ್ಟಡಗಳು ಹಾಗೂ 118 ಕೇಂದ್ರಗಳ ಉನ್ನತೀಕರಣಕ್ಕೆ ಟೆಂಡರ್ ಪೂರ್ಣಗೊಂಡಿದೆ. ಶಿಥಿಲಗೊಂಡಿರುವ 24 ಕಟ್ಟಡಗಳ ಅಭಿವೃದ್ಧಿಗೆ ₹7.20 ಕೋಟಿ ಅನುಮೋದನೆ ದೊರೆತಿದ್ದು, ಹಳೆಯ 50 ಕಟ್ಟಡಗಳನ್ನು ತೆರವುಗೊಳಿಸಿ ಹೊಸ ಕಟ್ಟಡ ನಿರ್ಮಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದರು.

ಅಪೌಷ್ಟಿಕ ಮಕ್ಕಳಿಗೆ ಅಗತ್ಯ ಚಿಕಿತ್ಸೆ ಹಾಗೂ NRC ದಾಖಲಾತಿ, ಆರ್‌ಬಿಎಸ್‌ಕೆ ತಂಡದಿಂದ ನಿಯಮಿತ ಆರೋಗ್ಯ ತಪಾಸಣೆ ಹಾಗೂ ಗರ್ಭಿಣಿ–ಬಾಣಂತಿಯರ ಅನಿಮಿಯಾ ಪರೀಕ್ಷೆ ನಡೆಸಬೇಕು ಎಂದು ಸೂಚಿಸಲಾಯಿತು.

ಗೊಲ್ಲರಹಟ್ಟಿಗಳ ಮೌಢ್ಯ ಪದ್ಧತಿ ನಿರ್ಮೂಲನೆಗೆ ಸೂಚನೆ

ಚೋರುನೂರು ಭಾಗದ ಕೆಲವು ಗೊಲ್ಲರಹಟ್ಟಿಗಳಲ್ಲಿ ಋತುಮತಿಯಾದ ಮಹಿಳೆಯರನ್ನು ಪ್ರತ್ಯೇಕ ಗುಡಿಸಲಿನಲ್ಲಿ ಇರಿಸುವ ಅವೈಜ್ಞಾನಿಕ ಪದ್ಧತಿ ಮುಂದುವರಿದಿರುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಆರೋಗ್ಯ, ಸಮಾಜ ಕಲ್ಯಾಣ ಹಾಗೂ ಶಿಕ್ಷಣ ಸೇರಿದಂತೆ ಸಂಬಂಧಿತ ಎಲ್ಲ ಇಲಾಖೆಗಳು ಜಂಟಿಯಾಗಿ ಸ್ಥಳಕ್ಕೆ ತೆರಳಿ ಜನರಲ್ಲಿ ವೈಜ್ಞಾನಿಕ ಅರಿವು ಮೂಡಿಸಿ ಈ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು ಎಂದು ಶಾಸಕಿ ಖಡಕ್ ಸೂಚನೆ ನೀಡಿದರು.

“ಕಾಗದದ ಮೇಲಿನ ಪ್ರಗತಿ ಸಾಕಾಗುವುದಿಲ್ಲ. ಅಧಿಕಾರಿಗಳು ಜನರ ನಡುವೆ ತೆರಳಿ ಸಮಸ್ಯೆಗಳನ್ನು ಅರಿತು ಪರಿಹಾರ ನೀಡಬೇಕು. ಜನರ ಆರೋಗ್ಯ, ಪರಿಸರ, ರೈತರ ಬದುಕು ಹಾಗೂ ಮಕ್ಕಳ ಭವಿಷ್ಯವೇ ಅಭಿವೃದ್ಧಿಯ ಕೇಂದ್ರಬಿಂದುವಾಗಬೇಕು” ಎಂದು ಅವರು ಹೇಳಿದರು.

ಸಭೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಡಗಿನ ಬಸಪ್ಪ, ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ನೂರುದ್ದೀನ್, ಸಿಡಿಪಿಒ ನಾಗರಾಜ್, ತೋಟಗಾರಿಕೆ ಇಲಾಖೆ ಎಡಿ ಹನುಮಂತಪ್ಪ, ಪಶುಸಂಗೋಪನೆ ಇಲಾಖೆಯ ಡಾ. ವಲಿಬಾಷಾ, ರೈತ ಸಂಪರ್ಕ ಕೇಂದ್ರದ ಸಹಾಯಕ ನಿರ್ದೇಶಕ ಮಹಮ್ಮದ್ ರಫಿಯುಲ್ಲಾ ರಜ್ವಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Tags

Annapoorna TukaramBallary
share
ವಾರ್ತಾಭಾರತಿ
ವಾರ್ತಾಭಾರತಿ
Next Story
X