Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಕಕ್ಷಿದಾರರಿಗೆ, ವ್ಯಾಜ್ಯಗಳಿಗೆ...

ಕಕ್ಷಿದಾರರಿಗೆ, ವ್ಯಾಜ್ಯಗಳಿಗೆ ‘ಮಧ್ಯಸ್ಥಿಕೆ’ ಸಂಜೀವಿನಿ: ನ್ಯಾಯಮೂರ್ತಿ ಆರ್.ನಟರಾಜ್

ವಾರ್ತಾಭಾರತಿವಾರ್ತಾಭಾರತಿ3 Sept 2025 5:48 PM IST
share
ಕಕ್ಷಿದಾರರಿಗೆ, ವ್ಯಾಜ್ಯಗಳಿಗೆ ‘ಮಧ್ಯಸ್ಥಿಕೆ’ ಸಂಜೀವಿನಿ: ನ್ಯಾಯಮೂರ್ತಿ ಆರ್.ನಟರಾಜ್

ಬಳ್ಳಾರಿ: ಮಧ್ಯಸ್ಥಿಕೆ ಎಂಬುದು ಕಕ್ಷಿದಾರರಿಗೆ ಮತ್ತು ವ್ಯಾಜ್ಯಗಳಿಗೆ ಸಂಜೀವಿನಿಯಾಗಿದ್ದು, ಇದು ಎಂತಹದ್ದೇ ಪ್ರಕರಣವನ್ನು ಯಾವುದೇ ವೈರತ್ವ ಇಲ್ಲದಂತೆ ಪರಿಹರಿಸುವ ಉಪಾಯವಾಗಿದೆ ಎಂದು ಹೈಕೊರ್ಟ್ ನ ನ್ಯಾಯಾಧೀಶರು ಹಾಗೂ ಬಳ್ಳಾರಿ ಜಿಲ್ಲೆಯ ಆಡಳಿತಾತ್ಮಕ ನ್ಯಾಯಾಧೀಶರೂ ಆಗಿರುವ ನ್ಯಾಯಮೂರ್ತಿ ಆರ್.ನಟರಾಜ್ ಅವರು ಹೇಳಿದರು.

ಕರ್ನಾಟಕ ‘ಮಧ್ಯಸ್ಥಿಕೆ' ಕೇಂದ್ರ ಬೆಂಗಳೂರು, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವಗಳ ಪ್ರಾಧಿಕಾರ ಬಳ್ಳಾರಿ ಮತ್ತು ಕೊಪ್ಪಳ ಸಹಯೋಗದೊಂದಿಗೆ ನಗರದ ತಾಳೂರು ರಸ್ತೆಯ ಜಿಲ್ಲಾ ನ್ಯಾಯಾಲಯ ಸಂಕೀರ್ಣದ 1 ನೇ ಮಹಡಿಯ ಸಭಾಂಗಣದಲ್ಲಿ ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳ ನ್ಯಾಯಾಂಗ ಅಧಿಕಾರಿಗಳು ಮತ್ತು ನ್ಯಾಯಾಧೀಶರಿಗೆ ಭಾನುವಾರ ಆಯೋಜಿಸಿದ್ದ ‘ಮಧ್ಯಸ್ಥಿಕೆ’ ಕುರಿತು ಒಂದು ದಿನದ ಪುನಶ್ಚೇತನ ತರಬೇತಿ ಕಾರ್ಯಕ್ರಮವನ್ನು ವರ್ಚುವಲ್ ಮುಖಾಂತರ ಉದ್ಘಾಟಿಸಿ ಅವರು ಮಾತನಾಡಿದರು.

ಮಾನವನ ಶರೀರಕ್ಕೆ ಯಾವ ರೀತಿ ಕಾಯಿಲೆಗಳು ಬರುತ್ತವೆಯೋ ಅದೇ ರೀತಿ ಮಾನವ ಅತೀ ಆಸೆ, ದ್ವೇಷ, ಕೋಪ, ಅಸೂಯೆ ಹಾಗೂ ಸ್ವಾರ್ಥದಂತಹ ಮಾನಸಿಕ ಕಾಯಿಲೆಯಿಂದಲೂ ಸಹ ಬಳಲುತ್ತಾನೆ. ಯಾವ ರೀತಿ ವೈದ್ಯರು ರೋಗಿಗಳಿಗೆ ಪ್ರೀತಿ, ಆರೈಕೆ ಮತ್ತು ಕಾಳಜಿಯಿಂದ ಚಿಕಿತ್ಸೆಯನ್ನು ನೀಡುತ್ತಾರೋ ಅದೇ ರೀತಿ ನ್ಯಾಯಾಧೀಶರು ಸಹ ಅವರ ಮುಂದೆ ಬರುವ ಪ್ರಕರಣಗಳ ಬಗ್ಗೆ, ಕಕ್ಷಿದಾರರ ಬಗ್ಗೆ ಸಹಾನೂಭೂತಿ, ಕಾಳಜಿ ತೋರಿಸುವ ಮೂಲಕ ಸರಿಯಾದ ನ್ಯಾಯ ನೀಡಿದಾಗ ಮಾತ್ರ ಕಾನೂನು ಮತ್ತು ಸಂವಿಧಾನವನ್ನು ಗೌರವಿಸಿದಂತಾಗುತ್ತದೆ ಎಂದರು.

ದಿನೇ ದಿನೇ ನ್ಯಾಯಾಲಯಗಳಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಎಲ್ಲಾ ವ್ಯಾಜ್ಯಗಳನ್ನು ನ್ಯಾಯಾಧೀಶರು ಬಗೆಹರಿಸುವುದು ಸಾಧ್ಯವಾಗದಿಲ್ಲದಿರಬಹುದು. ಹಾಗಾಗಿ ‘ಮಧ್ಯಸ್ಥಿಕೆ' ಮುಖಾಂತರ ಪ್ರಕರಣಗಳನ್ನು ಸಂಧಾನದ ಮೂಲಕ ಬಗೆಹರಿಸಿಕೊಂಡಲ್ಲಿ ಸಮಾಜದಲ್ಲಿ ನೆಮ್ಮದಿಯ ವಾತಾವರಣ ರೂಪುಗೊಳ್ಳುತ್ತದೆ. ಈ ನಿಟ್ಟಿನಲ್ಲಿ ಎಲ್ಲಾ ನ್ಯಾಯಾಧೀಶರು ‘ಮಧ್ಯಸ್ಥಿಕೆ'ಯ ಬಗ್ಗೆ ತರಬೇತಿ ಮೂಲಕ ಅದರ ಸುಕ್ಷತೆ ಅರಿತುಕೊಳ್ಳುವುದು ಅವಶ್ಯಕವಾಗಿದೆ ಎಂದು ತಿಳಿಸಿದರು.

ಬಳ್ಳಾರಿ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ.ಶಾಂತಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಧ್ಯಸ್ಥಿಕೆಯು ನ್ಯಾಯಾಧೀಶರ ಕೌಶಲ್ಯಗಳನ್ನು ಹೆಚ್ಚಿಸುವ ಒಂದು ಕ್ರಿಯೆಯಾಗಿದೆ. ನ್ಯಾಯ ನಿರ್ಣಯದಲ್ಲಿ ಮಹತ್ತರವಾದ ಪಾತ್ರವು ಸಹ ನಿರ್ವಹಿಸುತ್ತದೆ ಎಂದು ಹೇಳಿದರು.

ಸಿವಿಲ್ ಮತ್ತು ಕೆಲವು ಕ್ರಿಮಿನಲ್ ಪ್ರಕರಣಗಳನ್ನು ಮಧ್ಯಸ್ಥಿಕೆ ಕೇಂದ್ರಕ್ಕೆ ಕಳುಹಿಸಿಕೊಡಬಹುದಾಗಿದ್ದು, ಪರಸ್ಪರ ಒಪ್ಪಿಗೆಯ ಮೂಲಕ ಮಧ್ಯಸ್ಥಿಕೆ ನಡೆಯುವುದರಿಂದ ಜನರ ನಡುವೆ ಪ್ರೀತಿ, ವಿಶ್ವಾಸ ಮತ್ತು ನೆಮ್ಮದಿ ಮುಂದುವರೆಯುತ್ತದೆ. ಹಾಗಾಗಿ ನ್ಯಾಯಾಧೀಶರು ‘ಮಧ್ಯಸ್ಥಿಕೆ'ಯ ಕೌಶಲ್ಯಗಳನ್ನು ಅರಿತು ಪ್ರಕರಣಗಳನ್ನು ಮಧ್ಯಸ್ಥಿಕೆ ಕೇಂದ್ರಕ್ಕೆ ನಿಯಮಿತವಾಗಿ ಕಳುಹಿಕೊಡುವುದು ಅವರ ಮುಖ್ಯ ಕರ್ತವ್ಯವಾಗುತ್ತದೆ ಎಂದು ತಿಳಿಸಿದರು.

ಕೊಪ್ಪಳ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಚಂದ್ರಶೇಖರ್.ಸಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ನ್ಯಾಯಾಧೀಶರು ರಾಜಿಯಾಗಬಹುದಾದ ಗುಣಗಳಿರುವ ವ್ಯಾಜ್ಯಗಳನ್ನು ಗುರುತಿಸಿ ಅವುಗಳನ್ನು ಮಧ್ಯಸ್ಥಿಕೆ ಕೇಂದ್ರಕ್ಕೆ ಕಳುಹಿಸುವುದು ಅತೀ ಅವಶ್ಯಕವಾಗಿರುತ್ತದೆ. ಮಧ್ಯಸ್ಥಿಕೆಯಿಂದ ಪ್ರಕರಣಗಳು ಮುಕ್ತಾಯಗೊಂಡಲ್ಲಿ ಕಕ್ಷಿದಾರರ ನಡುವೆ ಪ್ರೀತಿ, ಬಾಂಧವ್ಯ ವೃದ್ಧಿಯಾಗುವುದಲ್ಲದೇ ವೆಚ್ಚ ಮತ್ತು ಸಮಯ ಉಳಿತಾಯವಾಗುತ್ತದೆ ಎಂದು ತಿಳಿಸಿದರು.

ಕರ್ನಾಟಕ ‘ಮಧ್ಯಸ್ಥಿಕೆ' ಕೇಂದ್ರ ಬೆಂಗಳೂರಿನ ತರಬೇತುದಾರರಾದ ಗೀತಾದೇವಿ ಎಂ.ಪಾಪಣ್ಣ, ‘ಮಧ್ಯಸ್ಥಿಕೆ'ದಾರರಾದ ಜಯಕೀರ್ತಿ ಎಂ.ಸಿ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.

ಬಳ್ಳಾರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್. ಹೊಸಮನೆ ಅವರು ಗಣ್ಯರನ್ನು ಸ್ವಾಗತಿಸಿದರು.

ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಾಂತೇಶ ದರಗಡ್ ಅವರು ಕಾರ್ಯಕ್ರಮ ವಂದಿಸಿದರು. ಬಳ್ಳಾರಿ ಸಿಜೆಎಂ ಇಬ್ರಾಹಿಂ ಮುಜಾವರ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಾಗಾರದಲ್ಲಿ ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳ ನ್ಯಾಯಾಂಗ ಅಧಿಕಾರಿಗಳು, ನ್ಯಾಯಾಧೀಶರು ಹಾಗೂ ಇತರರು ಉಪಸ್ಥಿತರಿದ್ದರು.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X