Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಕಂಪ್ಲಿ ಎಪಿಎಂಸಿ ಆವರಣದಲ್ಲಿ 1.17 ಕೋಟಿ...

ಕಂಪ್ಲಿ ಎಪಿಎಂಸಿ ಆವರಣದಲ್ಲಿ 1.17 ಕೋಟಿ ರೂ. ವೆಚ್ಚದ ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ5 Nov 2026 7:50 PM IST
share
ಕಂಪ್ಲಿ ಎಪಿಎಂಸಿ ಆವರಣದಲ್ಲಿ 1.17 ಕೋಟಿ ರೂ. ವೆಚ್ಚದ ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಕಂಪ್ಲಿ: ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಆವರಣದಲ್ಲಿರುವ ತಹಶೀಲ್ದಾರ್ ಕಚೇರಿ ಮುಂಭಾಗದ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಜೆ.ಎನ್. ಗಣೇಶ್ ಅವರು ಗುರುವಾರ ಭೂಮಿಪೂಜೆ ನೆರವೇರಿಸಿದರು.

2025-26ನೇ ಸಾಲಿನ ಮಾರುಕಟ್ಟೆ ಅಭಿವೃದ್ಧಿ ನೆರವು ನಿಧಿ ಹಾಗೂ ಸಮಿತಿ ನಿಧಿ ಯೋಜನೆಯಡಿ ಸುಮಾರು 1.17 ಕೋಟಿ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.

ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಶಾಸಕ ಗಣೇಶ್, ಎಪಿಎಂಸಿ ಅಭಿವೃದ್ಧಿಗಾಗಿ ಈಗಾಗಲೇ 10 ಕೋಟಿ ರೂ. ಅನುದಾನ ನೀಡಲಾಗಿದೆ. ರೈತರು ಮತ್ತು ವ್ಯಾಪಾರಿಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಮೊದಲ ಆದ್ಯತೆ ನೀಡಲಾಗುತ್ತಿದೆ. ಹಿಂದೆ ಹೊಸಪೇಟೆ ಎಪಿಎಂಸಿ ವ್ಯಾಪ್ತಿಯಲ್ಲಿದ್ದ ಕಂಪ್ಲಿ ಉಪಮಾರುಕಟ್ಟೆ ಈಗ ಸ್ವತಂತ್ರಗೊಂಡು ಬಳ್ಳಾರಿ ವ್ಯಾಪ್ತಿಗೆ ಸೇರಿದೆ. ಇದೇ ಮಾದರಿಯಲ್ಲಿ ಕುರುಗೋಡು ಎಪಿಎಂಸಿಯನ್ನೂ ಶೀಘ್ರದಲ್ಲೇ ಸ್ವತಂತ್ರ ಮಾರುಕಟ್ಟೆಯನ್ನಾಗಿ ಮಾಡಲಾಗುವುದು ಎಂದರು.

ರೈತರ ಅನುಕೂಲಕ್ಕಾಗಿ ರೈತ ಭವನ ನಿರ್ಮಿಸಲು ಜಾಗ ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ. ಸ್ಥಳ ಅಂತಿಮಗೊಂಡ ತಕ್ಷಣ ಕಾಮಗಾರಿ ಆರಂಭಿಸಲಾಗುವುದು. ಕಂಪ್ಲಿಯ ಮಿನಿ ವಿಧಾನಸೌಧದ ಮುಖ್ಯ ಕಟ್ಟಡದ ಕಾಮಗಾರಿ ಪೂರ್ಣಗೊಂಡಿದೆ. ಕಾಂಪೌಂಡ್ ಮತ್ತು ಚರಂಡಿಯಂತಹ ಸಣ್ಣಪುಟ್ಟ ಕೆಲಸಗಳು ಮುಗಿದ ಬಳಿಕ ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಲಾಗುವುದು ಎಂದು ತಿಳಿಸಿದರು.

ಕಂಪ್ಲಿ ಸೇತುವೆ ನಿರ್ಮಾಣ ಯೋಜನೆ ಶೀಘ್ರದಲ್ಲೇ ಕೈಗೂಡಲಿದೆ. ಸೇತುವೆ ನಿರ್ಮಾಣಕ್ಕಾಗಿ ರೈತರ ಜಮೀನುಗಳನ್ನು ಸರ್ಕಾರ ನಿಗದಿಪಡಿಸಿದ ದರದಲ್ಲೇ ಭೂಸ್ವಾಧೀನಪಡಿಸಿಕೊಳ್ಳಲಾಗುವುದು. ಈ ಕುರಿತು ಶೀಘ್ರದಲ್ಲೇ ರೈತರೊಂದಿಗೆ ಸಭೆ ನಡೆಸಿ ಚರ್ಚಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಎಪಿಎಂಸಿ ಅಧ್ಯಕ್ಷ ಎನ್. ಹಬೀಬ್ ರೆಹಮಾನ್, ತಹಶೀಲ್ದಾರ್ ಜೂಗಲ್ ಮಂಜುನಾಯಕ, ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ಕೆ. ಶ್ರೀನಿವಾಸರಾವ್, ಎಪಿಎಂಸಿ ಉಪಾಧ್ಯಕ್ಷ ಇಟ್ಟಾಗಿ ಶರಣಬಸವ, ಸದಸ್ಯರಾದ ಗೌಡ್ರು ಅಂಜಿನಪ್ಪ, ಈ. ದೊಡ್ಡರ‍್ರಿಸ್ವಾಮಿ, ಪಂಪಾಪತಿ, ಕೆ. ಕಾಸಿಂಸಾಬ್, ಚನ್ನಬಸಪ್ಪ ಹಾಗೂ ಪ್ರಮುಖರಾದ ಬಿ. ನಾರಾಯಣಪ್ಪ, ಡಿ. ಮೌನೇಶ್ ಉಪಸ್ಥಿತರಿದ್ದರು.

Tags

Kampli
share
ವಾರ್ತಾಭಾರತಿ
ವಾರ್ತಾಭಾರತಿ
Next Story
X