Sandur | ನಿಡುಗುರ್ತಿ ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಸಂಡೂರು/ಬಳ್ಳಾರಿ: ತಾಲೂಕಿನ ನಿಡುಗುರ್ತಿ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಗ್ರಾಮದ ಪ್ರಮುಖ ಸ್ಥಳಗಳಲ್ಲಿ ಹಲಗೆ ಬಾರಿಸುವ ಮೂಲಕ ಹಬ್ಬದ ವಾತಾವರಣ ನಿರ್ಮಿಸಲಾಯಿತು. ಊರಿನ ಮುಂಭಾಗದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರವನ್ನು ಪ್ರತಿಷ್ಠಾಪಿಸಿ, ಗ್ರಾಮಸ್ಥರೆಲ್ಲರೂ ಒಂದಾಗಿ ಸೇರಿ ಪೂಜೆ ಸಲ್ಲಿಸಿದರು. ಬಳಿಕ ಸಿಹಿ ಹಂಚುವ ಮೂಲಕ ಜಯಂತಿಯನ್ನು ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಮೀಸೆ ದುರ್ಗಪ್ಪ, ನೀಲ್ ಕುಮಾರ್, ರಮೇಶ್, ಕೆಂಚಪ್ಪ ಸೇರಿದಂತೆ ಇತರರು ಸಕ್ರಿಯವಾಗಿ ಭಾಗವಹಿಸಿದರು.
ಕಾರ್ಯಕ್ರಮದ ವೇಳೆ ಅಂಬೇಡ್ಕರ್ ಅವರ ಸಮಾನತೆ, ಶಿಕ್ಷಣ ಹಾಗೂ ಸಾಮಾಜಿಕ ನ್ಯಾಯದ ಸಂದೇಶಗಳನ್ನು ಸ್ಮರಿಸಿ, ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಗ್ರಾಮಸ್ಥರಿಗೆ ಕರೆ ನೀಡಲಾಯಿತು.
Next Story




