ಸಂಡೂರು | ವಿವಿಧ ಸರ್ಕಾರಿ ಶಾಲೆಗಳಿಗೆ ಅಧಿಕಾರಿಗಳ ಭೇಟಿ : ಕಾಮಗಾರಿ, ಶೈಕ್ಷಣಿಕ ಪ್ರಗತಿ ಪರಿಶೀಲನೆ

ಸಂಡೂರು: ತಾಲ್ಲೂಕಿನ ತಾರನಗರ, ನಿಡುಗುರ್ತಿ ಸೇರಿದಂತೆ ವಿವಿಧ ಗ್ರಾಮಗಳ ಸರ್ಕಾರಿ ಶಾಲೆಗಳಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಶಾಲಾ ಆವರಣ ಹಾಗೂ ಶೈಕ್ಷಣಿಕ ಚಟುವಟಿಕೆಗಳ ಪರಿಶೀಲನೆ ನಡೆಸಿತು.
ಈ ಹಿಂದೆ ಶಾಲೆಯಲ್ಲಿ ನಡೆದಿದ್ದ ಕೊಠಡಿ ನಿರ್ಮಾಣ ಕಾಮಗಾರಿಗಳನ್ನು ವೀಕ್ಷಿಸಿದ ಅಧಿಕಾರಿಗಳು, ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಿಸಿದರು. ನಂತರ ಶಾಲೆಯ ಆಟದ ಮೈದಾನ, ಪರಿಸರ ಮತ್ತು ಮಕ್ಕಳ ಹಾಜರಾತಿ ಕುರಿತು ಮುಖ್ಯಗುರುಗಳಿಂದ ಮಾಹಿತಿ ಪಡೆದರು.
ಪರಿಶೀಲನಾ ತಂಡದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ (BEO) ಡಾ. ಐ.ಆರ್. ಅಕ್ಕಿ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ (EO) ಮಡಗಿನ ಬಸಪ್ಪ, ಕ್ಷೇತ್ರ ಸಮನ್ವಯಾಧಿಕಾರಿ ಶರಣಬಸಪ್ಪ ಕರಿಶೆಟ್ಟಿ, ಕಾರ್ತಿಕ್, ಮುಖ್ಯಗುರುಗಳಾದ ತಿಮ್ಮೇಶ್, ಪುರುಷೋತ್ತಮ, ಜಕಣಾಚಾರಿ ಹಾಗೂ ಶಾಲಾ ಸಿಬ್ಬಂದಿ ವರ್ಗದವರು ಹಾಜರಿದ್ದರು.
Next Story





