ಸಿರುಗುಪ್ಪ | ಅಕ್ರಮ ಸಾಗಣೆ: 9 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಿರುಗುಪ್ಪ: ತಾಲೂಕಿನ ತೆಕ್ಕಲಕೋಟೆ ಪಟ್ಟಣದ ಉಪ್ಪಾರ ಹೊಸಹಳ್ಳಿ ಗ್ರಾಮದಿಂದ ಆಂಧ್ರಪ್ರದೇಶದ ಹೊಳಗುಂದ ಗ್ರಾಮಕ್ಕೆ ಬೊಲೆರೋ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 9 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ಪೊಲೀಸರು ಮಂಗಳವಾರ ಬೆಳಗಿನ ಜಾವ ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿ ಆಧರಿಸಿ ತೆಕ್ಕಲಕೋಟೆ ಪೊಲೀಸ್ ಠಾಣೆಯ ಎಎಸ್‌ಐ ಪ್ರಭಾವತಿ ಹಾಗೂ ಸಿರುಗುಪ್ಪ ಆಹಾರ ನಿರೀಕ್ಷಕ ಮಹಾರುದ್ರಗೌಡ ನೇತೃತ್ವದ ತಂಡ ದಾಳಿ ನಡೆಸಿದೆ. ಕಾರ್ಯಾಚರಣೆಯಲ್ಲಿ ₹27 ಸಾವಿರ ಮೌಲ್ಯದ 9 ಕ್ವಿಂಟಾಲ್ ಪಡಿತರ ಅಕ್ಕಿ ವಶಪಡಿಸಿಕೊಳ್ಳಲಾಗಿದೆ.
ಈ ಸಂಬಂಧ ತಾಳೂರು ಗ್ರಾಮದ ವಾಹನ ಚಾಲಕ ಶಿವಕುಮಾರ್ (22) ವಿರುದ್ಧ ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Next Story




