Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಸಿರುಗುಪ್ಪ | ತುಂಗಭದ್ರಾ ಕಾಲುವೆಗಳಿಗೆ...

ಸಿರುಗುಪ್ಪ | ತುಂಗಭದ್ರಾ ಕಾಲುವೆಗಳಿಗೆ ನಿರಂತರ ನೀರು ಹರಿಸಲು ಆಗ್ರಹಿಸಿ ರೈತರಿಂದ ಹೆದ್ದಾರಿ ತಡೆ

ಪೀರಾಸಾಬ್/ವಾರ್ತಾಭಾರತಿಪೀರಾಸಾಬ್/ವಾರ್ತಾಭಾರತಿ19 Nov 2026 6:51 PM IST
share
ಸಿರುಗುಪ್ಪ | ತುಂಗಭದ್ರಾ ಕಾಲುವೆಗಳಿಗೆ ನಿರಂತರ ನೀರು ಹರಿಸಲು ಆಗ್ರಹಿಸಿ ರೈತರಿಂದ ಹೆದ್ದಾರಿ ತಡೆ

ಸಿರುಗುಪ್ಪ: ತುಂಗಭದ್ರಾ ಜಲಾಶಯದಿಂದ ಮೇಲ್ಮಟ್ಟದ (ಎಚ್‌ಎಲ್‌ಸಿ) ಹಾಗೂ ಕೆಳಮಟ್ಟದ (ಎಲ್‌ಎಲ್‌ಸಿ) ಕಾಲುವೆಗಳಿಗೆ ನಿರಂತರವಾಗಿ ನೀರು ಹರಿಸುವಂತೆ ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಗುರುವಾರ ರಾಷ್ಟ್ರೀಯ ಹೆದ್ದಾರಿ 150ಎನಲ್ಲಿ ರಸ್ತೆ ತಡೆ ಚಳವಳಿ ನಡೆಸಿದರು.

ತಾಲೂಕಿನ ಸಿರಿಗೇರಿ ಕ್ರಾಸ್‌ನಿಂದ ಲಕ್ಷ್ಮೀನಗರ ಕ್ಯಾಂಪ್‌ವರೆಗೆ, ಬೈಲೂರು ಹಾಗೂ ಕೋಳೂರು ಕ್ರಾಸ್ ಬಳಿ ಸಾವಿರಾರು ರೈತರು ಟ್ರ್ಯಾಕ್ಟರ್ ಮತ್ತು ಎತ್ತಿನ ಬಂಡಿಗಳೊಂದಿಗೆ ಜಮಾಯಿಸಿ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ಕರೂರು ಮಾಧವರೆಡ್ಡಿ ಮಾತನಾಡಿ, ಎಲ್‌ಎಲ್‌ಸಿ ಕಾಲುವೆ ವ್ಯಾಪ್ತಿಯ ಸುಮಾರು 96 ಸಾವಿರ ಎಕರೆ ಪ್ರದೇಶದಲ್ಲಿ ಬೆಳೆಗಳು ಒಣಗುವ ಹಂತಕ್ಕೆ ತಲುಪಿವೆ. ಐಸಿಸಿ ಸಭೆಯಲ್ಲಿ ಕರ್ನಾಟಕದ ಪಾಲಿನ 550 ಕ್ಯೂಸೆಕ್ ನೀರು ಹರಿಸಲು ಮಾತ್ರ ನಿರ್ಧರಿಸಲಾಗಿದೆ. ಆದರೆ, ಇದರಿಂದ ಕೇವಲ 550 ಎಕರೆ ಪ್ರದೇಶಕ್ಕೆ ಮಾತ್ರ ನೀರು ತಲುಪಲು ಸಾಧ್ಯವಾಗುತ್ತದೆ. ಆಂಧ್ರಪ್ರದೇಶದ ಪಾಲಿನ ನೀರನ್ನೂ ಪಡೆದು ಹರಿಸಿದರೆ ಮಾತ್ರ ರೈತರ ಜಮೀನುಗಳಿಗೆ ಸಮರ್ಪಕವಾಗಿ ನೀರು ಸಿಗಲಿದೆ ಎಂದು ತಿಳಿಸಿದರು.

ಬೆಳೆಗಳಿಗೆ ಬಿಡಬೇಕಾದ ನೀರನ್ನು ಕುಡಿಯುವ ನೀರಿನ ನೆಪದಲ್ಲಿ ಕೆರೆಗಳಿಗೆ ತುಂಬಿಸಲಾಗುತ್ತಿದ್ದು, ಇದರಿಂದ ಕೃಷಿ ಚಟುವಟಿಕೆಗಳಿಗೆ ತೀವ್ರ ತೊಂದರೆಯಾಗಿದೆ. ಐಸಿಸಿ ಸಭೆಯ ತೀರ್ಮಾನದಂತೆ ಡಿ. 21ರಿಂದ 28ರವರೆಗೆ ಎಲ್‌ಎಲ್‌ಸಿಗೆ 550 ಕ್ಯೂಸೆಕ್ ಹಾಗೂ ಎಚ್‌ಎಲ್‌ಸಿಗೆ 1,000 ಕ್ಯೂಸೆಕ್ ನೀರು ಹರಿಸಿದರೆ ಸಾಲದು. ಬದಲಾಗಿ, ಎಲ್‌ಎಲ್‌ಸಿಗೆ 1,100 ಕ್ಯೂಸೆಕ್ ಮತ್ತು ಎಚ್‌ಎಲ್‌ಸಿಗೆ 2,800 ಕ್ಯೂಸೆಕ್ ನೀರು ಹರಿಸಬೇಕು. ಎಲ್‌ಎಲ್‌ಸಿಗೆ ಡಿ. 15ರವರೆಗೆ ಹಾಗೂ ಎಚ್‌ಎಲ್‌ಸಿಗೆ ಡಿ. 10ರವರೆಗೆ ನಿರಂತರವಾಗಿ ನೀರು ಹರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಅಧಿಕಾರಿಗಳ ಭರವಸೆ: ಸ್ಥಳಕ್ಕೆ ಭೇಟಿ ನೀಡಿ ರೈತರಿಂದ ಮನವಿ ಸ್ವೀಕರಿಸಿದ ಸಹಾಯಕ ಆಯುಕ್ತ ಎಚ್.ಡಿ. ರಾಜೇಶ್ ಮಾತನಾಡಿ, ರೈತರ ಬೇಡಿಕೆಯಂತೆ ನ. 28ರಿಂದ ಡಿ. 10ರವರೆಗೆ ಕರ್ನಾಟಕ ಮತ್ತು ಆಂಧ್ರಪ್ರದೇಶದ ಪಾಲಿನ ನೀರನ್ನು ನಿರಂತರವಾಗಿ ಹರಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.

ತಹಶೀಲ್ದಾರ್ ಗೌಸಿಯಾ ಬೇಗಂ, ನೀರಾವರಿ ಇಲಾಖೆಯ ಎಇಇ ಮುನೀರ್, ಡಿವೈಎಸ್ಪಿ ಮಾಲತೇಶ ಕೊನಬೇವು ಸ್ಥಳದಲ್ಲಿದ್ದರು. ರೈತ ಮುಖಂಡರಾದ ರಾಮನಗೌಡ, ಸಲ್ಲಾ ತಿಮ್ಮಾರೆಡ್ಡಿ, ವಿರೂಪಾಕ್ಷಿ ರೆಡ್ಡಿ, ಓಂಕಾರಿ, ಖಾದರ್ ಸಾಬ್, ದೊಡ್ಡ ಬಸಪ್ಪ, ಕೆ. ಶಿವಾರೆಡ್ಡಿ, ಹಂಪನಗೌಡ, ಜೆ. ಪಂಪನಗೌಡ, ಬಿ. ನೀಲಕಂಠಗೌಡ, ಜಗದೀಶ, ಬಿ. ನಾರಾಯಣರೆಡ್ಡಿ, ಪಕ್ಕೀರಪ್ಪ, ಪೋಶರಾವು, ಕೆ. ಮಲ್ಲಿಕಾರ್ಜುನ ಸೇರಿದಂತೆ ವಿವಿಧ ಗ್ರಾಮಗಳ ರೈತರು ಪಾಲ್ಗೊಂಡಿದ್ದರು.




Tags

SiruguppaFarmersblock highwaywaterTungabhadra canals
share
ಪೀರಾಸಾಬ್/ವಾರ್ತಾಭಾರತಿ
ಪೀರಾಸಾಬ್/ವಾರ್ತಾಭಾರತಿ

ಬೂದುಗುಪ್ಪ ಪೀರಾಸಾಬ್ ಅವರು ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ವೆಬ್ ಪತ್ರಿಕೋದ್ಯಮದ ಜೊತೆಗೆ ಸಾಮಾಜಿಕ ಹಾಗೂ ರಾಜಕೀಯ ವಿಷಯಗಳ ವರದಿಗಾರಿಕೆಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿಯಲ್ಲಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ

Next Story
X