Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Siruguppa | ಬಡವರ ಗುಡಿಸಲು ತೆರವು...

Siruguppa | ಬಡವರ ಗುಡಿಸಲು ತೆರವು ವಿರೋಧಿಸಿ ಮಾಜಿ ಶಾಸಕ ಸೋಮಲಿಂಗಪ್ಪ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ16 Aug 2026 4:32 PM IST
share
Siruguppa | ಬಡವರ ಗುಡಿಸಲು ತೆರವು ವಿರೋಧಿಸಿ ಮಾಜಿ ಶಾಸಕ ಸೋಮಲಿಂಗಪ್ಪ ಆಕ್ರೋಶ

ಸಿರುಗುಪ್ಪ: ಬಡ ಕುಟುಂಬಗಳ ಗುಡಿಸಲುಗಳನ್ನು ತೆರವುಗೊಳಿಸಿ ಅದೇ ಜಾಗದಲ್ಲಿ ಪಟ್ಟಣ ಪಂಚಾಯಿತಿಯ ನೂತನ ಕಾರ್ಯಾಲಯ ಕಟ್ಟಡ ನಿರ್ಮಿಸಲು ಮುಂದಾಗಿರುವ ಕ್ರಮಕ್ಕೆ ಮಾಜಿ ಶಾಸಕ ಎಂ.ಎಸ್‌. ಸೋಮಲಿಂಗಪ್ಪ ತೀವ್ರ ವಿರೋಧ ವ್ಯಕ್ತಪಡಿಸಿದರು. ಈ ವಿಚಾರವಾಗಿ ಹಾಲಿ ಶಾಸಕ ಬಿ.ಎಂ. ನಾಗರಾಜ ಅವರನ್ನು ತರಾಟೆಗೆ ತೆಗೆದುಕೊಂಡ ಘಟನೆ ತೆಕ್ಕಲಕೋಟೆಯಲ್ಲಿ ನಡೆಯಿತು.

ತಾಲೂಕಿನ ತೆಕ್ಕಲಕೋಟೆ ಪಟ್ಟಣದ 2ನೇ ವಾರ್ಡ್‌ನ ನಿಟ್ಟೂರು ರಸ್ತೆಯಲ್ಲಿರುವ ಪೌರಕಾರ್ಮಿಕರ ವಸತಿಗೃಹದ ಜಾಗದಲ್ಲಿ ಅನಧಿಕೃತ ಗುಡಿಸಲುಗಳ ತೆರವು ಕಾರ್ಯಾಚರಣೆ ನಡೆಯುತ್ತಿದ್ದ ಸ್ಥಳಕ್ಕೆ ಶಾಸಕ ಬಿ.ಎಂ. ನಾಗರಾಜ ಭೇಟಿ ನೀಡಿದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಮಾಜಿ ಶಾಸಕ ಸೋಮಲಿಂಗಪ್ಪ, “ಬಡವರನ್ನು ಒಕ್ಕಲೆಬ್ಬಿಸಿ ಪಟ್ಟಣ ಪಂಚಾಯಿತಿ ಕಾರ್ಯಾಲಯ ನಿರ್ಮಿಸುವ ಅಗತ್ಯವೇನು? ಯಾರನ್ನು ಮೆಚ್ಚಿಸಲು ಈ ಕಾರ್ಯ ಮಾಡುತ್ತಿದ್ದೀರಿ?” ಎಂದು ಪ್ರಶ್ನಿಸಿ ಅಸಮಾಧಾನ ವ್ಯಕ್ತಪಡಿಸಿದರು.

ಎರಡು ಎಕರೆ ಜಾಗದಲ್ಲಿ ಈಗಾಗಲೇ ಪೊಲೀಸ್ ವಸತಿಗೃಹ, ನೀರಾವರಿ ಇಲಾಖೆಯ ವಸತಿಗೃಹ, ಪಶು ಆಸ್ಪತ್ರೆ ಹಾಗೂ ಇಂದಿರಾ ಕ್ಯಾಂಟೀನ್‌ಗೆ ಬಹುತೇಕ ಜಾಗ ಬಳಕೆಯಾಗಿದೆ. ಪೌರಕಾರ್ಮಿಕರ ವಸತಿಗೃಹಕ್ಕೆ ಮೀಸಲಿಟ್ಟ ಜಾಗದಲ್ಲಿ ಪಟ್ಟಣ ಪಂಚಾಯಿತಿ ಕಾರ್ಯಾಲಯ ನಿರ್ಮಿಸುವುದು ಅವೈಜ್ಞಾನಿಕ. ರಾಷ್ಟ್ರೀಯ ಹೆದ್ದಾರಿ ಸಮೀಪ ಕೆಇಬಿ ಹಿಂಭಾಗದಲ್ಲಿರುವ ಜಾಗದಲ್ಲಿ ಕಚೇರಿ ನಿರ್ಮಿಸಬೇಕು ಎಂದು ಸೋಮಲಿಂಗಪ್ಪ ಆಗ್ರಹಿಸಿದರು.

ಪರಿಹಾರ, ನಿವೇಶನದ ಭರವಸೆ :

ಸ್ಥಳದಲ್ಲಿ ಧರಣಿ ನಡೆಸುತ್ತಿದ್ದ ಕುಟುಂಬಗಳನ್ನು ಶಾಸಕ ಬಿ.ಎಂ. ನಾಗರಾಜ ಭೇಟಿ ಮಾಡಿ, ಸರ್ಕಾರದ ವತಿಯಿಂದ ಪರಿಹಾರ ಹಾಗೂ ನಿವೇಶನ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.

“ಪರಿಹಾರ ದೊರೆಯುವವರೆಗೆ ಜಾಗ ಖಾಲಿ ಮಾಡುವುದಿಲ್ಲ. ಪರಿಹಾರ ಸಿಗುವವರೆಗೆ ಧರಣಿ ಮುಂದುವರಿಸುತ್ತೇವೆ” ಎಂದು ಧರಣಿ ನಿರತ ಮಲ್ಲಮ್ಮ ಹೇಳಿದರು.

ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸಿಪಿಐಗಳಾದ ಚಂದನ್ ಗೋಪಾಲ, ಹನುಮಂತಪ್ಪ, ಪಿಎಸ್‌ಐಗಳಾದ ಸದ್ದಾಂ ಹುಸೇನ್‌, ಪರಶುರಾಮ, ಶಶಿಧರ ನಾಯಕ ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಬಂದೋಬಸ್ತ್‌ ಕೈಗೊಂಡಿದ್ದರು.

ಕಾಂಗ್ರೆಸ್ ಮುಖಂಡರಾದ ಮಲ್ಲಿಕಾರ್ಜುನ ಬಲಪ್ಪ, ನಾಗಪ್ಪ, ನರೇಂದ್ರಸಿಂಹ, ಶ್ಯಾಮಸುಂದರ, ಖಾದರ್‌ಭಾಷ ಹಾಗೂ ಬಿಜೆಪಿ ತಾಲೂಕು ಅಧ್ಯಕ್ಷ ಕುಂಟ್ನಾಳ್ ಮಲ್ಲಿಕಾರ್ಜುನಸ್ವಾಮಿ, ಮಂಜುನಾಥ, ರಾಘವೇಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

Siruguppa
share
ವಾರ್ತಾಭಾರತಿ
ವಾರ್ತಾಭಾರತಿ
Next Story
X