Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಸಿರುಗುಪ್ಪ | ಸ್ತನ್ಯಪಾನದಿಂದ ಶಿಶುವಿನ...

ಸಿರುಗುಪ್ಪ | ಸ್ತನ್ಯಪಾನದಿಂದ ಶಿಶುವಿನ ಆರೋಗ್ಯಕರ ಬೆಳವಣಿಗೆ ಸಾಧ್ಯ: ಡಾ. ರಾಮಕೃಷ್ಣ

ವಾರ್ತಾಭಾರತಿವಾರ್ತಾಭಾರತಿ6 Aug 2026 8:05 PM IST
share
ಸಿರುಗುಪ್ಪ | ಸ್ತನ್ಯಪಾನದಿಂದ ಶಿಶುವಿನ ಆರೋಗ್ಯಕರ ಬೆಳವಣಿಗೆ ಸಾಧ್ಯ: ಡಾ. ರಾಮಕೃಷ್ಣ

ಸಿರುಗುಪ್ಪ: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆರ್‌ಸಿಎಚ್ ಅಧಿಕಾರಿಗಳ ಕಚೇರಿ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಿರುಗುಪ್ಪ ಹಾಗೂ ಸಮುದಾಯ ಆರೋಗ್ಯ ಕೇಂದ್ರ ತೆಕ್ಕಲಕೋಟೆ ಸಂಯುಕ್ತ ಆಶ್ರಯದಲ್ಲಿ ತೆಕ್ಕಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಅಂಗವಾಗಿ ಜಾಗೃತಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಮಕ್ಕಳ ತಜ್ಞ ಡಾ. ರಾಮಕೃಷ್ಣ, ಮಗುವಿನ ಸರ್ವತೋಮುಖ ಬೆಳವಣಿಗೆಗೆ ತಾಯಿಯ ಎದೆಹಾಲು ಅತ್ಯಗತ್ಯವಾಗಿದೆ ಎಂದು ಹೇಳಿದರು. ಆಗಸ್ಟ್‌ 1ರಿಂದ 7ರವರೆಗೆ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಿಸಲಾಗುತ್ತಿದ್ದು, 2026ರ ಘೋಷವಾಕ್ಯ ‘ಸ್ತನ್ಯಪಾನದ ಮೂಲಕ ಜೀವನಕ್ಕೆ ಸುಸ್ಥಿರ ಆರಂಭ: ಯಶಸ್ವಿಯಾದದ್ದನ್ನು ಬಲಪಡಿಸುವುದು’ ಆಗಿದೆ. ಪೌಷ್ಟಿಕಾಂಶ, ಆಹಾರ ಭದ್ರತೆ ಹಾಗೂ ಬಡತನ ನಿರ್ಮೂಲನೆಯಲ್ಲಿ ಸ್ತನ್ಯಪಾನದ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು.

ತಾಯಿಯ ಹಾಲಿನಲ್ಲಿ ರೋಗನಿರೋಧಕ ಶಕ್ತಿ ಹಾಗೂ ಅಗತ್ಯ ಪೋಷಕಾಂಶಗಳು ಸಮೃದ್ಧವಾಗಿದ್ದು, ಶಿಶುವಿನ ಆರೋಗ್ಯಕರ ಬೆಳವಣಿಗೆಗೆ ಇದು ಸಹಕಾರಿಯಾಗಿದೆ. ಸ್ತನ್ಯಪಾನವು ತಾಯಿಯ ಆರೋಗ್ಯವನ್ನು ಕಾಪಾಡುವುದರ ಜೊತೆಗೆ ಹೆರಿಗೆಯ ನಂತರ ಶೀಘ್ರ ಚೇತರಿಕೆಗೆ ನೆರವಾಗುತ್ತದೆ. ಸ್ತನ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುವುದರೊಂದಿಗೆ ಮಕ್ಕಳ ನಡುವಿನ ಅಂತರ ಕಾಯ್ದುಕೊಳ್ಳಲು ಸಹ ಸಹಕಾರಿಯಾಗುತ್ತದೆ ಎಂದು ವಿವರಿಸಿದರು.

ಪ್ರಸೂತಿ ತಜ್ಞೆ ಡಾ. ಶಾರದಾ ಮಾತನಾಡಿ, ಜನನದ ಮೊದಲ ಒಂದು ಗಂಟೆಯೊಳಗೆ ಹಳದಿ ಬಣ್ಣದ ಮೊದಲ ಹಾಲು (ಕೊಲೋಸ್ಟ್ರಮ್) ಮಗುವಿಗೆ ನೀಡಬೇಕು. ಇದು ಶಿಶುವಿನ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ, ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ನೆರವಾಗುತ್ತದೆ ಎಂದು ಹೇಳಿದರು.

ಐಸಿಟಿಸಿ ಆಪ್ತ ಸಮಾಲೋಚಕ ಪ್ರಕಾಶ್ ಮಾತನಾಡಿ, ಗರ್ಭಿಣಿಯರು ಪೌಷ್ಟಿಕ ಆಹಾರ ಸೇವಿಸಬೇಕು. ಎರಡು ಮಕ್ಕಳ ನಡುವೆ ಕನಿಷ್ಠ ಎರಡು ವರ್ಷದ ಅಂತರ ಕಾಯ್ದುಕೊಳ್ಳಬೇಕು. ಮಕ್ಕಳಿಗೆ ನಿಗದಿತ ವೇಳಾಪಟ್ಟಿಯಂತೆ ಎಲ್ಲ ಲಸಿಕೆಗಳನ್ನು ತಪ್ಪದೇ ಹಾಕಿಸಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಶುಶ್ರೂಷಾಧಿಕಾರಿಗಳು, ಪ್ರಯೋಗಶಾಲಾ ತಂತ್ರಜ್ಞರು, ಆಶಾ ಕಾರ್ಯಕರ್ತೆಯರು, ಗರ್ಭಿಣಿಯರು ಹಾಗೂ ಮಕ್ಕಳ ತಾಯಂದಿರು ಭಾಗವಹಿಸಿದ್ದರು.

Tags

Siruguppa
share
ವಾರ್ತಾಭಾರತಿ
ವಾರ್ತಾಭಾರತಿ
Next Story
X