ಸಿರುಗುಪ್ಪ | ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ: 2.90 ಕ್ವಿಂಟಲ್ ಅಕ್ಕಿ ಜಪ್ತಿ

ಸಿರುಗುಪ್ಪ: ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಗೂಡ್ಸ್ ವಾಹನದ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಸೋಮವಾರ ಜಂಟಿ ಕಾರ್ಯಾಚರಣೆ ನಡೆಸಿ, 9,570 ರೂ. ಮೌಲ್ಯದ 2.90 ಕ್ವಿಂಟಲ್ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.
ನಗರದಿಂದ ಸಿಂಧನೂರು ಕಡೆಗೆ ಅಶೋಕ್ ಲೇಲ್ಯಾಂಡ್ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಆಹಾರ ನಿರೀಕ್ಷಕ ಎಂ. ವಿಜಯಕುಮಾರ್ ನೇತೃತ್ವದಲ್ಲಿ ಸಿರುಗುಪ್ಪ ಪೊಲೀಸ್ ಠಾಣೆಯ ಸಿಬ್ಬಂದಿ ದಾಳಿ ನಡೆಸಿದರು.
ಈ ವೇಳೆ ವಾಹನವನ್ನು ತಡೆದು ಪರಿಶೀಲಿಸಿದಾಗ ಪಡಿತರ ಅಕ್ಕಿ ಪತ್ತೆಯಾಗಿದೆ. ಬಳಿಕ ವಾಹನ ಸಮೇತ ಅಕ್ಕಿಯನ್ನು ಜಪ್ತಿ ಮಾಡಲಾಗಿದೆ. ವಾಹನದ ಚಾಲಕ ಸೈಯದ್ ಅಜೀಂ ಪೀರ್ ಖಾದ್ರಿ ಅವರನ್ನು ವಶಕ್ಕೆ ಪಡೆಯಲಾಗಿದ್ದು, ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story




