ಸಿರುಗುಪ್ಪ | ಜುಮ್ಮಾ ಮಸೀದಿ ಅಭಿವೃದ್ಧಿಗೆ 20 ಲಕ್ಷ ರೂ. ಮಂಜೂರು : ಶಾಸಕರಿಂದ ಕಾಮಗಾರಿ ಪರಿಶೀಲನೆ

ಸಿರುಗುಪ್ಪ: ತಾಲೂಕಿನ ಶಾನವಾಸಪುರ ಗ್ರಾಮದಲ್ಲಿ ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತರ ಇಲಾಖೆಯ ಅನುದಾನದಡಿ ಜುಮ್ಮಾ ಮಸೀದಿ ಅಭಿವೃದ್ಧಿಗೆ 20 ಲಕ್ಷ ರೂ. ಮಂಜೂರು ಮಾಡಲಾಗಿದ್ದು, ಶಾಸಕ ಬಿ.ಎಂ. ನಾಗರಾಜ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಕಾಮಗಾರಿಯ ಪ್ರಗತಿ ಕುರಿತು ಮಾಹಿತಿ ಪಡೆದ ಅವರು, ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಗುಣಮಟ್ಟದ ಕಾಮಗಾರಿ ನಡೆಸಬೇಕು ಎಂದು ಸೂಚಿಸಿದರು.
ಕಾರ್ಯಕ್ರಮದಲ್ಲಿ ಮುಖಂಡರಾದ ಕುಮಾರ್ ರಾಜೇಗೌಡ, ಅಕ್ಬರ್ ಸಾಬ್, ಬಳಿಗೇರು ಪೀರಾ ಸಾಬ್, ಚೀಣಿಗಿ ಸಾಬ್, ಟಿ. ಬಾಷಾ, ಟಿ. ಶೇಖ್ ಸಾಬ್, ಇಸ್ಮಾಯಿಲ್ ಸಾಬ್, ಜಿಲಾನ್ ಸಾಬ್, ಅಬ್ದುಲ್ ನಬಿ, ನಾಗರಾಜ, ಶರಣಗೌಡ, ನೀಲಕಂಠಗೌಡ, ಹೆಚ್. ಗಣೇಶ್, ಟಿ.ಸಿ. ಮೋಹನ್, ಬಿ.ಎಂ. ಮಣಿಕಂಠ ನಾಯಕ್ ಸೇರಿದಂತೆ ಗ್ರಾಮಸ್ಥರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
Next Story





