ಸಿರುಗುಪ್ಪ | ಬಹುಗ್ರಾಮ ಕುಡಿಯುವ ನೀರಿನ ಕೆರೆಗೆ ತಹಶೀಲ್ದಾರ್ ಭೇಟಿ, ಪರಿಶೀಲನೆ

ಸಿರುಗುಪ್ಪ: ತಾಲೂಕಿನ ಸಿರಿಗೇರಿ ಗ್ರಾಮದ ಸಮೀಪದ ಬಹುಗ್ರಾಮ ಕುಡಿಯುವ ನೀರಿನ ಕೆರೆಗೆ ಗುರುವಾರ ತಹಶೀಲ್ದಾರ್ ಗೌಸಿಯ ಬೇಗಂ ಭೇಟಿ ನೀಡಿ, ಕೆರೆಗೆ ನೀರು ತುಂಬಿಸುವ ಕಾರ್ಯವನ್ನು ಪರಿಶೀಲಿಸಿದರು.
ಕೊಂಚಿಗೇರಿ, ದಾಸಪುರ, ಸಿದ್ದರಾಮಪುರ ಹಾಗೂ ಸಿರಿಗೇರಿ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ 9.85 ಕೋಟಿ ರೂ. ವೆಚ್ಚದಲ್ಲಿ ಕೆರೆಯ ಪುನಶ್ಚೇತನ ಕಾಮಗಾರಿ ಪೂರ್ಣಗೊಳಿಸಲಾಗಿದೆ. ಸದ್ಯ ಕೆರೆಗೆ ನೀರು ತುಂಬಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ತಹಶೀಲ್ದಾರ್ ತಿಳಿಸಿದರು.
ಈಗಾಗಲೇ ಕೆರೆಯಲ್ಲಿ ಶೇ.60ರಷ್ಟು ನೀರು ಸಂಗ್ರಹವಾಗಿದ್ದು, ಮುಂದಿನ ದಿನಗಳಲ್ಲಿಯೂ ನೀರು ತುಂಬಿಸುವ ಕಾರ್ಯ ಮುಂದುವರಿಯಲಿದೆ. ನೀರು ತುಂಬಿಸಲು 30 ಅಶ್ವಶಕ್ತಿಯ ಮೋಟಾರ್ ಅಳವಡಿಸಲಾಗಿದ್ದು, ಈ ತಿಂಗಳ ಅಂತ್ಯದ ವೇಳೆಗೆ ಕೆರೆ ಸಂಪೂರ್ಣ ಭರ್ತಿಯಾಗುವ ನಿರೀಕ್ಷೆಯಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ನೀರಾವರಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮುನೀರ್ ಹಾಗೂ ಸಹಾಯಕ ಎಂಜಿನಿಯರ್ ಶ್ರವಣಕುಮಾರ್ ಉಪಸ್ಥಿತರಿದ್ದರು.
Next Story




