Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Siruguppa | ಹೃದಯ ಕಾಯಿಲೆ ತಡೆಗೆ...

Siruguppa | ಹೃದಯ ಕಾಯಿಲೆ ತಡೆಗೆ ಸಕಾಲದಲ್ಲಿ ಆರೋಗ್ಯ ತಪಾಸಣೆ ಅಗತ್ಯ: ಶರಣಪ್ಪ

ವಾರ್ತಾಭಾರತಿವಾರ್ತಾಭಾರತಿ3 Oct 2026 6:48 PM IST
share
Siruguppa | ಹೃದಯ ಕಾಯಿಲೆ ತಡೆಗೆ ಸಕಾಲದಲ್ಲಿ ಆರೋಗ್ಯ ತಪಾಸಣೆ ಅಗತ್ಯ: ಶರಣಪ್ಪ

ಸಿರುಗುಪ್ಪ : ಬದಲಾದ ಜೀವನಶೈಲಿ, ದೈಹಿಕ ಚಟುವಟಿಕೆಗಳ ಕೊರತೆ, ಅಸಮರ್ಪಕ ಆಹಾರ ಸೇವನೆ, ಧೂಮಪಾನ, ಮದ್ಯಪಾನ ಸೇರಿದಂತೆ ವಿವಿಧ ವ್ಯಸನಗಳಿಂದ ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಾಗುತ್ತಿದೆ. ಹೀಗಾಗಿ ಸಕಾಲದಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸಾರ್ವಜನಿಕ ಆಸ್ಪತ್ರೆಯ ಕಣ್ಣಿನ ತಜ್ಞ ಶರಣಪ್ಪ ಸಲಹೆ ನೀಡಿದರು.

ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಂಗಳವಾರ ವಿಶ್ವ ಹೃದಯ ದಿನಾಚರಣೆ ಅಂಗವಾಗಿ ಅಸಾಂಕ್ರಾಮಿಕ ರೋಗಗಳ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಇಂದಿನ ಜೀವನಶೈಲಿಯಲ್ಲಿ ದೈಹಿಕ ಚಟುವಟಿಕೆ ಕಡಿಮೆಯಾಗಿದ್ದು, ಪೌಷ್ಟಿಕಾಂಶವಿಲ್ಲದ ಆಹಾರ, ಜಂಕ್ ಫುಡ್, ಧೂಮಪಾನ, ಮದ್ಯಪಾನ ಹಾಗೂ ಮಾದಕ ವಸ್ತುಗಳ ಸೇವನೆಯಂತಹ ಅಭ್ಯಾಸಗಳು ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿವೆ. ರಾಸಾಯನಿಕ ಬಣ್ಣ ಹೊಂದಿರುವ ಪಾನೀಯಗಳ ಅತಿಯಾದ ಸೇವನೆಯೂ ಆರೋಗ್ಯಕ್ಕೆ ಹಾನಿಕರವಾಗಬಹುದು. ಇಂತಹ ಜೀವನಶೈಲಿಯಿಂದ ಹೃದಯ ಸಂಬಂಧಿ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದ್ದು, ಯಾವುದೇ ಲಕ್ಷಣಗಳನ್ನು ನಿರ್ಲಕ್ಷಿಸದೆ ಸೂಕ್ತ ಸಮಯದಲ್ಲಿ ವೈದ್ಯರನ್ನು ಸಂಪರ್ಕಿಸಬೇಕು ಎಂದರು.

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಮೊಹಮ್ಮದ್ ಖಾಸಿಂ ಮಾತನಾಡಿ, 30 ವರ್ಷ ಮೇಲ್ಪಟ್ಟವರು ನಿಯಮಿತವಾಗಿ ರಕ್ತದೊತ್ತಡ ಹಾಗೂ ಮಧುಮೇಹದ ತಪಾಸಣೆ ಮಾಡಿಸಿಕೊಳ್ಳಬೇಕು. ಮೆಟ್ಟಿಲು ಏರುವಾಗ ಅತಿಯಾದ ಆಯಾಸ, ಎಡಗೈಯಲ್ಲಿ ಸೆಳೆತ ಅಥವಾ ಎದೆ ಭಾಗದಲ್ಲಿ ನೋವು ಕಾಣಿಸಿಕೊಂಡರೆ ನಿರ್ಲಕ್ಷಿಸದೆ ತಕ್ಷಣ ವೈದ್ಯಕೀಯ ಪರೀಕ್ಷೆಗೆ ಒಳಗಾಗಬೇಕು. ಅಗತ್ಯವಿದ್ದಲ್ಲಿ ಇಸಿಜಿ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಆರೋಗ್ಯವಂತ ಹೃದಯಕ್ಕಾಗಿ ಪ್ರತಿದಿನ ಯೋಗ, ಧ್ಯಾನ ಹಾಗೂ ನಿಯಮಿತ ದೈಹಿಕ ಚಟುವಟಿಕೆಯನ್ನು ರೂಢಿಸಿಕೊಳ್ಳುವುದರ ಜತೆಗೆ ಸಮತೋಲಿತ ಆಹಾರ ಸೇವನೆಗೆ ಆದ್ಯತೆ ನೀಡಬೇಕು ಎಂದರು.

ಕಾರ್ಯಕ್ರಮದಲ್ಲಿ ಸಾರ್ವಜನಿಕ ಆಸ್ಪತ್ರೆಯ ದಂತ ವೈದ್ಯ ಡಾ. ಪವನ್ ವರ್ಮ, ವೈದ್ಯರಾದ ಡಾ. ಶ್ರೀಹರಿ, ಡಾ. ಕಲಂದರ್, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಬಿಪಿಎಂ ಪ್ರಹ್ಲಾದ್, ಹಿರಿಯ ನಿರೀಕ್ಷಣಾಧಿಕಾರಿ ಭೀಮರೆಡ್ಡಿ, ಸಾಂಕ್ರಾಮಿಕ ರೋಗಶಾಸ್ತ್ರಜ್ಞ ನವೀನ್ ಕುಮಾರ್, ಎನ್‌ಸಿಡಿ ವಿಭಾಗದ ಆಪ್ತ ಸಮಾಲೋಚಕ ಮಲ್ಲೇಶಪ್ಪ ಸೇರಿದಂತೆ ಆರೋಗ್ಯ ಸಿಬ್ಬಂದಿ, ಸಾರ್ವಜನಿಕರು ಹಾಗೂ ಪತ್ರಿಕಾ ಮಾಧ್ಯಮದವರು ಉಪಸ್ಥಿತರಿದ್ದರು.

ಶಿಬಿರದಲ್ಲಿ ಸುಮಾರು 88 ಮಂದಿಗೆ ರಕ್ತದೊತ್ತಡ ಮತ್ತು ಮಧುಮೇಹದ ಉಚಿತ ತಪಾಸಣೆ ನಡೆಸಲಾಯಿತು.

Tags

HeartSiruguppa
share
ವಾರ್ತಾಭಾರತಿ
ವಾರ್ತಾಭಾರತಿ
Next Story
X