Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಸಿರುಗುಪ್ಪ | ಸಾರ್ವಜನಿಕ ಶೌಚಾಲಯ...

ಸಿರುಗುಪ್ಪ | ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ ಆಗ್ರಹಿಸಿ ಮಹಿಳೆಯರಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ14 July 2026 7:33 PM IST
share
ಸಿರುಗುಪ್ಪ | ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ ಆಗ್ರಹಿಸಿ ಮಹಿಳೆಯರಿಂದ ಪ್ರತಿಭಟನೆ

ಸಿರುಗುಪ್ಪ: ತಾಲೂಕಿನ ತೆಕ್ಕಲಕೋಟೆ ಪಟ್ಟಣದ 16ನೇ ವಾರ್ಡ್‌ನ ಎಲೆಮಟ್ಟಿ ಗುಡ್ಡದ ಬಳಿಯ ಸರ್ಕಾರಿ ಜಾಗದಲ್ಲಿ ಮಹಿಳೆಯರಿಗಾಗಿ ಸಾರ್ವಜನಿಕ ಶೌಚಾಲಯ ನಿರ್ಮಿಸಬೇಕು ಎಂದು ಆಗ್ರಹಿಸಿ ಸ್ಥಳೀಯ ಮಹಿಳೆಯರು ಪಟ್ಟಣ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಜುಲೈ 10ರಂದು ಮನವಿ ಸಲ್ಲಿಸಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

ಬಯಲು ಶೌಚಕ್ಕೆ ತೆರಳುತ್ತಿದ್ದ ಸ್ಥಳವನ್ನು ಕೆಲವರು ಅತಿಕ್ರಮಣ ಮಾಡಿ ರಸ್ತೆಯ ಮೇಲೆಯೇ ಬಂಡೆಗಲ್ಲುಗಳನ್ನು ಹಾಕಿರುವುದರಿಂದ ಮಹಿಳೆಯರಿಗೆ ತೀವ್ರ ತೊಂದರೆಯಾಗುತ್ತಿದೆ. ಕೂಡಲೇ ಬಂಡೆಗಲ್ಲುಗಳನ್ನು ತೆರವುಗೊಳಿಸಿ, ಅದೇ ಸರ್ಕಾರಿ ಜಾಗದಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಿಸಬೇಕು ಎಂದು ಒತ್ತಾಯಿಸಿದರು.

ವಾರ್ಡ್‌ನಲ್ಲಿ ಸಾರ್ವಜನಿಕ ಶೌಚಾಲಯದ ವ್ಯವಸ್ಥೆಯೇ ಇಲ್ಲ. ನೀರಿನ ಸಮಸ್ಯೆಯಿಂದ ಕೆಲ ಮನೆಗಳಲ್ಲಿರುವ ವೈಯಕ್ತಿಕ ಶೌಚಾಲಯಗಳನ್ನೂ ಬಳಸಲು ಸಾಧ್ಯವಾಗುತ್ತಿಲ್ಲ. ಇದರಿಂದ ಮಹಿಳೆಯರು ನಿತ್ಯ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಸ್ಥಳೀಯ ನಿವಾಸಿ ರಾಮಲಿಂಗಮ್ಮ ತಿಳಿಸಿದರು.

ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪರಶುರಾಮ ಪ್ರತಿಕ್ರಿಯಿಸಿ, ಬಯಲು ಶೌಚಕ್ಕೆ ಅವಕಾಶವಿಲ್ಲ. ವೈಯಕ್ತಿಕ ಶೌಚಾಲಯವಿಲ್ಲದವರು ಅರ್ಜಿ ಸಲ್ಲಿಸಿದರೆ ಸರ್ಕಾರದ ನಿಯಮಾನುಸಾರ ಪರಿಶೀಲಿಸಿ ಮನೆಮನೆಗೆ ಶೌಚಾಲಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಸ್ಥಳೀಯ ನಿವಾಸಿ ಸಿದ್ದಮ್ಮ ಸಿರಿಗೇರಿ ಮಾತನಾಡಿ, ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ ಕೂಡಲೇ ಕ್ರಮ ಕೈಗೊಳ್ಳದಿದ್ದರೆ ಪಟ್ಟಣ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ನರೇಂದ್ರ ಸಿಂಹ, ಶ್ಯಾಮಸುಂದರ, ಈರಮ್ಮ ದೇವರಮನೆ, ನಾಗಮ್ಮ, ಎಸ್. ರೇಣುಕಮ್ಮ, ನರಸಮ್ಮ, ಮಹಾಕಾಳಮ್ಮ, ದೇಪುರ್ ಸಿದ್ದಮ್ಮ, ಗಂಗಮ್ಮ ಸೇರಿದಂತೆ ಹಲವರು ಭಾಗವಹಿಸಿದ್ದರು.

Tags

Siruguppa
share
ವಾರ್ತಾಭಾರತಿ
ವಾರ್ತಾಭಾರತಿ
Next Story
X