Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಸರಕಾರ 224 ವಿಧಾನಸಭಾ ಕ್ಷೇತ್ರಗಳಿಗೆ ತಲಾ...

ಸರಕಾರ 224 ವಿಧಾನಸಭಾ ಕ್ಷೇತ್ರಗಳಿಗೆ ತಲಾ 200 ಕೋಟಿ ರೂ. ಅಭಿವೃದ್ಧಿ ಅನುದಾನ ಬಿಡುಗಡೆ ಮಾಡಲಿ : ಬಿ.ವೈ.ವಿಜಯೇಂದ್ರ

ವಾರ್ತಾಭಾರತಿವಾರ್ತಾಭಾರತಿ10 Sept 2026 9:57 PM IST
share
ಸರಕಾರ 224 ವಿಧಾನಸಭಾ ಕ್ಷೇತ್ರಗಳಿಗೆ ತಲಾ 200 ಕೋಟಿ ರೂ. ಅಭಿವೃದ್ಧಿ ಅನುದಾನ ಬಿಡುಗಡೆ ಮಾಡಲಿ : ಬಿ.ವೈ.ವಿಜಯೇಂದ್ರ

ಬಳ್ಳಾರಿ: ಬಿಜೆಪಿ ಹಮ್ಮಿಕೊಂಡಿರುವ ‘ಬಳ್ಳಾರಿ ಚಲೋ’ 170 ಕಿ.ಮೀ. ಪಾದಯಾತ್ರೆ ಅಂಗವಾಗಿ ನಗರದ ಮುನಿಸಿಪಲ್ ಹೈಸ್ಕೂಲ್ ಮೈದಾನದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಪಕ್ಷದ ಹಿರಿಯ ನಾಯಕರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಬಿ.ವೈ. ವಿಜಯೇಂದ್ರ, ಪಾದಯಾತ್ರೆಯ ವೇಳೆ ರೈತರು, ಕೂಲಿ ಕಾರ್ಮಿಕರು, ಬಡವರು ಮತ್ತು ದಲಿತ ಸಮುದಾಯದ ಜನರು ಎದುರಿಸುತ್ತಿರುವ ಸಂಕಷ್ಟವನ್ನು ಕಣ್ಣಾರೆ ಕಂಡಿದ್ದೇನೆ. ಇಂತಹ ಪರಿಸ್ಥಿತಿಯಲ್ಲೂ ರಾಜ್ಯ ಸರ್ಕಾರ 100 ದಿನಗಳ ಸಂಭ್ರಮ ಆಚರಿಸುತ್ತಿದೆ ಎಂದು ಟೀಕಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ, ಎಸ್ಸಿಪಿ–ಟಿಎಸ್‌ಪಿ ಅನುದಾನದ ಬಳಕೆ ಹಾಗೂ ರೈತರ ಸಮಸ್ಯೆಗಳ ಕುರಿತು ಪ್ರಶ್ನಿಸಿದ ಅವರು, ಮೀಸಲಾತಿ ಅನುದಾನ ವರ್ಗಾವಣೆಯ ಬಗ್ಗೆ ಶ್ವೇತಪತ್ರ ಪ್ರಕಟಿಸಬೇಕು ಎಂದು ಆಗ್ರಹಿಸಿದರು. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ತಲಾ 200 ಕೋಟಿ ರೂ. ಅಭಿವೃದ್ಧಿ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿ, ಯುಪಿಎ ಸರ್ಕಾರದ ಅವಧಿಯಲ್ಲಿ ಹಲವು ಹಗರಣಗಳು ನಡೆದಿದ್ದವು ಎಂದು ಆರೋಪಿಸಿದರು. ಸಾರ್ವಜನಿಕರಿಗೆ ದೊರೆಯುವ ಆಹಾರ ಧಾನ್ಯಗಳು ಕೇಂದ್ರ ಸರ್ಕಾರದ ಯೋಜನೆಗಳಡಿ ನೀಡಲಾಗುತ್ತಿವೆ ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ತಮ್ಮ ಆಡಳಿತಾವಧಿಯಲ್ಲಿ ಭಾಗ್ಯಲಕ್ಷ್ಮಿ ಬಾಂಡ್ ಹಾಗೂ ಗ್ರಾಮೀಣ ವಿದ್ಯಾರ್ಥಿಗಳಿಗೆ ಸೈಕಲ್ ಯೋಜನೆ ಜಾರಿಗೊಳಿಸಲಾಗಿತ್ತು. ಕಾಂಗ್ರೆಸ್ ಸರ್ಕಾರ ಇಂತಹ ಜನಪರ ಯೋಜನೆಗಳನ್ನು ಸ್ಥಗಿತಗೊಳಿಸಿದೆ ಎಂದು ಆರೋಪಿಸಿದರು.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪೊಲೀಸ್ ವರ್ಗಾವಣೆ ಹಾಗೂ ಆಡಳಿತದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದರು. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ತಮ್ಮ ಆಡಳಿತಾವಧಿಯ ಅಭಿವೃದ್ಧಿ ಯೋಜನೆಗಳನ್ನು ಉಲ್ಲೇಖಿಸಿದರು.

ಸಮಾವೇಶದಲ್ಲಿ ಜನಾರ್ದನ ರೆಡ್ಡಿ, ಶ್ರೀರಾಮುಲು, ಆರ್. ಅಶೋಕ್, ಸಿ.ಟಿ. ರವಿ, ಗೋವಿಂದ ಕಾರಜೋಳ, ನಾರಾಯಣಸ್ವಾಮಿ, ರಾಜುಗೌಡ, ಸೋಮಶೇಖರ ರೆಡ್ಡಿ, ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಸೇರಿದಂತೆ ಬಿಜೆಪಿ ನಾಯಕರು ಹಾಗೂ ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು.

Tags

B.Y.Vijayendra.
share
ವಾರ್ತಾಭಾರತಿ
ವಾರ್ತಾಭಾರತಿ
Next Story
X