Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. 7 ಸಾವಿರಕ್ಕೂ ಹೆಚ್ಚು ಅಂಗನವಾಡಿಗಳ...

7 ಸಾವಿರಕ್ಕೂ ಹೆಚ್ಚು ಅಂಗನವಾಡಿಗಳ ಉನ್ನತೀಕರಣ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ವಾರ್ತಾಭಾರತಿವಾರ್ತಾಭಾರತಿ6 July 2024 7:40 PM IST
share
7 ಸಾವಿರಕ್ಕೂ ಹೆಚ್ಚು ಅಂಗನವಾಡಿಗಳ ಉನ್ನತೀಕರಣ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬಳ್ಳಾರಿ : ರಾಜ್ಯದಲ್ಲಿನ ಏಳು ಸಾವಿರಕ್ಕೂ ಹೆಚ್ಚಿನ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಿಸಲಾಗುವುದಲ್ಲದೆ, ಕಾರ್ಯಕರ್ತೆ, ಸಹಾಯಕಿಯರಿಗೆ ನುರಿತವರಿಂದ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಶನಿವಾರ ಬಳ್ಳಾರಿ ನಗರದ ವಾಲ್ಮೀಕಿ ಸಮುದಾಯ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಹಿರಿಯ ನಾಗರಿಕರ ಹಾಗೂ ವಿಕಲಚೇತನರ ಸಬಲೀಕರಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ವಿವಿಧ ಪರಿಕರಗಳ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅಂಗನವಾಡಿ ಉನ್ನತಿಕರಣದಿಂದ ಮಕ್ಕಳ ಸರ್ವತೋಮುಖ ಬೆಳವಣಿಗೆ, ತೂಕ, ಆರೋಗ್ಯ ಮತ್ತು ಗುಣಮಟ್ಟದ ಶಿಕ್ಷಣಕ್ಕೆ ಪೂರಕವಾಗುತ್ತದೆ. ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಚರ್ಚಿಸಲಾಗಿದ್ದು, ಅವರು ತಾತ್ವಿಕ ಒಪ್ಪಿಗೆ ನೀಡಿದ್ದಾರೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ರಾಜ್ಯ ಸರಕಾರವು ಸರ್ವಸಮಾಜದ ಅಭಿವೃದ್ಧಿಗೆ ಬದ್ಧವಾಗಿದ್ದು, ಅದರಲ್ಲೂ ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣವಾಗುತ್ತಿದೆ. ಮುಖ್ಯವಾಗಿ ಗೃಹಲಕ್ಷ್ಮಿ ಯೋಜನೆಯಿಂದ ಪ್ರತಿ ಮಹಿಳೆಯು ಮನೆಯ ಯಜಮಾನಿಯಾಗಿದ್ದಾಳೆ. ಇದರ ಶ್ರೇಯಸ್ಸು ಸಿದ್ದರಾಮಯ್ಯನವರಿಗೆ ಸಲ್ಲುತ್ತದೆ ಎಂದು ಅವರು ನುಡಿದರು.

ಬಳ್ಳಾರಿ ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಒಟ್ಟು ಶೇ.98ರಷ್ಟು ಮಹಿಳೆಯರು ನೋಂದಾಯಿಸಿಕೊಂಡಿದ್ದು, ಇಲ್ಲಿಯವರೆಗೆ ಎಲ್ಲ ತಿಂಗಳ ಹಣ ಜಮಾ ಆಗುತ್ತಿದೆ. ಜೂನ್ ತಿಂಗಳ ಹಣವು ಈ ವಾರದಲ್ಲಿಯೇ ತಮ್ಮ ಖಾತೆಗಳಿಗೆ ಜಮಾ ಆಗಲಿದೆ. ಪ್ರಸ್ತಕ ತಿಂಗಳಿನ ಹಣವು ಸಹ ಇಷ್ಟರಲ್ಲೇ ಪಾವತಿಯಾಗಲಿದೆ ಎಂದು ಅವರು ತಿಳಿಸಿದರು.

ಅಂಗನವಾಡಿ ಕಾರ್ಯಕರ್ತೆಯರ ಸೇವೆ ಅನನ್ಯ: ಚುನಾವಣೆ, ಪಲ್ಸ್-ಪೊಲೀಯೋ ಅಭಿಯಾನ, ಮನೆ ಸಮೀಕ್ಷೆ, ಮುಖ್ಯವಾಗಿ ಕೊರೋನ ಸಂದರ್ಭದಲ್ಲಿ ಅಂಗವಾಡಿ ಕಾರ್ಯಕರ್ತೆ, ಸಹಾಯಕಿಯರು ಗಣನೀಯ ಸೇವೆ ನೀಡಿದ್ದಾರೆ. ಸಮಾಜದಲ್ಲಿ ಅತ್ಯಂತ ಪ್ರಮುಖ ಸೇವೆ ನೀಡುವ ಇಲಾಖೆ ನಮ್ಮದು ಎಂದರೆ ತಪ್ಪಾಗಲಾರದು ಎಂದು ಅವರು ಹೇಳಿದರು.

ಬಳ್ಳಾರಿ ಡಿಸಿ ಬಗ್ಗೆ ಮೆಚ್ಚುಗೆ: ರಾಜ್ಯದಲ್ಲಿ ಪ್ರಥಮ ಬಾರಿಗೆ ಬಳ್ಳಾರಿ ಜಿಲ್ಲಾಡಳಿತದಿಂದ ಜಿಲ್ಲಾ ಖನಿಜ ಪ್ರತಿಷ್ಠಾನ ಯೋಜನೆಯ ಅಡಿಯಲ್ಲಿ ಜಿಲ್ಲೆಯಾದ್ಯಂತ ಅಂಗನವಾಡಿ ಕೇಂದ್ರಗಳಿಗೆ ರೆಫ್ರಿಜರೇಟರ್ ವಿತರಿಸಲಾಗುತ್ತಿದೆ. ಇದೊಂದು ಪ್ರಶಂಸನೀಯ ಕಾರ್ಯವಾಗಿದ್ದು, ಜಿಲ್ಲಾಧಿಕಾರಿಗೆ ಕೃತಜ್ಞತೆ ಸಲ್ಲಿಸಬೇಕು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಅಂಗನವಾಡಿ ಕೇಂದ್ರಗಳಿಗೆ ರೆಫ್ರಿಜರೇಟರ್, ವಿಕಲಚೇತನರಿಗೆ ತ್ರಿಚಕ್ರ ವಾಹನಗಳು, ಪೋಷಣ್ ಆಭಿಯಾನ ಯೋಜನೆಯಡಿ ಆಶಾ ಕಾರ್ಯಕರ್ತೆಯರಿಗೆ ಸ್ಮಾರ್ಟ್‍ಫೋನ್, ಅಂಗನವಾಡಿ ಕೇಂದ್ರಗಳಿಗೆ ತೂಕದ ಯಂತ್ರ, ಆಶಾ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಸಚಿವರು ಸೀರೆ ವಿತರಿಸಿದರು.

ಮುಖ್ಯಮಂತ್ರಿ ಬಾಲಸೇವಾ ಯೋಜನೆಯಡಿ ಕೊರೋನದಲ್ಲಿ ಮೃತಹೊಂದಿದ ಪಾಲಕರ ಮಕ್ಕಳಿಗೆ ಲ್ಯಾಪ್‍ಟಾಪ್, ವಿಶೇಷಚೇತನ ಮಕ್ಕಳಿಗೆ ಟಾಕಿಂಗ್ ಲ್ಯಾಪ್‍ಟಾಪ್, ಬ್ರೈಲ್‍ಕಿಟ್, ಹೊಲಿಗೆ ಯಂತ್ರ ನೀಡಲಾಯಿತು. ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ಅಸಾಧಾರಣ ಸಾಧನೆಗೈದ 8 ಮಕ್ಕಳನ್ನು ಇದೇ ವೇಳೆ ಸನ್ಮಾನಿಸಲಾಯಿತು.

ಬೇಟಿ ಬಚಾವೋ-ಬೇಟಿ ಪಡಾವೋ ಯೋಜನೆಯಡಿ ಎಸೆಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಯರನ್ನು ಸನ್ಮಾನಿಸಿ ಅಭಿನಂದನಾ ಪತ್ರ ಮತ್ತು ಚೆಕ್ ವಿತರಿಸಲಾಯಿತು. ಬಳ್ಳಾರಿ ನಗರ ಶಾಸಕ ನಾ.ರಾ.ಭರತ್ ರೆಡ್ಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ, ಮೇಯರ್ ಮುಲ್ಲಂಗಿ ನಂದೀಶ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಚಿದಾನಂದಪ್ಪ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿ.ಪಂ. ಸಿಇಒ ರಾಹುಲ್ ಶರಣಪ್ಪ ಸಂಕನೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಂಟಿ ನಿರ್ದೇಶಕ ಬಿ.ಎಚ್.ನಿಶ್ಚಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X