Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಮಹಿಳೆಯರು ಅಧಿಕ ಆದಾಯದ ಸಣ್ಣ ಪ್ರಮಾಣದ...

ಮಹಿಳೆಯರು ಅಧಿಕ ಆದಾಯದ ಸಣ್ಣ ಪ್ರಮಾಣದ ಚಟುವಟಿಕೆಗಳನ್ನು ಕೈಗೊಳ್ಳಬೇಕು: ಎಸ್.ಎನ್.ಮಂಜುನಾಥ

ವಾರ್ತಾಭಾರತಿವಾರ್ತಾಭಾರತಿ18 Oct 2025 11:47 PM IST
share
ಮಹಿಳೆಯರು ಅಧಿಕ ಆದಾಯದ ಸಣ್ಣ ಪ್ರಮಾಣದ ಚಟುವಟಿಕೆಗಳನ್ನು ಕೈಗೊಳ್ಳಬೇಕು: ಎಸ್.ಎನ್.ಮಂಜುನಾಥ

ಬಳ್ಳಾರಿ: ಮಹಿಳೆಯರು ಅಧಿಕ ಆದಾಯವನ್ನು ಗಳಿಸುವಂತಹ ಸಣ್ಣ ಪ್ರಮಾಣದ ಚಟುವಟಿಕೆಗಳನ್ನು ಮಹಿಳಾ ಸ್ವಸಹಾಯ ಸಂಘಗಳು ಕೈಗೊಳ್ಳಬೇಕು. ಕೇವಲ ಕೃಷಿ ಇಲಾಖೆ ಅಲ್ಲದೇ, ಮೀನುಗಾರಿಕೆ, ತೋಟಗಾರಿಕಾ ಇಲಾಖೆೆಯಲ್ಲೂ ಸಹ ಗುಂಪುಗಾರಿಕೆಗೆ ಅವಕಾಶವಿದ್ದು, ತಾವೆಲ್ಲರೂ ಸದುಪಯೋಗಪಡಿಸಿಕೊಳ್ಳಬೇಕು ಎಂದು ಉಪ ಕೃಷಿ ನಿರ್ದೇಶಕ ಎಸ್ ಎನ್ ಮಂಜುನಾಥ ಅವರು ಹೇಳಿದರು.

ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಮಹಿಳಾ ಕಿಸಾನ್ ದಿವಸ್ ಅಂಗವಾಗಿ ಬಳ್ಳಾರಿ ಹಾಗೂ ಕುರುಗೋಡು ತಾಲೂಕಿನ ಮಹಿಳಾ ಸ್ವಸಹಾಯ ಗುಂಪುಗಳಿಗೆ ಕೌಶಲ್ಯಾಭಿವೃದ್ಧಿ ಹಾಗೂ ಬಲವರ್ಧನೆ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮಹಿಳೆಯರು ಸಣ್ಣ ಒಕ್ಕೂಟಗಳನ್ನು ಮಾಡಿಕೊಂಡು ಕೃಷಿ ಇಲಾಖೆಯಡಿ ದೊರೆಯುವ ಪಿ.ಎಮ್.ಎಫ್.ಎಂ.ಇ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಬೇಕು. ಕಾರ್ಯಕ್ರಮದಲ್ಲಿ ಪ್ರಾತ್ಯಕ್ಷಿಕೆ ಮುಖಾಂತರ ತೋರಿಸಲಾಗುತ್ತಿರುವ ಜಾಮ್ ತಯಾರಿ ಹಾಗೂ ಕ್ರೋಶೆಟ್ ಚಟುವಟಿಕೆಯನ್ನು ಮುಂದಿನ ಒಂದು ವರ್ಷದೊಳಗೆ ಮಹಿಳಾ ಸ್ವಸಹಾಯ ಸಂಘಗಳು ಅಥವಾ ಕೃಷಿ ಸಖಿಯರು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಮಹಿಳಾ ಸ್ವಸಹಾಯ ಸಂಘಗಳು ತಮ್ಮ ಉತ್ಪನ್ನಗಳನ್ನು ಬ್ರ್ಯಾಂಡಿಂಗ್ ಮಾಡಿ ಮಾರಾಟ ಮಾಡಬೇಕು. ಒಳ್ಳೆಯ ಉತ್ಪನ್ನವನ್ನು ತಯಾರಿಸಿದಲ್ಲಿ, ಮಾರ್ಟ್ ಗಳು ತಮ್ಮಲ್ಲಿಗೇ ಬಂದು ಖರೀದಿಸುತ್ತಾರೆ. ಇದರಿಂದ ತಮ್ಮ ಉತ್ಪನ್ನದ ಬೇಡಿಕೆ ಕೂಡ ಹೆಚ್ಚಾಗುತ್ತದೆ. ಕೃಷಿ ಸಖಿಯರು ಎಲ್ಲಾ ಇಲಾಖೆಗಳ ಸೌಲಭ್ಯಗಳನ್ನು ತಿಳಿದು ಮಹಿಳಾ ಸ್ವಸಹಾಯ ಸಂಘಗಳಿಗೆ ಹಾಗೂ ರೈತ ಶಕ್ತಿ ಗುಂಪುಗಳಿಗೆ ಮಾಹಿತಿ ನೀಡಬೇಕು ಎಂದು ಹೇಳಿದರು.

ಸಹಾಯಕ ಕೃಷಿ ನಿರ್ದೇಶಕರಾದ ನದಾಫ್ ಅವರು ಮಾತನಾಡಿ, ರೈತ ಮಹಿಳೆಯರು ಕೇವಲ ಮನೆಕೆಲಸಕ್ಕಷ್ಟೇ ಸೀಮಿತವಾಗದೆ, ಮನೆಯ ಖರ್ಚನ್ನು ಭರಿಸುವ ಸಣ್ಣ ಉದ್ಯಮಗಳಾದ ಹಸಿಮೆಣಸಿನ ಪುಡಿ, ಅಗಸೆ ಪುಡಿ, ಗುಲಾಬ್ ಜಾಮೂನ್ ಪುಡಿ, ಮಿಕ್ಸ್ಹಣ್ಣಿನ ಜಾಮ್ ಇನ್ನೂ ಮುಂತಾದವುಗಳನ್ನು ಒಂದು ಬ್ರ್ಯಾಂಡ್ ಹೆಸರನ್ನು ನೀಡಿ ತಮ್ಮ ಹಳ್ಳಿಗಳಲ್ಲಿ ಅಥವಾ ತಾಲೂಕಿನ ಮಳಿಗೆಗಳಲ್ಲಿ ಮಾರಬಹುದು. ಇದರಿಂದ ಮಹಿಳೆಯರು ಉಳಿತಾಯದ ಮನೋಭಾವವನ್ನು ಬೆಳೆಸಿಕೊಂಡು ಅಧಿಕ ಲಾಭವನ್ನು ಗಳಿಸಿ ಆರ್ಥಿಕವಾಗಿ ಸಶಕ್ತರಾಗಬೇಕೆಂದು ಮಹಿಳೆಯರಿಗೆ ಹುಮ್ಮಸ್ಸು ನೀಡಿದರು.

ಬಳಿಕ ಮಹೇಶ್ವರಿ ಅವರು ಕಾರ್ಯಕ್ರಮದಲ್ಲಿ ಸುಮಾರು ಎರಡು ಗಂಟೆಗಳ ಕಾಲ ಮಹಿಳಾ ಸ್ವಸಹಾಯ ಗುಂಪುಗಳಿಗೆ ಹಾಗೂ ಕೃಷಿ ಸಖಿಯರಿಗೆ ಸೀರೆಗಳಿಗೆ ಕ್ರೋಶೆಟ್ ಕೆಲಸ (ಕೊಂಬೆ ಹೆಣಿಗೆ) ಹಾಗೂ ವೇಸ್ಟ್ ಬಟ್ಟೆಗಳಿಂದ ಮ್ಯಾಟ್ ತಯಾರಿಸುವುದರ ಬಗ್ಗೆ ಪ್ರಾತ್ಯಕ್ಷಿಕೆಯ ಮುಖಾಂತರ ತರಬೇತಿಯನ್ನು ನೀಡಿದರು. ಸುಮಂಗಲ ಅವರು ವಿವಿಧ ಬಗೆಯ ಹಣ್ಣುಗಳಿಂದ ಸೇಬು, ಬಾಳೆಹಣ್ಣು, ಕಿತ್ತಳೆ, ಕರಿದ್ರಾಕ್ಷಿ, ಸಪೋಟ ಮಿಕ್ಸ್ಹಣ್ಣಿನ ಜಾಮ್ ತಯಾರಿಸುವುದನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಆಡಳಿತಾಧಿಕಾರಿ ಕವಿತಾ, ಕೃಷಿ ಅಧಿಕಾರಿಗಳಾದ ಸೌಮ್ಯ, ರೇಖಾ, ಜ್ಯೋತಿ, ಗಾಯಿತ್ರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಅರುಣಾ, ಸುಷ್ಮ, ಆತ್ಮ ಯೋಜನೆಯ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರಾದ ವಾಣಿ ಕೋರಪ್ಪಳ, ಸಹಾಯಕ ತಾಂತ್ರಿಕ ವ್ಯವಸ್ಥಾಪಕರಾದ ಶಿಲ್ಪಾ ಸೇರಿದಂತೆ ಸ್ವ-ಸಹಾಯ ಗುಂಪಿನ ಸದಸ್ಯರು ಹಾಗೂ ಸಿಬ್ಬಂದಿಗಳು ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X