Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಮಾನವೀಯ ಕಾರ್ಯಕರ್ತರ ಸ್ಮರಣೆ ಅಗತ್ಯ:...

ಮಾನವೀಯ ಕಾರ್ಯಕರ್ತರ ಸ್ಮರಣೆ ಅಗತ್ಯ: ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ

ವಾರ್ತಾಭಾರತಿವಾರ್ತಾಭಾರತಿ12 Aug 2025 9:05 PM IST
share
ಮಾನವೀಯ ಕಾರ್ಯಕರ್ತರ ಸ್ಮರಣೆ ಅಗತ್ಯ: ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ
ಆ.19 ರಂದು ವಿಶ್ವ ಮಾನವೀಯ ದಿನ ಆಚರಣೆ

ಬಳ್ಳಾರಿ: ವಿಪತ್ತಿನ ಸಂದರ್ಭದಲ್ಲಿ ಹಾಗೂ ಸಂಘರ್ಷಗಳಲ್ಲಿ ಸಿಲುಕಿರುವ ಜನರಿಗೆ ಸಹಾಯ ಮಾಡಲು ತಮ್ಮ ಪ್ರಾಣ ಪಣಕ್ಕಿಟ್ಟು ಸೇವೆ ಸಲ್ಲಿಸುವ ಮಾನವೀಯ ಕಾರ್ಯಕರ್ತರನ್ನು ಗೌರವಿಸಲು ಮತ್ತು ಅವರ ಕೆಲಸವನ್ನು ಸ್ಮರಿಸಲು ಆ.19 ರಂದು ವಿಶ್ವ ಮಾನವೀಯ ದಿನ ಆಚರಿಸಲಾಗುತ್ತಿದ್ದು, ಅವರ ಸ್ಮರಣೆ ಅಗತ್ಯವಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.

ಮಂಗಳವಾರ, ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡೀಯೋ ಸಭಾಂಗಣದಲ್ಲಿ ಏರ್ಪಡಿಸಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಾನವೀಯತೆಯ ವಿವಿಧ ಅಂಶಗಳ ಮೇಲೆ ಬೆಳಕು ಚೆಲ್ಲುವುದು, ಮಾನವೀಯ ಕಾರ್ಯಕರ್ತರ ಕೆಲಸವನ್ನು ಗುರುತಿಸುವುದು ಮತ್ತು ಗೌರವಿಸುವುದು ನಮ್ಮ ಕರ್ತವ್ಯವಾಗಿದ್ದು, ಮಾನವೀಯ ತತ್ವಗಳನ್ನು ಎತ್ತಿಹಿಡಿಯುವುದು ಮತ್ತು ಮಾನವೀಯ ಸೇವೆಗಳನ್ನು ಉತ್ತೇಜಿಸುವುದು ಸಹ ಅಷ್ಟೇ ಮುಖ್ಯವಾಗಿದೆ ಎಂದರು.

ಹಾಗಾಗಿ ಆರೋಗ್ಯ ಇಲಾಖೆ, ಕಾರ್ಮಿಕ ಇಲಾಖೆ ಮತ್ತು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಆ.19 ರಂದು ಜಿಲ್ಲೆಯಲ್ಲಿನ ಮಾನವೀಯ ಕಾರ್ಯಕರ್ತರೊಂದಿಗೆ ವಿಡಿಯೋ ಸಂವಾದದ ಮೂಲಕ ಕಾರ್ಯಕ್ರಮ ಆಯೋಜಿಸಲು ಕ್ರಮ ವಹಿಸಬೇಕು ಎಂದು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

16 ಮನೆ - ಹಾನಿ:

ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಲ್ಲಿ ಭಾರಿ ಪ್ರಮಾಣದ ಮಳೆ ಸುರಿದಿದ್ದು, ಸಂಡೂರು ತಾಲ್ಲೂಕು ಹೊರತುಪಡಿಸಿ ಉಳಿದ ನಾಲ್ಕು ತಾಲ್ಲೂಕುಗಳಲ್ಲಿ ವಿವಿಧೆಡೆ 16 ಮನೆ ಹಾನಿಯಾಗಿವೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ಸಭೆಗೆ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು, ವಿಪತ್ತು ನಿರ್ವಹಣಾ ಪ್ರಾಧಿಕಾರ ತಂಡದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಸೂಕ್ತ ಪರಿಹಾರ ಒದಗಿಸಲು ಕ್ರಮವಹಿಸಬೇಕು ಎಂದು ನಿರ್ದೇಶನ ನೀಡಿದರು.

ಮಲೆನಾಡು ಭಾಗದಲ್ಲಿ ಮುಂದಿನ ವಾರದಲ್ಲಿಯೂ ಹೆಚ್ಚಿನ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ಇದ್ದು, ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿನ ಪ್ರಮಾಣ ನೀರು ಹರಿದುಬರುವ ಸಂಭವವಿದೆ. ಹಾಗಾಗಿ ನದಿ ಪಾತ್ರದ ಗ್ರಾಮಗಳಲ್ಲಿ ಮುಂಜಾಗ್ರತೆ ವಹಿಸಲು ಸೂಚಿಸಬೇಕು. ಈ ಕುರಿತು ಎಲ್ಲಾ ತಾಲ್ಲೂಕುಗಳ ತಹಶೀಲ್ದಾರರು ಅಗತ್ಯ ಕ್ರಮ ವಹಿಸಬೇಕು ಎಂದು ಸೂಚಿಸಿದರು.

ರಾಜ್ಯ ವಿಪತ್ತು ಉಪಶಮನ ನಿಧಿಯಡಿ ಕೈಗೊಂಡಿರುವ ವಿವಿಧ ಕಾಮಗಾರಿಗಳಿಗೆ ವೇಗ ನೀಡಬೇಕು. ನಿಗದಿತ ಕಾಲಾವಧಿಯೊಳಗೆ ಪೂರ್ಣಗೊಳಿಸಲು ಮುತುವರ್ಜಿ ವಹಿಸಬೇಕು ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮುಹಮ್ಮದ್ ಎನ್.ಝುಬೇರ್, ಸಹಾಯಕ ಆಯುಕ್ತ ಪಿ.ಪ್ರಮೋದ್, ಡಿಡಿಎಲ್‌ಆರ್ ಅಧಿಕಾರಿಗಳು ಸೇರಿದಂತೆ ಎಲ್ಲಾ ತಾಲ್ಲೂಕು ತಹಶೀಲ್ದಾರರು ವಿಡಿಯೋ ಸಂವಾದದಲ್ಲಿ ಭಾಗವಹಿಸಿದ್ದರು.

Tags

World Humanitarian Day celebrationBellary
share
ವಾರ್ತಾಭಾರತಿ
ವಾರ್ತಾಭಾರತಿ
Next Story
X