Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜ್ಯಾದ್ಯಂತ ಕನ್ನಡ ಕಲಿಕಾ ಕೇಂದ್ರ...

ರಾಜ್ಯಾದ್ಯಂತ ಕನ್ನಡ ಕಲಿಕಾ ಕೇಂದ್ರ ವಿಸ್ತರಣೆ: ಪ್ರೊ.ಪುರುಷೋತ್ತಮ ಬಿಳಿಮಲೆ

ವಾರ್ತಾಭಾರತಿವಾರ್ತಾಭಾರತಿ14 Aug 2025 8:33 PM IST
share
ರಾಜ್ಯಾದ್ಯಂತ ಕನ್ನಡ ಕಲಿಕಾ ಕೇಂದ್ರ ವಿಸ್ತರಣೆ: ಪ್ರೊ.ಪುರುಷೋತ್ತಮ ಬಿಳಿಮಲೆ

ಬೆಂಗಳೂರು, ಆ.14 : ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಾಜ್ಯದಲ್ಲಿ ವಾಸಿಸುತ್ತಿರುವ ಕನ್ನಡೇತರರಿಗೆ ಕನ್ನಡವನ್ನು ಕಲಿಸಲು ಮಹತ್ವಾಕಾಂಕ್ಷಿ ಯೋಜನೆಯನ್ನು ರೂಪಿಸಿದ್ದು, ರಾಜ್ಯಾದ್ಯಂತ ಕನ್ನಡ ಕಲಿಕಾ ಕೇಂದ್ರಗಳನ್ನು ವಿಸ್ತರಿಸುವ ಕೆಲಸವನ್ನು ನಿರ್ವಹಿಸುತ್ತಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ.

ಗುರುವಾರ ವಕೀಲರ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ‘ಕನ್ನಡೇತರ ವಕೀಲರಿಗೆ ಕನ್ನಡ ಕಲಿಕಾ ಅಭಿಯಾನ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಇತಿಹಾಸದಲ್ಲಿ ಮೊದಲ ಬಾರಿಗೆ ಕನ್ನಡೇತರ ವಕೀಲರಿಗೆ ಕನ್ನಡ ಕಲಿಸುವ ಯೋಜನೆಯನ್ನು ಪ್ರಾಧಿಕಾರವು ರೂಪಿಸಿದ್ದು, ಈ ಕಾರ್ಯಕ್ಕೆ ಸಹಕರಿಸಿದ ಬೆಂಗಳೂರು ವಕೀಲರ ಸಾಹಿತ್ಯ ಕೂಟದ ಕ್ರಮ ಅಭಿನಂದನೀಯ ಎಂದರು.

ಸ್ಥಳೀಯರೊಂದಿಗೆ ವ್ಯವಹರಿಸಬೇಕಾದರೆ ಕನ್ನಡೇತರರು ಕನ್ನಡವನ್ನು ಕಲಿಯುವುದು ಬಹಳ ಮುಖ್ಯ. ಇದು ವಿವಿಧ ರೀತಿಯ ಸಾಂಸ್ಕೃತಿಕ ಸಂಘರ್ಷಗಳನ್ನು ನಿವಾರಿಸುವ ಸಾಮಥ್ರ್ಯವನ್ನು ಹೊಂದಿದೆ. ಸೌಹಾರ್ದ ಸಮಾಜ ನಿರ್ಮಾಣದಲ್ಲಿ ಭಾಷೆಯ ಪ್ರಾಮುಖ್ಯತೆ ಹಿರಿದಾಗಿದೆ. ಕನ್ನಡೇತರರು ಹೆಮ್ಮೆಯಿಂದ ಕನ್ನಡವನ್ನು ಕಲಿತಾಗ ಮಾತ್ರ ಈ ಆಶಯವು ಈಡೇರಲು ಸಾಧ್ಯ ಎಂದು ಪುರುಷೋತ್ತಮ ಬಿಳಿಮಲೆ ತಿಳಿಸಿದರು.

ನ್ಯಾಯಮೂರ್ತಿ ನರೇಂದ್ರ ಪ್ರಸಾದ್ ಮಾತನಾಡಿ, ಸಾಂವಿಧಾನಿಕ ಅವಕಾಶಗಳಂತೆ ನ್ಯಾಯಾಲಯಗಳಲ್ಲಿ ಆಂಗ್ಲ ಭಾಷೆ ಬಳಸಬೇಕೆಂಬ ಸೂಚನೆಗಳಿದ್ದರೂ, ಸ್ಥಳೀಯ ಭಾಷೆಯ ಬಳಕೆಗೆ ಯಾವುದೇ ನಿರ್ಬಂಧ ವಿಲ್ಲವೆನ್ನುವ ಅಂಶವನ್ನು ವಕೀಲರು ಗಮನಿಸಿ ತಮ್ಮ ವಾದ ಮಂಡನೆಯಲ್ಲಿ ಕನ್ನಡ ಬಳಕೆಗೆ ಮುಂದಾಗಬೇಕು. ವಕೀಲರಿಗೆ ಕಕ್ಷಿದಾರ ಮುಖ್ಯನಾಗಬೇಕು. ನ್ಯಾಯಾಲಯದ ಪ್ರಕ್ರಿಯೆ ಅವನಿಗೆ ಅರ್ಥವಾಗುವಂತೆ ನಡೆದಾಗ ಮಾತ್ರ ನ್ಯಾಯದಾನ ಒದಗಲು ಸಾಧ್ಯ. ಹೀಗಾಗಿ ಎಲ್ಲ ವಕೀಲರು ಕನ್ನಡ ಕಲಿತು, ಕಕ್ಷಿದಾರರೊಂದಿಗೆ ಕನ್ನಡದಲ್ಲಿ ವ್ಯವಹರಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ ಹಾನಗಲ್ಲ, ವಕೀಲರ ಸಾಹಿತ್ಯ ಕೂಟದ ಅಧ್ಯಕ್ಷ ಮಂಜುನಾಥ ಬಿ.ಗೌಡ ಸೇರಿದಂತೆ ಹಲವರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X