Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಎಲ್‍ಡಿ ಸೌಹಾರ್ದ ಬ್ಯಾಂಕ್ : ಬೆಂಗಳೂರು...

ಬಿಎಲ್‍ಡಿ ಸೌಹಾರ್ದ ಬ್ಯಾಂಕ್ : ಬೆಂಗಳೂರು ನಗರದಲ್ಲಿ ಶಾಖೆ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ24 Aug 2025 7:18 PM IST
share
ಬಿಎಲ್‍ಡಿ ಸೌಹಾರ್ದ ಬ್ಯಾಂಕ್ : ಬೆಂಗಳೂರು ನಗರದಲ್ಲಿ ಶಾಖೆ ಉದ್ಘಾಟನೆ

ಬೆಂಗಳೂರು, ಆ. 24: ವಿಜಯಪುರದಲ್ಲಿ ಕೇಂದ್ರ ಕಚೇರಿ ಹೊಂದಿರುವ ಬಿಎಲ್‍ಡಿ ಸೌಹಾರ್ದ ಸಹಕಾರಿ ಬ್ಯಾಂಕ್‍ನ ಬೆಂಗಳೂರಿನ ಪ್ರಥಮ ಶಾಖೆಗೆ ತುಮಕೂರಿನ ಸಿದ್ಧಗಂಗಾ ಮಠದ ಶ್ರೀಸಿದ್ಧಲಿಂಗ ಸ್ವಾಮಿ ಮತ್ತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ವಿಧ್ಯುಕ್ತ ಚಾಲನೆ ನೀಡಿದರು.

ಒಟ್ಟಾರೆಯಾಗಿ ಇದು 11ನೇ ಶಾಖೆಯಾಗಿದ್ದು, ಇಲ್ಲಿನ ಶಿವಾನಂದ ವೃತ್ತದ ಎಸ್‍ಎನ್‍ಎಸ್ ಪ್ಲಾಜಾದಲ್ಲಿ ಕಚೇರಿಯನ್ನು ಹೊಂದಿದೆ. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಸಿದ್ಧಲಿಂಗ ಸ್ವಾಮಿ, ‘ಬಂಡವಾಳ ಹೂಡಿಕೆ ಮತ್ತು ಉದ್ಯೋಗ ಸೃಷ್ಟಿ, ಕೃಷಿ ಹಾಗೂ ಕೈಗಾರಿಕೆ ಇವೆಲ್ಲವೂ ಸಮಾಜದಲ್ಲಿ ಒಂದಕ್ಕೊಂದು ಪೂರಕವಾಗಿವೆ. ಬೆಂಗಳೂರಿನಲ್ಲಿ ತನ್ನ ಪ್ರಪ್ರಥಮ ಶಾಖೆ ತೆರೆದಿರುವ ಬಿಎಲ್‍ಡಿ ಬ್ಯಾಂಕ್ ಜನರಿಗೆ ನೆರವಿನ ಹಸ್ತ ಚಾಚಲಿ ಎಂದು ಹೇಳಿದರು.

ವೀರಶೈವ ಲಿಂಗಾಯತ ಸಮುದಾಯದವರು ಹೀಗೆ ಸಮಾಜದ ಬಲವರ್ಧನೆಗೆ ರಚನಾತ್ಮಕ ಉಪಕ್ರಮಗಳನ್ನು ಮಾಡುವುದು ಶ್ಲಾಘನೀಯ ಸಂಗತಿಯಾಗಿದೆ. ಇವೆಲ್ಲವೂ ನಂಬಿಕೆ, ವಿಶ್ವಾಸ, ಪಾರದರ್ಶಕತೆ ಮತ್ತು ಪ್ರಾಮಾಣಿಕತೆಗಳ ಮೂಲಕ ನೂರು ಶಾಖೆಗಳ ಮಟ್ಟಕ್ಕೆ ಬೆಳೆಯಲಿ ಎಂದು ಶ್ರೀಗಳು ಆಶಿಸಿದರು.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ‘ಬ್ಯಾಂಕಿಂಗ್ ಕ್ಷೇತ್ರವು ಸರಿಯಾದ ಠೇವಣಿ, ಸಾಲ ನೀಡುವಿಕೆ ಮತ್ತು ಸಾಲ ವಸೂಲಾತಿಗಳ ಆಧಾರದ ಮೇಲೆ ನಡೆಯುತ್ತದೆ. ಬಿಎಲ್‍ಡಿ ಸೌಹಾರ್ದ ಬ್ಯಾಂಕ್ ಕೇವಲ ಮೂರು ವರ್ಷಗಳಲ್ಲಿ ತನ್ನ ಹನ್ನೊಂದನೆ ಶಾಖೆಯನ್ನು ತೆರೆಯುವ ಮಟ್ಟಕ್ಕೆ ಬೆಳೆದಿರುವುದು ಶ್ಲಾಘನೀಯ ಸಂಗತಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಮಾತನಾಡಿ, ‘ಫ.ಗು.ಹಳಕಟ್ಟಿಯವರು ಸ್ಥಾಪಿಸಿದ ಬಿಎಲ್‍ಡಿಇ ಸಂಸ್ಥೆಗೆ ಮೂವತ್ತು ವರ್ಷಗಳ ಹಿಂದೆಯೇ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕಾಲೂರಬೇಕೆಂಬ ಬಯಕೆ ಇತ್ತು. ನಂತರದ ದಿನಗಳಲ್ಲಿ ಸಹೋದರ ಸುನಿಲಗೌಡ ಪಾಟೀಲ್ ಆಸಕ್ತಿ ವಹಿಸಿದ್ದರಿಂದ ಅದು ಕಾರ್ಯರೂಪಕ್ಕೆ ಬಂದಿದೆ. ಎಚ್ಚರಿಕೆಯಿಂದ, ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿದಾಗ ಮಾತ್ರ ಜನರ ವಿಶ್ವಾಸ ಗಳಿಸಲು ಸಾಧ್ಯ. ಆ ನಿಟ್ಟಿನಲ್ಲಿ ಸುನಿಲಗೌಡ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೆಳಿದರು.

ಬೆಂಗಳೂರಿನ ರಾಜಾಜಿನಗರ, ಬಸವೇಶ್ವರ ನಗರ, ವಿಜಯನಗರ, ಮಹಾಲಕ್ಷ್ಮಿ ಲೇಔಟ್ ಮುಂತಾದ ಭಾಗಗಳಲ್ಲಿ ಉತ್ತರ ಕರ್ನಾಟಕದ ಲಕ್ಷಾಂತರ ಮಂದಿ ಇದ್ದಾರೆ. ಇವರ ಹಣಕಾಸು ಅಗತ್ಯಗಳಿಗೆ ಬಿಎಲ್‍ಡಿ ಸೌಹಾರ್ದ ಬ್ಯಾಂಕ್ ಸ್ಪಂದಿಸಲಿ. ಮುಂದಿನ ದಿನಗಳಲ್ಲಿ ಆ ಭಾಗದಲ್ಲೂ ಶಾಖೆ ತೆರೆಯುವಂತಾಗಲಿ ಎಂದು ಅವರು ನುಡಿದಿದ್ದಾರೆ.

ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲೆಯಿಂದ ಬೆಂಗಳೂರಿಗೆ ಬಂದು ಅಪಾರ ಸಾಧನೆ ಮಾಡಿರುವ ವಿದ್ಯಾನಂದ ದೇಸಾಯಿ, ಡಾ.ರವಿಕುಮಾರ ಮುಕಾರ್ತಿಹಾಳ, ನಾನಾಸಾಹೇಬ ಹುಗ್ಗಿ, ಗುರುಪ್ರಸಾದ ನಡಗಡ್ಡಿ ಮತ್ತು ಮೌಲಾಲಿ ಅಲಗೂರು ಇವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಬ್ಯಾಂಕ್ ಅಧ್ಯಕ್ಷ ಸುನೀಲಗೌಡ ಪಾಟೀಲ ಪ್ರಾಸ್ತಾವಿಕವಾಗಿ ಭಾಷಣ ಮಾಡಿ, ಮುಂದಿನ ದಿನಗಳಲ್ಲಿ ಸಾವಿರ ಕೋಟಿ ರೂ.ವಹಿವಾಟು ನಡೆಸುವ ಗುರಿ ಇದೆ ಎಂದರು. ಉಪಾಧ್ಯಕ್ಷ ಶರಣು ಗುಡ್ಡೊಡಗಿ, ಮಾಜಿ ಉಪಮೇಯರ್ ಪುಟ್ಟರಾಜು, ಡಿಎಸ್ ಮ್ಯಾಕ್ಸ್‍ನ ಎಸ್.ಪಿ.ದಯಾನಂದ, ನಾಗಭೂಷಣ ರೆಡ್ಡಿ, ಶ್ಯಾಮರಾಜ್, ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X