ಪ್ರಜ್ವಲ್ ವಿರುದ್ಧದ ಅತ್ಯಾಚಾರ ಪ್ರಕರಣ: ಸಾಕ್ಷಿದಾರನಿಗೆ ಬೆದರಿಕೆ ಕರೆ

ಪ್ರಜ್ವಲ್ ರೇವಣ್ಣ
ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣ ಸಂಬಂಧ ಸಾಕ್ಷ್ಯ ದಾಖಲಿಸಿದ ಬಳಿಕ ಬೆದರಿಕೆ ಕರೆಗಳು ಬಂದಿವೆ ಎಂದು ಪ್ರಮುಖ ಸಾಕ್ಷಿಯೊಬ್ಬರು ವಿಚಾರಣೆ ವೇಳೆ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.
ಹಾಸನ ಜಿಲ್ಲೆಯ ಹೊಳೆನರಸೀಪುರ ಮೂಲದ 43 ವರ್ಷದ ಸಮಾಜ ಸೇವಕಿ 2026ರ ಜುಲೈ 6ರಂದು ಪ್ರಾಸಿಕ್ಯೂಷನ್ ಸಾಕ್ಷಿ-4 ಆಗಿ ನ್ಯಾಯಾಲಯದಲ್ಲಿ ಸಾಕ್ಷ್ಯ ದಾಖಲಿಸಿದ್ದಾರೆ. ಈ ವೇಳೆ ತಮ್ಮ ಹಾಗೂ ತಮ್ಮ ಮಗನ ಸುರಕ್ಷತೆ ಬಗ್ಗೆ ಅವರು ಆತಂಕ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಆಕೆಗೆ ಅಥವಾ ಆಕೆಯ ಮಗನಿಗೆ ಏನಾದರೂ ಆದರೆ ಅದಕ್ಕೆ ಆರೋಪಿಗಳೇ ಹೊಣೆ ಎಂದು ಸಾಕ್ಷಿದಾರರು ನ್ಯಾಯಾಲಯದಲ್ಲಿ ಹೇಳಿದ್ದಾರೆ. ಸಾಕ್ಷಿಯ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯವು ಸಿಐಡಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಿಗೆ ಬೆದರಿಕೆ ಆರೋಪದ ಬಗ್ಗೆ ತನಿಖೆ ನಡೆಸಿ ಮುಂದಿನ ವಿಚಾರಣೆ ದಿನ ವರದಿ ಸಲ್ಲಿಸುವಂತೆ ನಿರ್ದೇಶಿಸಿದೆ ಎಂದು ತಿಳಿದು ಬಂದಿದೆ.
Next Story




