Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ನನ್ನ ಮತ, ನನ್ನ ಹಕ್ಕು’ | ಸೆ.15ರಂದು...

‘ನನ್ನ ಮತ, ನನ್ನ ಹಕ್ಕು’ | ಸೆ.15ರಂದು ವಿಧಾನಸೌಧದಲ್ಲಿ ಅಂತರ್ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಡಾ.ಎಚ್.ಸಿ.ಮಹದೇವಪ್ಪ

ವಾರ್ತಾಭಾರತಿವಾರ್ತಾಭಾರತಿ12 Sept 2025 7:27 PM IST
share
‘ನನ್ನ ಮತ, ನನ್ನ ಹಕ್ಕು’ | ಸೆ.15ರಂದು ವಿಧಾನಸೌಧದಲ್ಲಿ ಅಂತರ್ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ :  ಡಾ.ಎಚ್.ಸಿ.ಮಹದೇವಪ್ಪ


ಬೆಂಗಳೂರು, ಸೆ.12 : ರಾಜ್ಯ ಸರಕಾರವು ಪ್ರಸಕ್ತ ಸಾಲಿನ ‘ಅಂತರ್ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನ’ವನ್ನು ‘ನನ್ನ ಮತ, ನನ್ನ ಹಕ್ಕು’ ಎಂಬ ವಿಷಯದೊಂದಿಗೆ ಆಚರಿಸುತ್ತಿದೆ. ಸೆ.15ರ ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು.

ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ವಿಷಯವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ಪಾತ್ರವನ್ನು ಒತ್ತಿ ಹೇಳುತ್ತದೆ. ಮತದಾನವು ಬರೀ ಹಕ್ಕು ಮಾತ್ರವಲ್ಲ, ಬದಲಾಗಿ ಅದೊಂದು ಹೊಣೆಗಾರಿಕೆಯೂ ಆಗಿದೆ ಎಂಬ ಸಂದೇಶವನ್ನು ಸಾರಲಿದೆ ಎಂದು ಹೇಳಿದರು.

ಈ ಕಾರ್ಯಕ್ರಮವು ಯುವಜನರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ, ನಾಗರಿಕ ಪಾಲ್ಗೊಳ್ಳುವಿಕೆಯನ್ನು ಉತ್ತೇಜಿಸುವ ಹಾಗೂ ಸಂವಿಧಾನಿಕ ಮೌಲ್ಯಗಳನ್ನು ಬಲಪಡಿಸುವ ಉದ್ದೇಶವನ್ನು ಹೊಂದಿದೆ ಎಂದು ಮಹದೇವಪ್ಪ ತಿಳಿಸಿದರು.

ಕೆಸೆಟ್, ನೀಟ್ ಮತ್ತು ಜೆಇಇ ಪರೀಕ್ಷೆಗಳಲ್ಲಿ ಉತ್ತಮ ಸ್ಥಾನಗಳನ್ನು ಗಳಿಸಿದ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಕೋರ್ಸುಗಳಿಗೆ ಪ್ರವೇಶ ಪಡೆದ ಒಂದು ಸಾವಿರ ಪ್ರತಿಭಾನ್ವಿತ ಕ್ರೈಸ್ ಪಿಯು ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ ಕಾರ್ಯಕ್ರಮದಲ್ಲಿ ನೇರ ನಗದು ವರ್ಗಾವಣೆ ಮೂಲಕ 6 ಕೋಟಿ ರೂ.ಗಳ ಪ್ರೋತ್ಸಾಹ ಧನವನ್ನು ವಿತರಿಸಲಿದ್ದಾರೆ ಎಂದು ಅವರು ಹೇಳಿದರು.

ಜಿಲ್ಲಾಡಳಿತದ ನೇತೃತ್ವದಲ್ಲಿ ಪ್ರತಿ ಜಿಲ್ಲೆಗಳಲ್ಲೂ ಸೈಕಲ್ ಜಾಥಾ ಹಮ್ಮಿಕೊಳ್ಳಲಾಗಿದೆ. ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಶ್ರಯದಲ್ಲಿ ಪ್ರಜಾಪ್ರಭುತ್ವ ಮತ್ತು ಏಕತೆಯ ಸಂದೇಶಗಳನ್ನು ಹೊತ್ತ ಬೈಕ್‍ಗಳು ಎಲ್ಲ ಜಿಲ್ಲಾ ಕೇಂದ್ರಗಳಿಂದ ಬೆಂಗಳೂರಿನವರೆಗೆ ಬೈಕ್ ಜಾಥಾ ನಡೆಸಲಿವೆ ಎಂದು ಅವರು ಹೇಳಿದರು.

ಪ್ರಜಾಪ್ರಭುತ್ವದ ಮೌಲ್ಯಗಳ ಸೃಜನಶೀಲ ಅಭಿವ್ಯಕ್ತಿತ್ವವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯ ನೇತೃತ್ವದಲ್ಲಿ ಹಾಗೂ ಲಿಡ್ಕರ್ ಪ್ರಾಯೋಜಕತ್ವದಲ್ಲಿ ತಾಲೂಕು, ಜಿಲ್ಲೆ ಮತ್ತು ರಾಜ್ಯಮಟ್ಟದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲೆ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಹದೇವಪ್ಪ ಹೇಳಿದರು.

ದೈನಂದಿನ ಜೀವನದಲ್ಲಿ ಪ್ರಜಾಪ್ರಭುತ್ವದ ಪಾತ್ರವನ್ನು ಚಿತ್ರಗಳ ಮೂಲಕ ಪ್ರದರ್ಶಿಸುವ ನಿಟ್ಟಿನಲ್ಲಿ ಉನ್ನತ ಶಿಕ್ಷಣ ಇಲಾಖೆಯು ಛಾಯಾಚಿತ್ರ ಸ್ಪರ್ಧೆಗಳನ್ನು ಆಯೋಜಿಸಿದೆ. ಕ್ರೈಸ್ ವತಿಯಿಂದ ವಿದ್ಯಾರ್ಥಿಗಳಿಗಾಗಿ ಭಾಷಣ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ‘ನನ್ನ ಮತ, ನನ್ನ ಹಕ್ಕು’, ಸಂವಿಧಾನದ ಪೀಠಿಕೆ ಮತ್ತು ಮಹಾತ್ಮ ಗಾಂಧೀಜಿ ಅವರ ದೃಷ್ಟಿಕೋನದಲ್ಲಿ ‘ಗಾಂಧಿ ಭಾರತ’ ಈ ಮೂರು ವಿಷಯಗಳು ಭಾಷಣ ವಿಷಯ ವಸ್ತುವಾಗಿದೆ ಎಂದು ಅವರು ಮಾಹಿತಿ ನೀಡಿದರು.

ವಿದ್ಯಾರ್ಥಿಗಳು ಮತ್ತು ಯುವಕರು ಪ್ರಜಾಪ್ರಭುತ್ವ ಮೌಲ್ಯಗಳನ್ನು ಸೃಜನಶೀಲವಾಗಿ ವ್ಯಕ್ತಪಡಿಸಲು ಮತ್ತು ಜಾಗೃತಿ ಮೂಡಿಸುವುದನ್ನು ಪ್ರೋತ್ಸಾಹಿಸಲು ಚಿತ್ರಕಲೆ, ಛಾಯಾಚಿತ್ರ ಮತ್ತು ಚರ್ಚಾ ಸ್ಪರ್ಧೆಗಳಿಗೆ ಚಾಲನೆ ನೀಡಲಾಗುವುದು. ನ.26ರವರೆಗೆ ಈ ಕಾರ್ಯಕ್ರಮಗಳು ನಡೆಯಲಿವೆ ಎಂದು ಅವರು ಹೇಳಿದರು.

ಅಲ್ಲದೇ, ಚರ್ಚೆಗಳು, ಸಂಗೀತ ಮತ್ತು ಯುವ ಧ್ವನಿಗಳ ಮೂಲಕ ಸಂವಿಧಾನದ ಮಹತ್ವ, ಚುನಾವಣಾ ಜಾಗೃತಿ ಮತ್ತು ನಾಗರಿಕರ ಭಾಗವಹಿಸುವಿಕೆಯ ಕುರಿತು ಸಂದೇಶಗಳನ್ನು ನೀಡಲು ‘ಡೆಮಾಕ್ರಸಿ ರೇಡಿಯೊ’ ಎಂಬ ಅಂತರ್ಜಾಲ ಆಧಾರಿತ ಹೊಸ ರೇಡಿಯೊ ವೇದಿಕೆ ಆರಂಭಿಸಲಾಗುವುದು ಎಂದು ಮಹದೇವಪ್ಪ ತಿಳಿಸಿದರು.

ಬಹುಮಾನಗಳ ವಿವರ:

ರಾಜ್ಯ ಮಟ್ಟದ ಬಹುಮಾನಗಳು: ಪ್ರಥಮ ಬಹುಮಾನ- 1ಲಕ್ಷ ರೂ., ದ್ವಿತೀಯ ಬಹುಮಾನ-50 ಸಾವಿರ ರೂ., ತೃತೀಯ ಬಹುಮಾನ-25 ಸಾವಿರ ರೂ.ಗಳು.

ಜಿಲ್ಲಾ ಮಟ್ಟದ ಬಹುಮಾನಗಳು: ಪ್ರಥಮ ಬಹುಮಾನ-25 ಸಾವಿರ ರೂ., ದ್ವಿತೀಯ ಬಹುಮಾನ-15 ಸಾವಿರ ರೂ., ತೃತೀಯ ಬಹುಮಾನ-10 ಸಾವಿರ ರೂ.ಗಳು.

ತಾಲೂಕು ಮಟ್ಟದ ಬಹುಮಾನಗಳು: ಪ್ರಥಮ ಬಹುಮಾನ-15 ಸಾವಿರ ರೂ., ದ್ವಿತೀಯ ಬಹುಮಾನ-10 ಸಾವಿರ ರೂ., ತೃತೀಯ ಬಹುಮಾನ-5 ಸಾವಿರ ರೂ.ಗಳು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X