Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಎಸೆಸೆಲ್ಸಿ, ಪಿಯು ವಿದ್ಯಾರ್ಥಿಗಳಿಗೆ ಶುಭ...

ಎಸೆಸೆಲ್ಸಿ, ಪಿಯು ವಿದ್ಯಾರ್ಥಿಗಳಿಗೆ ಶುಭ ಸುದ್ದಿ: ಉತ್ತೀರ್ಣ ಅಂಕದಲ್ಲಿ ಇಳಿಕೆ; ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಜಾರಿ

ವಾರ್ತಾಭಾರತಿವಾರ್ತಾಭಾರತಿ15 Oct 2025 2:21 PM IST
share
ಎಸೆಸೆಲ್ಸಿ, ಪಿಯು ವಿದ್ಯಾರ್ಥಿಗಳಿಗೆ ಶುಭ ಸುದ್ದಿ: ಉತ್ತೀರ್ಣ ಅಂಕದಲ್ಲಿ ಇಳಿಕೆ; ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಜಾರಿ
ಎಸೆಸೆಲ್ಸಿಯಲ್ಲಿ 206, ದ್ವಿತೀಯ ಪಿಯುಸಿಯಲ್ಲಿ 198 ಅಂಕ ಗಳಿಸಿದರೆ ಉತ್ತೀರ್ಣ

ಬೆಂಗಳೂರು, ಜು.24: ಎಸೆಸೆಲ್ಸಿ ಮತ್ತು ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ರಾಜ್ಯ ಶಿಕ್ಷಣ ಇಲಾಖೆ ಶುಭ ಸುದ್ದಿ ನೀಡಿದೆ. ಎಸೆಸೆಲ್ಸಿಯಲ್ಲಿ 625ಕ್ಕೆ ಕನಿಷ್ಠ 206 ಹಾಗೂ ದ್ವಿತೀಯ ಪಿಯುಸಿಯಲ್ಲಿ 600ಕ್ಕೆ 198 ಅಂಕಗಳನ್ನು ಗಳಿಸುವ ವಿದ್ಯಾರ್ಥಿಗಳು ಉತ್ತೀರ್ಣರಾಗಲಿದ್ದಾರೆ. ಪ್ರಸಕ್ತ (2025-26) ಶೈಕ್ಷಣಿಕ ಸಾಲಿನಿಂದ ಹೊಸ ನಿಯಮ ಜಾರಿಯಾಗಲಿದೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಚಿವರು, ಎಸೆಸೆಲ್ಸಿ ಪರೀಕ್ಷೆಯ ಉತ್ತೀರ್ಣತೆ ಪ್ರಮಾಣವನ್ನು 35 ರಿಂದ 33ಕ್ಕೆ ಇಳಿಕೆ ಮಾಡಲಾಗಿದೆ. ಒಟ್ಟು 625 ಅಂಕಗಳಲ್ಲಿ ಕನಿಷ್ಠ 206 ಅಂಕಗಳನ್ನು ಗಳಿಸಬೇಕು ಎಂದು ತಿಳಿಸಿದ್ದಾರೆ.

ಹೊಸ ನಿಯಮಗಳ ಪ್ರಕಾರ, ಆಂತರಿಕ ಮೌಲ್ಯಮಾಪನ ಮತ್ತು ಬಾಹ್ಯ ಪರೀಕ್ಷೆಯಲ್ಲಿ ಸರಾಸರಿ ಶೇ.33 ಅಂಕಗಳನ್ನು ಗಳಿಸಿದ ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಘೋಷಿಸಲಾಗುತ್ತದೆ. ಆಯಾ ವಿಷಯದ ಒಟ್ಟು ಅಂಕಗಳಲ್ಲಿ ಪ್ರತೀ ವಿಷಯದಲ್ಲಿ ಕನಿಷ್ಠ ಶೇ.30 ಅಂಕಗಳನ್ನು ಒಳಗೊಂಡಂತೆ ಒಟ್ಟು 625 ಅಂಕಗಳಲ್ಲಿ ಕನಿಷ್ಠ 206 ಅಂಕಗಳನ್ನು ಗಳಿಸಬೇಕು ಎಂದರು.

ಹೊಸ ನಿಯಮಗಳಿಗೆ ಸಾರ್ವಜನಿಕರು ಆಕ್ಷೇಪ ಸಲ್ಲಿಸಲು ಸರಕಾರ 15 ದಿನಗಳ ಕಾಲಾವಕಾಶ ನೀಡೀತ್ತು. ಅಂಕ ಕಡಿತ ವಿಚಾರವಾಗಿ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಲಾಗಿದೆ. ಆ ಪೈಕಿ ಶೇ.33ರಷ್ಟು ಪರವಾಗಿ 701 ಪತ್ರ ಮತ್ತು ಶೇ.35ರಷ್ಟು ಪರವಾಗಿ 8 ಪತ್ರಗಳು ಬಂದಿದ್ದವು. ಹೀಗಾಗಿ 2025-26ನೇ ಸಾಲಿನಿಂದ ಎಸೆಸೆಲ್ಸಿಯಲ್ಲಿ ಪ್ರಥಮ ಭಾಷೆ ಹೊರತುಪಡಿಸಿ ಶೇ.33 ಫಲಿತಾಂಶ ಬಂದರೆ ವಿದ್ಯಾರ್ಥಿಗಳು ತೇರ್ಗಡೆ ಆಗಲಿದ್ದಾರೆ ಎಂದು ಅವರು ಹೇಳಿದರು.

ದ್ವಿತೀಯ ಪಿಯುಸಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 198 ಅಂಕಗಳನ್ನು ಪಡೆದರೆ ಉತ್ತೀರ್ಣರಾಗುತ್ತಾರೆ. ಯಾವುದೇ ಪ್ರಾಯೋಗಿಕ ಪರೀಕ್ಷೆ ಅಥವಾ ಆಂತರಿಕ ಮೌಲ್ಯಮಾಪನವಿಲ್ಲದ ವಿಷಯಗಳಲ್ಲಿ, 80 ಅಂಕಗಳ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆಂದು ಘೋಷಿಸಲು, ಅಭ್ಯರ್ಥಿಯು ಅಂತಹ ಪ್ರತಿಯೊಂದು ವಿಷಯದಲ್ಲಿ ಕನಿಷ್ಠ 24 ಅಂಕಗಳನ್ನು ಪಡೆಯಬೇಕಾಗುತ್ತದೆ ಎಂದು ಸಚಿವರು ತಿಳಿಸಿದರು.

ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಅಥವಾ ಆಂತರಿಕ ಮೌಲ್ಯಮಾಪನ ಇರುವ ವಿಷಯಗಳಲ್ಲಿ, 70 ಅಂಕಗಳ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಅಭ್ಯರ್ಥಿಯು ಅಂತಹ ಪ್ರತಿಯೊಂದು ವಿಷಯದಲ್ಲೂ ಕನಿಷ್ಠ 21 ಅಂಕಗಳ ಪಡೆಯಬೇಕು.

ಪ್ರಾಯೋಗಿಕ ಅಂಶವನ್ನು ಹೊಂದಿರುವ ವಿಷಯಗಳಿಗೆ ಸಂಬಂಧಿಸಿದಂತೆ ಸಾಮಾನ್ಯ ಷರತ್ತುಗಳ ಪ್ರಕಾರ, ಪ್ರಾಯೋಗಿಕ ಪರೀಕ್ಷೆಗೆ ಅಸ್ತಿತ್ವದಲ್ಲಿರುವ 30 ಅಂಕಗಳ ಹಂಚಿಕೆಯನ್ನು ವಿಭಾಗ ಮಾಡಲಾಗುವುದು. ಅದರಂತೆ ಪ್ರಾಯೋಗಿಕ ಪರೀಕ್ಷೆಯನ್ನು ಗರಿಷ್ಠ 20 ಅಂಕಗಳಿಗೆ ನಡೆಸಲಾಗುವುದು. ಉಳಿದ 10 ಅಂಕಗಳನ್ನು ಹಾಜರಾತಿ ಸೇರಿ ಮತ್ತಿತರ ಷರತ್ತುಗಳಿಗೆ ನಿಗದಿಪಡಿಸಲಾಗಿದೆ ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X