ನ.14ರಿಂದ 21ರವರೆಗೆ 5ನೇ ಮಿನಿ ಕರ್ನಾಟಕ ಕ್ರೀಡಾಕೂಟ; ರಾಜ್ಯದಿಂದ ಹೆಚ್ಚು ಮಂದಿ ಒಲಿಂಪಿಕ್ಸ್ನಲ್ಲಿ ಪ್ರತಿನಿಧಿಸಬೇಕು: ಡಾ.ಗೋವಿಂದರಾಜ್

ಬೆಂಗಳೂರು : ರಾಜ್ಯ ಸರಕಾರ, ಕರ್ನಾಟಕ ಒಲಿಂಪಿಕ್ ಸಂಸ್ಥೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 5ನೇ ಮಿನಿ ಕರ್ನಾಟಕ ಕ್ರೀಡಾಕೂಟ-2026 ನ.14ರಿಂದ 21ರವರೆಗೆ ಕಂಠೀರವ ಕ್ರೀಡಾಂಗಣ ಸೇರಿದಂತೆ ಬೆಂಗಳೂರಿನ ವಿವಿಧ ಕ್ರೀಡಾಂಗಣಗಳಲ್ಲಿ ಆಯೋಜಿಸಲಾಗುತ್ತಿದೆ ಎಂದು ಕರ್ನಾಟಕ ಒಲಿಂಪಿಕ್ ಸಂಸ್ಥೆ ಅಧ್ಯಕ್ಷ ಹಾಗೂ ಪರಿಷತ್ ಸದಸ್ಯ ಡಾ.ಕೆ. ಗೋವಿಂದರಾಜ್ ತಿಳಿಸಿದ್ದಾರೆ.
ಗುರುವಾರ ನಗರದ ಕಂಠೀರವ ಕ್ರೀಡಾಂಗಣದ ಆವರಣದಲ್ಲಿರುವ ಕರ್ನಾಟಕ ಒಲಿಂಪಿಕ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ದಿನಗಳಲ್ಲಿ ಕರ್ನಾಟಕದಿಂದ ಹೆಚ್ಚು ಕ್ರೀಡಾಪಟುಗಳು ಒಲಿಂಪಿಕ್ಸ್ನಲ್ಲಿ ಪ್ರತಿನಿಧಿಸಬೇಕು ಎಂಬುದೇ ನನ್ನ ಕನಸು. ಇದಕ್ಕೆ ಮಿನಿ ಕರ್ನಾಟಕ ಕ್ರೀಡಾಕೂಟ ಯುವ ಕ್ರೀಡಾಪಟುಗಳ ಪಾಲಿಗೆ ಉತ್ತಮ ವೇದಿಕೆಯಾಗಿದೆ ಎಂದರು. 27 ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ.
2020ರಲ್ಲಿ ಮೊದಲ ಬಾರಿಗೆ ಈ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. 14 ವರ್ಷ ವಯೋಮಿತಿಯ ಸುಮಾರು 5 ಸಾವಿರ ಕ್ರೀಡಾಪಟುಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಗೋವಿಂದರಾಜ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತ ಎಂ.ಎನ್.ಅನುಚೇತ್, ಕರ್ನಾಟಕ ರಾಜ್ಯದ ವಿವಿಧ ಕ್ರೀಡಾ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.




