Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಎಸ್ಟೀಮ್ ಮಾಲ್‍ನಿಂದ ಬ್ಯಾಪ್ಟಿಸ್ಟ್...

ಎಸ್ಟೀಮ್ ಮಾಲ್‍ನಿಂದ ಬ್ಯಾಪ್ಟಿಸ್ಟ್ ಆಸ್ಪತ್ರೆಯ ವರೆಗೆ 1.5 ಕಿ.ಮೀ.ಉದ್ದದ ನೂತನ ಟನಲ್ ರಸ್ತೆ: ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ18 Aug 2025 11:43 PM IST
share
ಎಸ್ಟೀಮ್ ಮಾಲ್‍ನಿಂದ ಬ್ಯಾಪ್ಟಿಸ್ಟ್ ಆಸ್ಪತ್ರೆಯ ವರೆಗೆ 1.5 ಕಿ.ಮೀ.ಉದ್ದದ ನೂತನ ಟನಲ್ ರಸ್ತೆ: ಡಿ.ಕೆ.ಶಿವಕುಮಾರ್
‘ನವೆಂಬರ್ ಹೊತ್ತಿಗೆ ಇನ್ನೊಂದು ಭಾಗದ ಲೂಪ್ ಲೋಕಾರ್ಪಣೆ’

ಬೆಂಗಳೂರು: ಬೆಂಗಳೂರು ನಗರದ ಸಂಚಾರ ದಟ್ಟಣೆ ತಪ್ಪಿಸಲು ನಮ್ಮ ಸರಕಾರ ಹೆಜ್ಜೆಯನ್ನಿಟ್ಟಿದ್ದು, ಬಳ್ಳಾರಿ ರಸ್ತೆಯಲ್ಲಿನ ಎಸ್ಟೀಮ್ ಮಾಲ್‍ನಿಂದ ಬ್ಯಾಪ್ಟಿಸ್ಟ್ ಆಸ್ಪತ್ರೆಯ ವರೆಗೆ 1.5 ಕಿ. ಮೀ. ಉದ್ದದ ನೂತನ ಟನಲ್ ರಸ್ತೆ ನಿರ್ಮಿಸಲಾಗುವುದು. ಇದರ ಸಾಧಕ-ಭಾದಕ ಹಾಗೂ ಹಣಕಾಸಿನ ನೆರವಿನ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಳಿ ಚರ್ಚೆ ನಡೆಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಸೋಮವಾರ ಇಲ್ಲಿನ ಹೆಬ್ಬಾಳ ಜಂಕ್ಷನ್‍ನಲ್ಲಿ ನಿರ್ಮಾಣ ಮಾಡಿರುವ ನೂತನ ಮೇಲ್ಸೇತುವೆಯನ್ನು ಲೋಕಾರ್ಪಣೆಗೊಳಿಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕೆ.ಆರ್.ಪುರಂ ಕಡೆಯಿಂದ ಮೇಖ್ರಿ ಸರ್ಕಲ್ ಭಾಗದ ಲೂಪ್‍ಅನ್ನು 80 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ ಎಂದರು.

ಇನ್ನೊಂದು ಭಾಗದ ಲೂಪ್ ಅನ್ನು ನವೆಂಬರ್ ಹೊತ್ತಿಗೆ ಪೂರ್ಣಗೊಳಿಸಲಾಗುವುದು. ಒಟ್ಟು 300 ಕೋಟಿ ರೂ.ವೆಚ್ಚದಲ್ಲಿ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಎರಡು ಪಥಗಳು ಇರುವ ಕಡೆ ಆರು ಪಥಗಳು ಬರುವಂತೆ ಯೋಜನೆ ರೂಪಿಸಲಾಗಿದೆ. 17ಸಾವಿರ ಕೋಟಿ ರೂ.ವೆಚ್ಚದಲ್ಲಿ 16.5ಕಿ.ಮೀ. ಉದ್ದದ ಟನಲ್ ರಸ್ತೆಗೆ ಟೆಂಡರ್ ಕರೆಯಲಾಗಿದೆ. ಹೆಬ್ಬಾಳ ಜಂಕ್ಷನ್‍ನ ಮತ್ತೊಂದು ಲೂಪ್ ನಿರ್ಮಾಣವನ್ನು ತ್ವರಿತಗೊಳಿಸಲು ಬಿಡಿಎ ಅಧ್ಯಕ್ಷ ಹಾರಿಸ್ ಜವಾಬ್ದಾರಿ ಹೊತ್ತುಕೊಂಡಿದ್ದಾರೆ ಎಂದರು.

ವಿಮಾನ ನಿಲ್ದಾಣದಿಂದ ಬರುವವರಿಗೆ ಸೇರಿದಂತೆ ಎಲ್ಲರೂ ಸಂಚಾರದಟ್ಟಣೆ ಅನುಭವಿಸುತ್ತಾ ಇದ್ದರು. ಇದನ್ನು ತಪ್ಪಿಸಲು ನಮ್ಮ ಸರಕಾರ ಬದ್ದವಾಗಿದೆ. ಹೆಬ್ಬಾಳ ಜಂಕ್ಷನ್‍ನಿಂದ ಸಿಲ್ಕ್ ಬೋರ್ಡ್ ಜಂಕ್ಷನ್ ವರೆಗೆ ಸಂಚಾರ ದಟ್ಟನೆ ನಿಯಂತ್ರಣಕ್ಕೆ ಏನೇನು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ವಿವರಣೆ ನೀಡಿದ್ದೇನೆ ಎಂದು ಅವರು ತಿಳಿಸಿದರು.

ಹಣ ಮುಖ್ಯವಲ್ಲ: ‘ನಾನು ಪಾರದರ್ಶಕವಾಗಿದ್ದೇನೆ, ನನಗೆ ಕೆಲಸವಾಗುವುದು ಮುಖ್ಯವೇ ಹೊರತು ಹಣವಲ್ಲ. ಯುವ ಸಂಸದನೊಬ್ಬ ನಾವು ಹಣಕ್ಕಾಗಿ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾನೆ. ನಮಗೆ ಹಣದ ಅಗತ್ಯವಿಲ್ಲ. ಅವರ(ಬಿಜೆಪಿ)ಅಧಿಕಾರಾವಧಿಯಲ್ಲಿ ಒಂದು ಸಣ್ಣ ಕೆಲಸವನ್ನೂ ಮಾಡಿಲ್ಲ. ಅವರು ಒಂದೇ ಒಂದು ಕೆಲಸ ತೋರಿಸಲಿ. ಕೇಂದ್ರದಿಂದ ಒಂದೇ ಒಂದು ರೂ.ಹಣವನ್ನು ತರದಿರುವುದು ನಾಚಿಕೆಗೇಡಿನ ಸಂಗತಿ. ಬೆಂಗಳೂರು ಜಾಗತಿಕ ನಗರ, ಪ್ರಧಾನಿಯವರು ಇದನ್ನು ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.

ನೂತನ ಮೇಲ್ಸೆತುವೆಯಿಂದ ಮೇಖ್ರಿ ಸರ್ಕಲ್ ಬಳಿ ಸಂಚಾರ ದಟ್ಟಣೆ ತಗ್ಗಲಿದೆ. ಯಾರ್ಯಾರೋ ಏನೇನೋ ಮಾತನಾಡುವವರಿಗೆಲ್ಲ ನಾವು ಉತ್ತರ ನೀಡಲು ಆಗುವುದಿಲ್ಲ. ಈ ಲೂಪ್ ಕಾಮಗಾರಿಯನ್ನು ಮುತುವರ್ಜಿವಹಿಸಿ ಮಾಡಲಾಗಿದೆ. ಏಕೆಂದರೆ ಒಂದು ಕಡೆ ಮೆಟ್ರೋ ಮಾರ್ಗ, ಇನ್ನೊಂದು ಕಡೆ ರೈಲ್ವೆ ಮಾರ್ಗವಿದ್ದು ಅತ್ಯಂತ ತಾಂತ್ರಿಕವಾಗಿ ಕಾಮಗಾರಿ ಪೂರ್ಣಗೊಳಿಸಲಾಗಿದೆ ಎಂದರು.

ರಾಜಕೀಯದಲ್ಲಿ ಧರ್ಮವಿರಬೇಕೆ ಹೊರತು, ಧರ್ಮದಲ್ಲಿ ರಾಜಕಾರಣವಿರಬಾರದು. ಬಿಜೆಪಿಯವರು ಧರ್ಮದಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ತಮ್ಮ ರಾಜಕೀಯಕ್ಕೆ ಧರ್ಮ ಬಳಸಿಕೊಳ್ಳುತ್ತಿದ್ದಾರೆ. ಎಸ್‍ಐಟಿ ವರದಿ ಸಲ್ಲಿಕೆ ಸಂಬಂಧ ಗೃಹ ಸಚಿವರು ಉತ್ತರಿಸುತ್ತಾರೆ’

-ಡಿ.ಕೆ.ಶಿವಕುಮಾರ್, ಉಪಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X