5 ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ 1.84 ಲಕ್ಷ ಗಣೇಶ ಮೂರ್ತಿ ವಿಸರ್ಜನೆ

ಸಾಂದರ್ಭಿಕ ಚಿತ್ರ | File Photo
ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ)ದ 5 ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಸೆ.14ರಂದು ಸಂಚಾರಿ/ಮೊಬೈಲ್ ಟ್ಯಾಂಕರ್ ಹಾಗೂ ಕೆರೆ ಅಂಗಳದ ಶಾಶ್ವಾತ/ತಾತ್ಕಾಲಿಕ ಕಲ್ಯಾಣಿಗಳಲ್ಲಿ ಒಟ್ಟು 1.84 ಲಕ್ಷ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿದೆ ಎಂದು ಜಿಬಿಎ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಜಿಬಿಎ 5 ನಗರ ಪಾಲಿಕೆಗಳ ಪೈಕಿ ಬೆಂಗಳೂರು ಕೇಂದ್ರ ನಗರ ಪಾಲಿಕೆಯಲ್ಲಿ 28,860 ಗಣೇಶ ಮೂರ್ತಿ, ಪೂರ್ವ ನಗರ ಪಾಲಿಕೆ 8,460, ಉತ್ತರ ನಗರ ಪಾಲಿಕೆ 16,857, ದಕ್ಷಿಣ ನಗರ ಪಾಲಿಕೆ 10,372, ಪಶ್ಚಿಮ ನಗರ ಪಾಲಿಕೆ 12,0079 ಸೇರಿ ಒಟ್ಟು 1,84,628 ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೆ.14ರಂದು ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆಯಿಂದ ಎಲ್ಲ ಗಣೇಶ ಮೂರ್ತಿಗಳನ್ನು ಸುಸೂತ್ರವಾಗಿ ವಿಸರ್ಜನೆ ಮಾಡಲಾಗಿದ್ದು, ಈ ಕಾರ್ಯ ಮುಂದುವರೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
Next Story




