ಕೇಂದ್ರ ಸಚಿವರ ಹೆಸರಿನಲ್ಲಿ ರಾಜ್ಯಪಾಲರಿಗೆ ಕರೆ; ಪ್ರಕರಣ ದಾಖಲು

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಬೆಂಗಳೂರು, ಸೆ.10: ಕೇಂದ್ರ ಸಚಿವರೊಬ್ಬರ ಸೋಗಿನಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ನಕಲಿ ವ್ಯಕ್ತಿಯೋರ್ವ ಕರೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ಕೇಂದ್ರ ಸಚಿವರೊಬ್ಬರ ಸೋಗಿನಲ್ಲಿ 2 ಬಾರಿ ಕರೆ ಮಾಡಿರುವ ವ್ಯಕ್ತಿ ಮಾತನಾಡಲು ಯತ್ನಿಸಿದ್ದಾನೆ. ಅನುಮಾನಗೊಂಡು ಪರಿಶೀಲಿಸಿದಾಗ ಕರೆ ಮಾಡಿರುವ ನಂಬರ್ ಸಚಿವರದ್ದಲ್ಲ, ನಕಲಿ ಎಂದು ತಿಳಿದು ಬಂದಿದೆ.
ತಕ್ಷಣ ಬೆಂಗಳೂರು ಕೇಂದ್ರ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ರಾಜಭವನದ ಅಧಿಕಾರಿಗಳು ದೂರು ನೀಡಿದ್ದಾರೆ. ಅದರ ಅನ್ವಯ ಎಫ್ಐಆರ್ ದಾಖಲಾಗಿದ್ದು, ತನಿಖೆ ಕೈಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
Next Story





