Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. Bengaluru | ‘ಪಶುವೈದ್ಯಾಧಿಕಾರಿಗಳ...

Bengaluru | ‘ಪಶುವೈದ್ಯಾಧಿಕಾರಿಗಳ ಪರೀಕ್ಷೆ’ ನೇಮಕಾತಿ ಆದೇಶ ಪತ್ರ ನೀಡಲು ಆಗ್ರಹಿಸಿ ಹೋರಾಟ

ವಾರ್ತಾಭಾರತಿವಾರ್ತಾಭಾರತಿ28 Sept 2026 6:50 PM IST
share
Bengaluru | ‘ಪಶುವೈದ್ಯಾಧಿಕಾರಿಗಳ ಪರೀಕ್ಷೆ’ ನೇಮಕಾತಿ ಆದೇಶ ಪತ್ರ ನೀಡಲು ಆಗ್ರಹಿಸಿ ಹೋರಾಟ

ಬೆಂಗಳೂರು : ಪಶುವೈದ್ಯಾಧಕಾರಿ ಹುದ್ದೆಗೆ ಆಯ್ಕೆಯಾದ ಪ್ರಕರಣಕ್ಕೆ ಸಂಬಂಧಿಸಿದ ಹಾಗೂ ಅರ್ಹ ಅಭ್ಯರ್ಥಿಗಳಿಗೆ ಸರಕಾರದ ಬಳಿ ಲಭ್ಯವಿರುವ ಸಿಐಡಿ ವರದಿ, ಇಡಿ ವರದಿ ಹಾಗೂ ಅಭ್ಯರ್ಥಿಗಳು ನೀಡುವ ಸ್ವಯಂ ಘೋಷಣಾ ಪತ್ರಗಳನ್ನು ಪರಿಗಣಿಸಿ ಕೂಡಲೇ ಷರತ್ತುಬದ್ಧ ನೇಮಕಾತಿ ಆದೇಶ ಹೊರಡಿಸಬೇಕು ಎಂದು ಪಶುವೈದ್ಯಾಧಿಕಾರಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಆಗ್ರಹಿಸಿದ್ದಾರೆ.

ಸೋಮವಾರ ನಗರದ ಫ್ರೀಡಂಪಾರ್ಕ್‍ನಲ್ಲಿ ಹಮ್ಮಿಕೊಂಡಿದ್ದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಡಾ.ಹನುಮಂತಪ್ಪ ಕಳಸಾಪುರ, ಕೆಪಿಎಸ್‍ಸಿ 342 ಸಾಮಾನ್ಯ ಹಾಗೂ 58 ಬ್ಯಾಕ್‍ಲಾಗ್ ಸೇರಿದಂತೆ ಒಟ್ಟು 400 ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಕೈಗೊಂಡಿತ್ತು. ಸದರಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು, ಅಕ್ರಮವಾಗಿ ಭಾಗಿಯಾಗಿದ್ದಾರೆಂದು 29 ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿ, ತನಿಖೆಯನ್ನು ಸಿಐಡಿಗೆ ವಹಿಸಲಾಗಿರುತ್ತದೆ ಎಂದರು.

ಸುಮಾರು ಹತ್ತು ವರ್ಷಗಳ ಬಳಿಕ ನಡೆದ ಪಶುವೈದ್ಯಾಧಿಕಾರಿ ನೇಮಕಾತಿಗಾಗಿ ಅಭ್ಯರ್ಥಿಗಳು ವರ್ಷಗಳ ಕಾಲ ಕಾದು, ಉದ್ಯೋಗದ ಜೊತೆಗೆ ಹಗಲು ರಾತ್ರಿ ಪರಿಶ್ರಮಿಸಿ ಪರೀಕ್ಷೆ ಬರೆದಿದಾರೆ. ಕೆಲ ಮಹಿಳಾ ಅಭ್ಯರ್ಥಿಗಳೂ ಗರ್ಭಾವಸ್ಥೆಯಲ್ಲಿಯೇ, ಇನ್ನು ಕೆಲವರು ಚಿಕ್ಕ ಮಕ್ಕಳ ಆರೈಕೆ ಹಾಗೂ ಕುಟುಂಬದ ಜವಾಬ್ದಾರಿಗಳ ನಡುವೆಯೂ ಪರೀಕ್ಷೆ ಎದುರಿಸಿದ್ದಾರೆ ಎಂದು ಅವರು ತಿಳಿಸಿದರು.

ಸಿಐಡಿ ತನಿಖೆಯು ಯಾವುದೇ ರೀತಿಯ ಹಸ್ತಕ್ಷೇಪವಿಲ್ಲದೆ ಕಾನೂನುಬದ್ಧವಾಗಿ ನಡೆಯಬೇಕು. ಇಂತಹ ಹಗರಣಗಳು ವಿವಿಧ ನೇಮಕಾತಿ ಪ್ರಕ್ರಿಯೆಗಳಲ್ಲಿ ಕೇಳಿ ಬಂದಾಗ ಸುಪ್ರೀಂಕೋರ್ಟ್ ಕಳಂಕಿತ ಹಾಗೂ ಪ್ರಾಮಾಣಿಕ ಅಭ್ಯರ್ಥಿಗಳನ್ನು ವಿಂಗಡಿಸಿ, ನೇಮಕಾತಿ ಪ್ರಕ್ರಿಯೆಯನ್ನು ಮುಂದುವರಿಸಬೇಕೆಂದು ತೀರ್ಪು ನೀಡಿರುತ್ತದೆ. ಆದುದರಿಂದ ರಾಜ್ಯ ಸರಕಾರ ಶೀಘ್ರವಾಗಿ ಒಂದು ತಿಂಗಳೊಳಗಾಗಿ ಸಿಐಡಿಯಿಂದ ಮಧ್ಯಂತರ ವರದಿ ತರಿಸಿಕೊಂಡು, ಪರೀಕ್ಷೆಯಲ್ಲಿ ನೇಮಕವಾದ ಕಳಂಕರಹಿತ ಹಾಗೂ ಪ್ರಾಮಾಣಿಕ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರವನ್ನು ನೀಡಬೇಕು ಎಂದು ಹನುಮಂತಪ್ಪ ಆಗ್ರಹಿಸಿದರು.

ಹೋರಾಟದಲ್ಲಿ ಅಭ್ಯರ್ಥಿಗಳಾದ ಡಾ.ಪೂಜಾ ಎಚ್.ವಿ, ಡಾ.ಭರತ್, ಡಾ.ಗೀತಾಂಜಲಿ, ಡಾ.ಆಕಾಶ್, ಶಿವಪುತ್ರ ಸೇರಿದಂತೆ ಹಲವರು ಭಾಗವಹಿಸಿದ್ದರು.

Tags

Bengaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X