Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರಿನಲ್ಲಿ 12 ಕಿ.ಮೀ. 220ಕೆವಿ...

ಬೆಂಗಳೂರಿನಲ್ಲಿ 12 ಕಿ.ಮೀ. 220ಕೆವಿ ಮಲ್ಟಿ ಸರ್ಕ್ಯೂಟ್ ಪ್ರಸರಣ ಮಾರ್ಗ ಯಶಸ್ವಿ ಕಾರ್ಯಾರಂಭ

ವಾರ್ತಾಭಾರತಿವಾರ್ತಾಭಾರತಿ7 Oct 2026 12:07 AM IST
share
ಬೆಂಗಳೂರಿನಲ್ಲಿ 12 ಕಿ.ಮೀ. 220ಕೆವಿ ಮಲ್ಟಿ ಸರ್ಕ್ಯೂಟ್ ಪ್ರಸರಣ ಮಾರ್ಗ ಯಶಸ್ವಿ ಕಾರ್ಯಾರಂಭ

ಬೆಂಗಳೂರು, ಅ.6: ಬೆಂಗಳೂರಿನ ವಿದ್ಯುತ್ ಪ್ರಸರಣ ಜಾಲವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್), 12 ಕಿ.ಮೀ. ಉದ್ದದ 220 ಕೆವಿ ಮಲ್ಟಿ ಸರ್ಕ್ಯೂಟ್ ಪ್ರಸರಣ ಮಾರ್ಗವನ್ನು ಯಶಸ್ವಿಯಾಗಿ ಕಾರ್ಯಾರಂಭ(ಕಮಿಷನ್)ಮಾಡುವ ಮೂಲಕ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದೆ.

ಬಾಗಲೂರು ರಸ್ತೆ ಕ್ರಾಸಿಂಗ್ ಸಮೀಪದ ಕೇಬಲ್ ಟರ್ಮಿನೇಟಿಂಗ್ ಟವರ್‍ನಿಂದ ಹಾಲಿ 220 ಕೆವಿ ಹೂಡಿ-ಎಚ್‍ಬಿಆರ್ ಹಾಗೂ ಐಟಿಐ-ಮಾನ್ಯತಾ ಟೆಕ್ ಪಾರ್ಕ್ ಪ್ರಸರಣ ಮಾರ್ಗಗಳಿಗೆ ಡಬಲ್ ಲೈನ್ ಇನ್-ಲೈನ್ ಔಟ್ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ.

ನಗರದ ಸವಾಲಿನ ಪರಿಸ್ಥಿತಿಗೆ ವಿಶೇಷ ತಾಂತ್ರಿಕ ಪರಿಹಾರ: ದಟ್ಟ ನಗರ ಪ್ರದೇಶದಲ್ಲಿ ಪ್ರಸರಣ ಮೂಲಸೌಕರ್ಯ ನಿರ್ಮಾಣ ಸಂದರ್ಭದಲ್ಲಿ ಸ್ಥಳಾವಕಾಶ, ಹಾಲಿ ವಿದ್ಯುತ್ ಜಾಲ, ರಸ್ತೆ ಹಾಗೂ ಇತರೆ ನಗರ ಮೂಲಸೌಕರ್ಯಗಳಂತಹ ಹಲವು ಅಂಶಗಳನ್ನು ಪರಿಗಣಿಸಬೇಕಾಗುತ್ತದೆ. ಈ ನಿರ್ದಿಷ್ಟ ಯೋಜನೆಯ ಸ್ಥಳೀಯ ಪರಿಸ್ಥಿತಿ, ತಾಂತ್ರಿಕ ಕಾರ್ಯಸಾಧ್ಯತೆ ಮತ್ತು ಕಾರ್ಯಾಚರಣಾ ಅಗತ್ಯಗಳನ್ನು ಸಮಗ್ರವಾಗಿ ಪರಿಶೀಲಿಸಿ ಸೂಕ್ತ ಎಂಜಿನಿಯರಿಂಗ್ ವಿನ್ಯಾಸವನ್ನು ಅಳವಡಿಸಲಾಗಿದೆ.

ಯೋಜನೆಯ ಭಾಗವಾಗಿ, ವಿದ್ಯಾನಗರ ಪ್ರದೇಶದಲ್ಲಿನ ಲಭ್ಯ ಪ್ರಸರಣ ಮಾರ್ಗದ ಜಾಗದ ಒಂದು ಭಾಗವನ್ನು ತಾಂತ್ರಿಕವಾಗಿ ಸೂಕ್ತ ರೀತಿಯಲ್ಲಿ ಬಳಸಿಕೊಂಡು 220 ಕೆವಿ ಮಲ್ಟಿ ಸಕ್ರ್ಯೂಟ್ ಮಾರ್ಗವನ್ನು ನಿರ್ಮಿಸಲಾಗಿದೆ. ಈ ಪರಿಹಾರವು ಈ ಯೋಜನೆಯ ನಿರ್ದಿಷ್ಟ ತಾಂತ್ರಿಕ ಮತ್ತು ಸ್ಥಳೀಯ ಅಗತ್ಯಗಳಿಗೆ ಅನುಗುಣವಾಗಿ ರೂಪಿಸಲಾಗಿದೆ.

ಹಾಲಿ ವಿದ್ಯುತ್ ಮಾರ್ಗಗಳು, ರಸ್ತೆ ಸಂಚಾರ, ನಗರ ಮೂಲಸೌಕರ್ಯ ಹಾಗೂ ಸೀಮಿತ ಕಾರ್ಯಸ್ಥಳಗಳ ನಡುವೆ ಹೆಚ್ಚಿನ ಸಾಮಥ್ರ್ಯದ ಪ್ರಸರಣ ಮಾರ್ಗದ ಕಾಮಗಾರಿ ಕೈಗೊಳ್ಳುವುದು ತಾಂತ್ರಿಕ ಮತ್ತು ಕಾರ್ಯಾಚರಣೆಯ ದೃಷ್ಟಿಯಿಂದ ಸವಾಲಿನ ಕಾರ್ಯವಾಗಿತ್ತು.

ಕೆಪಿಟಿಸಿಎಲ್‍ನ ಇಂಜಿನಿಯರ್‍ಗಳು, ತಾಂತ್ರಿಕ ಸಿಬ್ಬಂದಿ ಮತ್ತು ಯೋಜನಾ ತಂಡಗಳು ಸೂಕ್ಷ್ಮ ಯೋಜನೆ, ಸುರಕ್ಷತಾ ಕ್ರಮಗಳು ಹಾಗೂ ವಿವಿಧ ವಿಭಾಗಗಳ ಸಮನ್ವಯದ ಮೂಲಕ ಈ ಸವಾಲುಗಳನ್ನು ನಿಭಾಯಿಸಿ ಯೋಜನೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿವೆ.

ಹೊಸ ಪ್ರಸರಣ ವ್ಯವಸ್ಥೆಯು ಬೆಂಗಳೂರಿನ ವಿದ್ಯುತ್ ಜಾಲದ ಸಾಮಥ್ರ್ಯ ಮತ್ತು ಕಾರ್ಯಾಚರಣಾ ವಿಶ್ವಾಸಾರ್ಹತೆಯನ್ನು ಹೆಚ್ಚಿಸುವುದರ ಜೊತೆಗೆ, ಹೆಚ್ಚುತ್ತಿರುವ ವಿದ್ಯುತ್ ಬೇಡಿಕೆಯನ್ನು ನಿರ್ವಹಿಸಲು ಪ್ರಸರಣ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಿದೆ.

‘ಬೆಂಗಳೂರು ನಗರದಲ್ಲಿ ವಿದ್ಯುತ್ ಬೇಡಿಕೆ ನಿರಂತರವಾಗಿ ಹೆಚ್ಚುತ್ತಿದ್ದು, ಅದಕ್ಕೆ ಅನುಗುಣವಾಗಿ ಪ್ರಸರಣ ಮೂಲಸೌಕರ್ಯವನ್ನೂ ಬಲಪಡಿಸಲಾಗುತ್ತಿದೆ. ನಗರ ಪ್ರದೇಶದಲ್ಲಿನ ಪ್ರತಿಯೊಂದು ಪ್ರಸರಣ ಯೋಜನೆಗೂ ಅದರ ಸ್ಥಳೀಯ ಪರಿಸ್ಥಿತಿ, ತಾಂತ್ರಿಕ ಕಾರ್ಯಸಾಧ್ಯತೆ ಮತ್ತು ಭವಿಷ್ಯದ ಅಗತ್ಯಗಳನ್ನು ಪರಿಗಣಿಸಿ ಸೂಕ್ತ ಪರಿಹಾರ ರೂಪಿಸಬೇಕಾಗುತ್ತದೆ. ಈ ಯೋಜನೆಯಲ್ಲಿ ಎದುರಾದ ಸವಾಲುಗಳಿಗೆ ಕೆಪಿಟಿಸಿಎಲ್ ತಾಂತ್ರಿಕ ಪರಿಹಾರ ಕಂಡುಕೊಂಡು ಕಾಮಗಾರಿ ಯಶಸ್ವಿಯಾಗಿ ಪೂರ್ಣಗೊಳಿಸಿರುವುದು ಶ್ಲಾಘನೀಯ’

-ಕೆ.ಜೆ.ಜಾರ್ಜ್, ಇಂಧನ ಸಚಿವ

Tags

Bengaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X