Bengaluru | ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಅಪಘಾತ: ಆಟೋ ಚಾಲಕ ಸಾವು

ಬೆಂಗಳೂರು: ಇಲ್ಲಿನ ಕೆಆರ್ ವೃತ್ತದ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಆಟೋಗೆ ಬಿಎಂಟಿಸಿ ಎಲೆಕ್ಟ್ರಿಕ್ ಬಸ್‍ವೊಂದ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ. ಕೃಷ್ಣಮೂರ್ತಿ (60) ಮೃತಪಟ್ಟ ಆಟೋ ಚಾಲಕ.
ಕೆ.ಆರ್ ವೃತ್ತಕ್ಕೆ ಬರುತ್ತಿದ್ದ ವಿದ್ಯುತ್ ಚಾಲಿತ ಬಿಎಂಟಿಸಿ ಬಸ್, ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಆಟೋಗೆ ಡಿಕ್ಕಿ ಹೊಡೆದು, ಅದರ ಮುಂದಿದ್ದ ವಿದ್ಯುತ್ ಕಂಬಕ್ಕೆ ಗುದ್ದಿದೆ. ಈ ವೇಳೆ ಆಟೋದಲ್ಲಿ ಕುಳಿತಿದ್ದ ಆಟೋ ಚಾಲಕ ಕೃಷ್ಣಮೂರ್ತಿ ತೀವ್ರ ಗಂಭೀರ ಗಾಯಗೊಂಡಿದ್ದರು. ಸ್ಥಳೀಯರ ನೆರವಿನಿಂದ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.
ಸದ್ಯ ಅಪಘಾತ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಬಸ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Next Story




