Bengaluru | ಹಸುಗಳಿಂದ ವಾಹನ ದಟ್ಟನೆ; ಮಾಲಕನ ವಿರುದ್ಧ ಎಫ್ಐಆರ್

ಸಾಂದರ್ಭಿಕ ಚಿತ್ರ (AI)
ಬೆಂಗಳೂರು: ಹಸುಗಳಿಂದ ವಾಹನ ದಟ್ಟನೆ ಉಂಟಾಗಿರುವ ಕಾರಣಕ್ಕೆ ಹಸುಗಳ ಮಾಲಕನ ವಿರುದ್ಧ ಏರ್ ಪೋರ್ಟ್ ಸಂಚಾರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ.
ಕಳಾಮಂದಿರ ಹತ್ತಿರದ ರಿಂಗ್ ರಸ್ತೆಯಲ್ಲಿ ಸುಮಾರು 9 ರಿಂದ 10 ಹಸುಗಳು ರಸ್ತೆಯಲ್ಲಿ ಓಡಾಡಿಕೊಂಡಿದ್ದವು. ಇದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಹೀಗಾಗಿ ಈ ರೀತಿಯ ಘಟನೆಗಳು ಆಗದಂತೆ ಮುನ್ನೆಚ್ಚರಿಕೆ ವಹಿಸದ ಕಾರಣ ಮಾರತ್ತಹಳ್ಳಿಯ ಅಶ್ವಥನಗರ ನಿವಾಸಿಯಾಗಿರುವ ಹಸುಗಳ ಮಾಲಕ ಸಂತೋಷ್ ಎಂಬವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಘಟನೆ ನಡೆದಿರುವ ದಿನ ರಿಂಗ್ ರಸ್ತೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಚ್ಎಎಲ್ ಏರ್ಪೋರ್ಟ್ ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ನಾಗೇಂದ್ರ ಎಂಬವರು ಈ ಸಂಬಂಧ ದೂರು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.
Next Story




