Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 2027ರ ಡಿಸೆಂಬರ್ ವೇಳೆಗೆ ಬೆಂಗಳೂರಿನಲ್ಲಿ...

2027ರ ಡಿಸೆಂಬರ್ ವೇಳೆಗೆ ಬೆಂಗಳೂರಿನಲ್ಲಿ 175 ಕಿ.ಮೀ ಮೆಟ್ರೋ ಮಾರ್ಗ ಸಂಚಾರ: ಡಿಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ22 Dec 2025 7:34 PM IST
share
2027ರ ಡಿಸೆಂಬರ್ ವೇಳೆಗೆ ಬೆಂಗಳೂರಿನಲ್ಲಿ 175 ಕಿ.ಮೀ ಮೆಟ್ರೋ ಮಾರ್ಗ ಸಂಚಾರ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಬೆಂಗಳೂರಿನಲ್ಲಿ ಮೆಟ್ರೋ ಮಾರ್ಗ ಹೆಚ್ಚಳ ಮಾಡಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ನಮ್ಮ ಸರಕಾರ ಮುಂದಾಗಿದೆ. 2027ರ ಡಿಸೆಂಬರ್ ವೇಳೆಗೆ ಬೆಂಗಳೂರು ನಗರದಲ್ಲಿ 175 ಕಿ.ಮೀ ಉದ್ದದಷ್ಟು ಮೆಟ್ರೋ ಮಾರ್ಗ ಕಾರ್ಯಾರಂಭವಾಗಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಸೋಮವಾರ ನಗರದಲ್ಲಿರುವ ಬಿಎಂಆರ್‍ಸಿಎಲ್ ಕಚೇರಿಯಲ್ಲಿ ಮೆಟ್ರೋ ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಪ್ರಸಕ್ತ 96 ಕಿ.ಮೀ ಉದ್ದದ ಮೆಟ್ರೋ ಮಾರ್ಗ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.

ನಮ್ಮ ಸರಕಾರ ಅಧಿಕಾರಕ್ಕೆ ಬಂದ ನಂತರ ಹಳದಿ ಮಾರ್ಗಕ್ಕೆ ಚಾಲನೆ ಮಾಡಲಾಗಿದ್ದು, 24 ಕಿ.ಮೀ ಉದ್ದದ ಮೆಟ್ರೋ ಸಂಚಾರ ಆರಂಭ ಮಾಡಲಾಗಿದೆ. ಪ್ರತಿ ನಿತ್ಯ 1 ಲಕ್ಷ ಜನ ಈ ಮಾರ್ಗದಲ್ಲಿ ಸಂಚಾರ ಮಾಡುತ್ತಿದ್ದು, ಈ ಮಾರ್ಗದಲ್ಲಿ ಶೇ.30ರಷ್ಟು ಸಂಚಾರ ದಟ್ಟಣೆ ಕಡಿಮೆಯಾಗಿದೆ ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ ಎಂದು ಶಿವಕುಮಾರ್ ಹೇಳಿದರು.

ಮುಂದಿನ ವರ್ಷ (2026ರಲ್ಲಿ) 41 ಕಿ.ಮೀ ಉದ್ದದ ಮಾರ್ಗ ಕಾರ್ಯಾರಂಭ ಮಾಡಲಾಗುವುದು. 2027ರ ಡಿಸೆಂಬರ್ ವೇಳೆಗೆ ವಿಮಾನ ನಿಲ್ದಾಣ ಮಾರ್ಗ ಸೇರಿದಂತೆ 38 ಕಿ.ಮೀ ಉದ್ದದ ಮಾರ್ಗ ಕಾರ್ಯಾರಂಭ ಮಾಡಲಾಗುವುದು. ಆ ಮೂಲಕ ಬೆಂಗಳೂರಿನಲ್ಲಿ 175 ಕಿ.ಮೀ ಉದ್ದದ ಮಾರ್ಗ ಕಾರ್ಯನಿರ್ವಹಿಸಲಿದೆ. ಇದರ ಹೊರತಾಗಿ ಮಾಗಡಿ ರಸ್ತೆಯಲ್ಲಿ ತಾವರಕೆರೆವರೆಗೆ, ಹೊಸಕೋಟೆ, ಬಿಡದಿ, ನೆಲಮಂಗಲದವರೆಗೆ ವಿಸ್ತರಿಸುವ ಯೋಜನೆ ಹಮ್ಮಿಕೊಂಡಿದ್ದೇವೆ. ಒಂದು ಕಡೆ ಯೋಜನೆ ಕೈಗೆತ್ತಿಕೊಂಡಿದ್ದು, ಉಳಿದ ಕಡೆಗಳಲ್ಲಿ ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಮೆಟ್ರೋ ಮೂರನೇ ಹಂತದ ಯೋಜನೆಯ 100 ಕಿ.ಮೀ ಕಾಮಗಾರಿಗೆ ಜನವರಿಯಲ್ಲಿ ಟೆಂಡರ್: ಮುಂದಿನ ತಿಂಗಳು ಮೆಟ್ರೋ ಮೂರನೇ ಹಂತದ ಯೋಜನೆಯಲ್ಲಿ ಎಲಿವೇಟೆಡ್ ಕಾರಿಡಾರ್ (ಡಬಲ್ ಡೆಕ್ಕರ್) ಸೇರಿದಂತೆ ಸುಮಾರು 100 ಕಿ.ಮೀ ಉದ್ದದ ಮೆಟ್ರೋ ಕಾಮಗಾರಿಗೆ ಟೆಂಡರ್ ಕರೆಯಲಾಗುವುದು ಎಂದು ಅವರು ಹೇಳಿದರು.

ಸಂಚಾರ ದಟ್ಟಣೆ ನಿಯಂತ್ರಿಸಿ ಜನರ ಪ್ರಯಾಣಕ್ಕೆ ಅನುಕೂಲವಾಗಲು ಕಾಮಗಾರಿ ವೇಗವಾಗಿ ನಡೆಸುತ್ತಿದೆ. ಮೆಟ್ರೋ ನಿಲ್ದಾಣಗಳ ಬಳಿ ಹೆಚ್ಚಿನ ಜಮೀನು ಸ್ವಾಧೀನಪಡಿಸಿಕೊಂಡು ವಾಣಿಜ್ಯ ಚಟುವಟಿಕೆಗೆ ಅವಕಾಶ ಕಲ್ಪಿಸುವಂತೆ ಸೂಚಿಸಲಾಗಿದೆ. ವಾಹನ ನಿಲುಗಡೆಗೂ ಅವಕಾಶ ಕಲ್ಪಿಸಬೇಕಿದೆ ಎಂದು ಶಿವಕುಮಾರ್ ತಿಳಿಸಿದರು.

ಮೂರನೇ ಹಂತದ ಯೋಜನೆಗೆ ಟೆಂಡರ್ ಕರೆಯಲಾಗುತ್ತಿದೆ. 25,311 ಸಾವಿರ ಕೋಟಿ ರೂ. ವೆಚ್ಚದ ಈ ಕಾಮಗಾರಿಗೆ, ಜೈಕಾದಿಂದ 15,600 ಕೋಟಿ ರೂ. ಸಾಲ ಮಾಡಲಾಗುತ್ತಿದೆ. ಉಳಿದಂತೆ ಎಲಿವೇಟೆಡ್ ಕಾರಿಡಾರ್ ಗೆ 9,700 ಕೋಟಿ ರೂ.ಮೊತ್ತದ ಟೆಂಡರ್ ಅನ್ನು ಜನವರಿಯಲ್ಲಿ ಕರೆಯಲಾಗುವುದು ಎಂದು ಉಪ ಮುಖ್ಯಮಂತ್ರಿ ಮಾಹಿತಿ ನೀಡಿದರು.

ಮೂರನೇ ಹಂತದಲ್ಲಿ ಸಂಪೂರ್ಣ ಮಾರ್ಗ ಎಲಿವೇಟೆಡ್ ಕಾರಿಡಾರ್ (ಡಬಲ್ ಡೆಕ್ಕರ್) ಮಾಡಲಾಗುವುದೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮೂರನೇ ಹಂತದ ಯೋಜನೆಯಲ್ಲಿ ಸಂಪೂರ್ಣವಾಗಿ ಎಲ್ಲ ಮಾರ್ಗದಲ್ಲೂ ಎಲಿವೇಟೆಡ್ ಕಾರಿಡಾರ್ ನಿರ್ಮಿಸಲಾಗುವುದು. ತಾವರೆಕೆರೆ ಬಳಿ ಮೆಟ್ರೋ ನಿಲ್ದಾಣಕ್ಕೆ ಜಾಗ ಅಂತಿಮಗೊಳಿಸಲು ಪ್ರಯತ್ನಿಸುತ್ತಿದ್ದೇವೆ. ಹಾಸನದಿಂದ ಬರುವ ಜನರು ಈ ಮಾರ್ಗವಾಗಿ ಬರುವುದರಿಂದ ಇಲ್ಲೂ ಡಬಲ್ ಡೆಕ್ಕರ್ ಮಾಡಲು ತೀರ್ಮಾನಿಸಿದ್ದೇವೆ ಎಂದು ತಿಳಿಸಿದರು.

ಟನಲ್ ರಸ್ತೆ ಟೆಂಡರ್ ಅಂತಿಮಗೊಂಡಿದ್ದು, ಅದಾನಿ ಕಂಪನಿ ಕಡಿಮೆ ಬಿಡ್ ಮಾಡಿದೆ ಎಂಬ ವರದಿಗಳು ಬಂದಿವೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನನಗೆ ಇನ್ನು ಸಂಪೂರ್ಣ ಮಾಹಿತಿ ಬಂದಿಲ್ಲ. ನನಗೆ ಅಧಿಕೃತವಾಗಿ ಪತ್ರ ಬರುವವರೆಗೂ ನಾನು ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ ಎಂದು ಪ್ರತಿಕ್ರಿಯಿಸಿದರು.

ಸರಕಾರ ನಿಗದಿ ಮಾಡಿದ ಮೊತ್ತಕ್ಕಿಂತ ಹೆಚ್ಚಿನ ಹಣ ಬಿಡ್ ಮಾಡಲಾಗಿದೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಾವು ಯಾರಿಗೂ ಹಣ ನೀಡುವುದಿಲ್ಲ. ಅವರೇ ಹಣ ಬಂಡವಾಳ ಹಾಕಿ ಮಾಡಬೇಕು. ವಿಜೆಎಫ್ ಎಷ್ಟು ಪಸೆರ್ಂಟ್ ನೀಡುತ್ತೇವೆ ಎಂದು ಹೇಳಿದ್ದೇವೋ ಅಷ್ಟನ್ನೇ ನೀಡುತ್ತೇವೆ. ನಾವು ಅಂದಾಜು ಮಾಡಿರುವುದರಲ್ಲಿ ಶೇ.40ರಷ್ಟು ಮಾತ್ರ ನೀಡುತ್ತೇವೆ. ಅದರ ಮೇಲೆ ನಾವು ನೀಡುವುದಿಲ್ಲ. ಮೆಟ್ರೋಗೆ ತಗುಲುವ ವೆಚ್ಚ ಪರಿಶೀಲಿಸಿದ್ದೇನೆ. ಮುಂಬೈಯಲ್ಲಿ ಪ್ರತಿ ಕಿ.ಮೀಗೆ 1,200 ಕೋಟಿ ರೂ.ಆಗುತ್ತಿದೆ ಎಂದು ತಿಳಿಸಿದರು.

ಇದಕ್ಕೂ ಮುನ್ನ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಜಿಬಿಎ ಮುಖ್ಯ ಆಯುಕ್ತ ಡಾ.ಮಹೇಶ್ವರರಾವ್, ಬಿಎಂಆರ್‍ಸಿಎಲ್ ಆಯುಕ್ತ ಡಾ.ಜೆ. ರವಿಶಂಕರ್, ಡಿಸಿಎಂ ಕಾರ್ಯದರ್ಶಿ ರಾಜೇಂದ್ರ ಚೋಳನ್ ಮತ್ತಿತರರು ಉಪಸ್ಥಿತರಿದ್ದರು.

Tags

Bengaluru metroD.K. Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X