Bengaluru | ಅಕ್ರಮವಾಗಿ ನೆಲೆಸಿದ್ದ 200 ವಿದೇಶಿಗರು ಪತ್ತೆ

ಸಾಂದರ್ಭಿಕ ಚಿತ್ರ (PTI)
ಬೆಂಗಳೂರು: ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ನಗರ ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸುತ್ತಿದ್ದು, ಒಟ್ಟಾರೆ 200ಕ್ಕೂ ಹೆಚ್ಚು ವಿದೇಶಿಗರನ್ನು ಪತ್ತೆಹಚ್ಚಿದ್ದಾರೆ.
ಅಕ್ರಮವಾಗಿ ನೆಲೆಸಿದವರ ಪೈಕಿ ಬಾಂಗ್ಲಾದೇಶ ಮತ್ತು ಆಫ್ರಿಕಾ ಮೂಲದವರೇ ಹೆಚ್ಚು ಇದ್ದು, ಈ ಸಂಬಂಧ ಪರಿಶೀಲನೆ ಕಾರ್ಯ ಮುಂದುವರೆದಿದೆ ಎಂದು ಬೆಂಗಳೂರು ನಗರ ಪೊಲೀಸರು ಮಾಹಿತಿ ನೀಡಿದ್ದಾರೆ.
ಕಳೆದ ಎರಡು ವಾರದಿಂದ ನಿರಂತರವಾಗಿ ನಡೆಯುತ್ತಿರುವ ಈ ಕಾರ್ಯಾಚರಣೆಯಲ್ಲಿ ನಗರದ ವಿವಿಧ ಪ್ರದೇಶಗಳಲ್ಲಿ ಪೊಲೀಸರು ತಪಾಸಣೆ ನಡೆಸಿ ನಗರದಲ್ಲಿ ಅಕ್ರಮವಾಗಿ ವಾಸಿಸಿರುವ ವಿದೇಶಿ ಪ್ರಜೆಗಳನ್ನು ಪತ್ತೆ ಹಚ್ಚಿದ್ದಾರೆ. ಪತ್ತೆಯಾದ ಅಕ್ರಮ ವಲಸಿಗರನ್ನು ವಿದೇಶಿ ಪ್ರಾದೇಶಿಕ ನೋಂದಣಿ ಕಚೇರಿ (ಎಫ್ಆರ್ಆರ್ಓ) ಅಧಿಕಾರಿಗಳ ವಶಕ್ಕೆ ಒಪ್ಪಿಸಲಾಗಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಕಾರ್ಯ ಈಗಾಗಲೇ ಆರಂಭವಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿವೊಬ್ಬರು ಹೇಳಿದ್ದಾರೆ.
Next Story





