Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಗಾಂಧಿ ಪ್ರತಿಮೆ ಮುಂದೆ ಕೂರುವ ಹಕ್ಕು...

ಗಾಂಧಿ ಪ್ರತಿಮೆ ಮುಂದೆ ಕೂರುವ ಹಕ್ಕು ಬಿಜೆಪಿ ಕಳೆದುಕೊಂಡಿದೆ: ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ27 Jan 2026 9:21 PM IST
share
ಗಾಂಧಿ ಪ್ರತಿಮೆ ಮುಂದೆ ಕೂರುವ ಹಕ್ಕು ಬಿಜೆಪಿ ಕಳೆದುಕೊಂಡಿದೆ: ಡಿ.ಕೆ.ಶಿವಕುಮಾರ್

ಬೆಂಗಳೂರು: ಯೋಜನೆಗಳಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಹೆಸರನ್ನು ಕೈಬಿಡುವ ಮೂಲಕ ಬಿಜೆಪಿ ನಾಯಕರು ಗಾಂಧಿ ಪ್ರತಿಮೆ ಮುಂದೆ ಕೂತು ಪ್ರತಿಭಟಿಸುವ ಹಕ್ಕು ಕಳೆದುಕೊಂಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಕೇಂದ್ರ ಸರಕಾರ ಜಾರಿಗೆ ಹೊರಟಿರುವ ವಿಬಿ-ರಾಮ್-ಜಿ ಯೋಜನೆ ರದ್ದು ಹಾಗೂ ಮನರೇಗಾ ಯೋಜನೆ ಮರು ಸ್ಥಾಪಿಸಬೇಕೆಂದು ಆಗ್ರಹಿಸಿ ಮಂಗಳವಾರ ಕೆಪಿಸಿಸಿ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ನಾಯಕರು ಗಾಂಧಿ ಪ್ರತಿಮೆ ಮುಂದೆ ಕೂತು ಪ್ರತಿಭಟನೆ ಮಾಡುತ್ತಿದ್ದಾರೆ ಎಂಬ ಮಾಹಿತಿ ಬಂತು. ಆದರೆ, ಅವರು ಗಾಂಧಿ ಪ್ರತಿಮೆ ಮುಂದೆ ಕೂರುವ ಹಕ್ಕನ್ನು ಕಳೆದುಕೊಂಡಿದ್ದಾರೆ. ಜತೆಗೆ ಬಿಜೆಪಿ ಕಚೇರಿಯಲ್ಲಿ ಗಾಂಧಿ ಭಾವಚಿತ್ರ ಇಟ್ಟುಕೊಳ್ಳುವ ಯೋಗ್ಯತೆ ನಿಮಗಿಲ್ಲ. ಗಾಂಧಿ ಅವರನ್ನು ನಾಥುರಾಮ್ ಗೋಡ್ಸೆ ಹತ್ಯೆ ಮಾಡಿದ್ದಲ್ಲದೇ, ಬಿಜೆಪಿ ಹಾಗೂ ಎನ್ ಡಿಎ ಸರಕಾರ ಈಗ ಮತ್ತೆ ಅವರನ್ನು ಹತ್ಯೆ ಮಾಡುತ್ತಿದ್ದೀರಿ ಎಂದು ವಾಗ್ದಾಳಿ ನಡೆಸಿದರು.

ನನ್ನ ಕ್ಷೇತ್ರ ಕನಕಪುರದಲ್ಲಿ ವರ್ಷಕ್ಕೆ 200 ಕೋಟಿ ರೂ. ಅನುದಾನ ಬಳಸಿಕೊಂಡು ಅನೇಕ ಅಭಿವೃದ್ಧಿ ಕಾರ್ಯ ಮಾಡಲಾಗಿದೆ. ಆ ಮೂಲಕ ಈ ಯೋಜನೆ ಪರಿಣಾಮಕಾರಿ ಜಾರಿಗೊಳಿಸಿದ ತಾಲೂಕಿನಲ್ಲಿ ಅಗ್ರಸ್ಥಾನ ಪಡೆದಿದೆ. ಈ ಯೋಜನೆಯಲ್ಲಿ ಡಿ.ಕೆ.ಶಿವಕುಮಾರ್ ಹಣ ಹೊಡೆದಿದ್ದಾನೆ ಎಂಬ ಅನುಮಾನದ ಮೇಲೆ ಕೇಂದ್ರ ಸರಕಾರ ತನಿಖೆ ಮಾಡಿಸಿತು. ನಂತರ ಅವರೇ ನಮ್ಮ ಕೆಲಸ ನೋಡಿ ಪ್ರಶಸ್ತಿ ನೀಡಿದರು ಎಂದು ಅವರು ಉಲ್ಲೇಖಿಸಿದರು.

ಈ ಕುರಿತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ನಾಯಕರು ಚರ್ಚೆಗೆ ಬರಲಿ, ನಾನು ಸಿದ್ಧನಿದ್ದೇನೆ. ಈ ಯೋಜನೆ ಜಾರಿಯಾಗಿ 20 ವರ್ಷಗಳಾಗಿವೆ. ಕಳೆದ 11 ವರ್ಷಗಳಿಂದ ನಿಮ್ಮದೇ ಸರಕಾರ ಅಧಿಕಾರದಲ್ಲಿದೆ. ಈ ಯೋಜನೆಯಲ್ಲಿ ಅಕ್ರಮ ನಡೆದಿದ್ದರೆ ನೀವು ಏನು ಮಾಡುತ್ತಿದ್ದಿರಿ? ನಮ್ಮ ಪಂಚಾಯಿತಿಗಳಲ್ಲಿ ಅಕ್ರಮ ನಡೆದ ಪ್ರಕರಣಗಳಲ್ಲಿ ನಾವು ಕ್ರಮ ಕೈಗೊಂಡಿದ್ದೇವೆ. ಯಾರೋ ಕೆಲವರು ತಪ್ಪು ಮಾಡಿದರೆ ಇಡೀ ಯೋಜನೆಯನ್ನೇ ಬದಲಿಸುವುದೇ? ಆ ಮೂಲಕ ಮೂಗು ಕತ್ತರಿಸಿಕೊಳ್ಳುವ ಕೆಲಸ ಮಾಡುವುದು ಸರಿಯೇ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಬಿಜೆಪಿ ಸರಕಾರ ನರೇಗಾ ಯೋಜನೆ ಅನುದಾನವನ್ನು ಬಾಕಿ ಉಳಿಸಿಕೊಂಡಿದೆ. ಬಿಜೆಪಿ ಆಡಳಿತ ರಾಜ್ಯಗಳಲ್ಲಿ ಕೇಂದ್ರ ಸರಕಾರದ ನೂತನ ಯೋಜನೆ ಅನುಷ್ಠಾನ ಸಾಧ್ಯವಿಲ್ಲ. ಎನ್‍ಡಿಎ ಮೈತ್ರಿ ನಾಯಕ, ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರೇ ಈ ಯೋಜನೆಗೆ ಅಪಸ್ವರ ಎತ್ತಿದ್ದು, ಇದನ್ನು ಜಾರಿ ಸಾಧ್ಯವಿಲ್ಲ ಎಂದಿದ್ದಾರೆ. ಕೇಂದ್ರ ಬಿಜೆಪಿ ಸರ್ಕಾರ ನೂತನ ಕಾಯ್ದೆ ಹಿಂಪಡೆಯದಿದ್ದರೆ ಸರಕಾರಕ್ಕೆ ಆಪತ್ತು ಎದುರಾಗಲಿದೆ. ಚಂದ್ರಬಾಬು ನಾಯ್ಡು ಅವರು ಎಚ್ಚರಿಕೆ ಗಂಟೆ ರವಾನಿಸಿದ್ದಾರೆ ಎಂದರು.

ಮುಂದಿನ ದಿನಗಳಲ್ಲಿ ಪ್ರತಿ ಪಂಚಾಯಿತಿಯಲ್ಲಿ ಮನರೇಗಾ ಕಾರ್ಮಿಕರನ್ನು ಒಳಗೊಂಡು ತಾಲೂಕು ಮಟ್ಟದಲ್ಲಿ 5 ಕಿಮೀ ಪಾದಯಾತ್ರೆ ನಡೆಸಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಪರಿಷತ್ ಸದಸ್ಯರ ನೇತೃತ್ವದಲ್ಲಿ ಈ ಪಾದಯಾತ್ರೆ ನಡೆಯಬೇಕಿದೆ ಎಂದು ತಿಳಿಸಿದರು.

Tags

D.K. ShivakumarGandhi statueBJP
share
ವಾರ್ತಾಭಾರತಿ
ವಾರ್ತಾಭಾರತಿ
Next Story
X