Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಚುನಾವಣಾ ಸೋಲಿನ ಕಾರಣಗಳ ಕುರಿತು ಸಮಗ್ರ...

ಚುನಾವಣಾ ಸೋಲಿನ ಕಾರಣಗಳ ಕುರಿತು ಸಮಗ್ರ ಪರಾಮರ್ಶೆ ನಡೆಸುತ್ತೇವೆ : ಬಿ.ಕೆ.ಹರಿಪ್ರಸಾದ್

ವಾರ್ತಾಭಾರತಿವಾರ್ತಾಭಾರತಿ28 Oct 2026 4:25 PM IST
share
ಚುನಾವಣಾ ಸೋಲಿನ ಕಾರಣಗಳ ಕುರಿತು ಸಮಗ್ರ ಪರಾಮರ್ಶೆ ನಡೆಸುತ್ತೇವೆ : ಬಿ.ಕೆ.ಹರಿಪ್ರಸಾದ್

ಬೆಂಗಳೂರು : ವಿಧಾನ ಪರಿಷತ್ತಿನ ನಾಲ್ಕೂ ಕ್ಷೇತ್ರಗಳ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸ ನಮಗಿತ್ತು. ಆದರೆ ಚುನಾವಣಾ ಫಲಿತಾಂಶ ನಮ್ಮ ನಿರೀಕ್ಷೆಗೆ ವಿರುದ್ಧವಾಗಿ ಬಂದಿದೆ. ಈ ಫಲಿತಾಂಶವನ್ನು ಕೇವಲ ಚುನಾವಣಾ ಹಿನ್ನಡೆಯಾಗಿ ಪರಿಗಣಿಸದೆ, ಕಾಂಗ್ರೆಸ್ ಪಕ್ಷದ ಪಾಲಿಗೆ ಗಂಭೀರ ಆತ್ಮಾವಲೋಕನದ ಸಂದರ್ಭವಾಗಿ ಸ್ವೀಕರಿಸಿದ್ದೇವೆ. ಸೋಲಿನ ಹಿಂದಿರುವ ರಾಜಕೀಯ ಹಾಗೂ ಸಂಘಟನಾತ್ಮಕ ಕಾರಣಗಳ ಕುರಿತು ಸಮಗ್ರ ಪರಾಮರ್ಶೆ ನಡೆಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ ಹೇಳಿದ್ದಾರೆ.

ಚುನಾವಣಾ ಸೋಲಿನ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ಶಿಕ್ಷಕರು ಮತ್ತು ಪದವೀಧರರು ಸಮಾಜದ ಪ್ರಜ್ಞಾವಂತ ಮತದಾರ ವರ್ಗವಾಗಿದ್ದು, ಅವರ ರಾಜಕೀಯ ನಿಲುವುಗಳು ಹಾಗೂ ನಿರೀಕ್ಷೆಗಳಿಗೆ ವಿಶೇಷ ಮಹತ್ವವಿದೆ. ಈ ಚುನಾವಣೆಯಲ್ಲಿ ಅಂತಹ ಮತದಾರರ ವಿಶ್ವಾಸವನ್ನು ಗಳಿಸಲು ಸಾಧ್ಯವಾಗದಿರುವುದನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಅವರ ನಿರೀಕ್ಷೆಗಳನ್ನು ಅರ್ಥಮಾಡಿಕೊಳ್ಳುವಲ್ಲಿ, ಪಕ್ಷದ ನಿಲುವುಗಳನ್ನು ಮನವರಿಕೆ ಮಾಡಿಕೊಡುವಲ್ಲಿ ಹಾಗೂ ಅವರೊಂದಿಗೆ ನಿರಂತರ ಸಂಪರ್ಕ ಸಾಧಿಸುವಲ್ಲಿ ಆಗಿರುವ ಕೊರತೆಗಳ ಬಗ್ಗೆ ಆತ್ಮಾವಲೋಕನ ನಡೆಸುತ್ತೇವೆ ಎಂದಿದ್ದಾರೆ.

ಶಿಕ್ಷಕರು ಮತ್ತು ಪದವೀಧರರ ನಿರೀಕ್ಷೆಗಳು, ಉದ್ಯೋಗದ ಅಭದ್ರತೆ, ಶೈಕ್ಷಣಿಕ ವ್ಯವಸ್ಥೆಯ ಸವಾಲುಗಳು ಹಾಗೂ ಅವರ ವೃತ್ತಿಪರ ಹಿತಾಸಕ್ತಿಗಳಿಗೆ ಸಂಬಂಧಿಸಿದ ಪ್ರಶ್ನೆಗಳಿಗೆ ಸರ್ಕಾರ ಎಷ್ಟರಮಟ್ಟಿಗೆ ಸ್ಪಂದಿಸಿದೆ ಎಂಬುದನ್ನೂ ಪರಾಮರ್ಶಿಸುತ್ತೇವೆ. ನಮ್ಮ ಸರ್ಕಾರದ ಜನಪರ ಕಾರ್ಯಕ್ರಮಗಳು ಹಾಗೂ ಪಕ್ಷದ ನಿಲುವುಗಳನ್ನು ಮತದಾರರಿಗೆ ಪರಿಣಾಮಕಾರಿಯಾಗಿ ತಲುಪಿಸುವಲ್ಲಿ ಆಗಿರುವ ನ್ಯೂನತೆಗಳನ್ನು ಗುರುತಿಸಿ ಸರಿಪಡಿಸಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಈ ಫಲಿತಾಂಶ ಕಾಂಗ್ರೆಸ್ ಪಕ್ಷದ ಸೈದ್ಧಾಂತಿಕ ಹಾಗೂ ಜನಪರ ಬದ್ಧತೆಯನ್ನು ದುರ್ಬಲಗೊಳಿಸುವುದಿಲ್ಲ. ಬದಲಾಗಿ ನಮ್ಮ ಸಂಘಟನಾ ಕಾರ್ಯವೈಖರಿ, ಜನಸಂಪರ್ಕ ಹಾಗೂ ರಾಜಕೀಯ ಕಾರ್ಯತಂತ್ರಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ರೂಪಿಸಿಕೊಳ್ಳುವ ಜವಾಬ್ದಾರಿಯನ್ನು ಹೆಚ್ಚಿಸಿದೆ ಎಂದಿದ್ದಾರೆ.

ಮತದಾರರ ತೀರ್ಪನ್ನು ಗೌರವಪೂರ್ವಕವಾಗಿ ಸ್ವೀಕರಿಸುತ್ತೇವೆ. ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಶ್ರಮಿಸಿದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಚುನಾವಣಾ ಫಲಿತಾಂಶದ ಕುರಿತು ಪಕ್ಷದ ಎಲ್ಲ ಹಂತಗಳಲ್ಲಿ ಸಮಗ್ರ ಪರಾಮರ್ಶೆ ನಡೆಸಿ, ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಮೂಲಕ ಶಿಕ್ಷಕರು, ಪದವೀಧರರು ಹಾಗೂ ಜನಸಾಮಾನ್ಯರ ವಿಶ್ವಾಸವನ್ನು ಗಳಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇವೆ ಎಂದು ಹೇಳಿದ್ದಾರೆ.

ವಿಧಾನ ಪರಿಷತ್ತಿನ ನಾಲ್ಕೂ ಕ್ಷೇತ್ರಗಳ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸ ನಮಗಿತ್ತು. ಆದರೆ ಚುನಾವಣಾ ಫಲಿತಾಂಶ ನಮ್ಮ ನಿರೀಕ್ಷೆಗೆ ವಿರುದ್ಧವಾಗಿ ಬಂದಿದೆ. ಈ ಫಲಿತಾಂಶವನ್ನು ಕೇವಲ ಚುನಾವಣಾ ಹಿನ್ನಡೆಯಾಗಿ ಪರಿಗಣಿಸದೆ, ಕಾಂಗ್ರೆಸ್ ಪಕ್ಷದ ಪಾಲಿಗೆ ಗಂಭೀರ ಆತ್ಮಾವಲೋಕನದ ಸಂದರ್ಭವಾಗಿ ಸ್ವೀಕರಿಸಿದ್ದೇವೆ. ಸೋಲಿನ ಹಿಂದಿರುವ ರಾಜಕೀಯ ಹಾಗೂ ಸಂಘಟನಾತ್ಮಕ ಕಾರಣಗಳ ಕುರಿತು ಸಮಗ್ರ ಪರಾಮರ್ಶೆ ನಡೆಸುತ್ತೇವೆ.

ಶಿಕ್ಷಕರು ಮತ್ತು ಪದವೀಧರರು ಸಮಾಜದ ಪ್ರಜ್ಞಾವಂತ ಮತದಾರ ವರ್ಗವಾಗಿದ್ದು, ಅವರ ರಾಜಕೀಯ ನಿಲುವುಗಳು ಹಾಗೂ ನಿರೀಕ್ಷೆಗಳಿಗೆ ವಿಶೇಷ ಮಹತ್ವವಿದೆ. ಈ ಚುನಾವಣೆಯಲ್ಲಿ ಅಂತಹ ಮತದಾರರ ವಿಶ್ವಾಸವನ್ನು ಗಳಿಸಲು ಸಾಧ್ಯವಾಗದಿರುವುದನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಅವರ ನಿರೀಕ್ಷೆಗಳನ್ನು ಅರ್ಥಮಾಡಿಕೊಳ್ಳುವಲ್ಲಿ, ಪಕ್ಷದ ನಿಲುವುಗಳನ್ನು ಮನವರಿಕೆ ಮಾಡಿಕೊಡುವಲ್ಲಿ ಹಾಗೂ ಅವರೊಂದಿಗೆ ನಿರಂತರ ಸಂಪರ್ಕ ಸಾಧಿಸುವಲ್ಲಿ ಆಗಿರುವ ಕೊರತೆಗಳ ಬಗ್ಗೆ ಆತ್ಮಾವಲೋಕನ ನಡೆಸುತ್ತೇವೆ.

ಶಿಕ್ಷಕರು ಮತ್ತು ಪದವೀಧರರ ನಿರೀಕ್ಷೆಗಳು, ಉದ್ಯೋಗದ ಅಭದ್ರತೆ, ಶೈಕ್ಷಣಿಕ ವ್ಯವಸ್ಥೆಯ ಸವಾಲುಗಳು ಹಾಗೂ ಅವರ ವೃತ್ತಿಪರ ಹಿತಾಸಕ್ತಿಗಳಿಗೆ ಸಂಬಂಧಿಸಿದ ಪ್ರಶ್ನೆಗಳಿಗೆ ಸರ್ಕಾರ ಎಷ್ಟರಮಟ್ಟಿಗೆ ಸ್ಪಂದಿಸಿದೆ ಎಂಬುದನ್ನೂ ಪರಾಮರ್ಶಿಸುತ್ತೇವೆ. ನಮ್ಮ ಸರ್ಕಾರದ ಜನಪರ ಕಾರ್ಯಕ್ರಮಗಳು ಹಾಗೂ ಪಕ್ಷದ ನಿಲುವುಗಳನ್ನು ಮತದಾರರಿಗೆ ಪರಿಣಾಮಕಾರಿಯಾಗಿ ತಲುಪಿಸುವಲ್ಲಿ ಆಗಿರುವ ನ್ಯೂನತೆಗಳನ್ನು ಗುರುತಿಸಿ ಸರಿಪಡಿಸಿಕೊಳ್ಳುತ್ತೇವೆ.

ಈ ಫಲಿತಾಂಶ ಕಾಂಗ್ರೆಸ್ ಪಕ್ಷದ ಸೈದ್ಧಾಂತಿಕ ಹಾಗೂ ಜನಪರ ಬದ್ಧತೆಯನ್ನು ದುರ್ಬಲಗೊಳಿಸುವುದಿಲ್ಲ. ಬದಲಾಗಿ ನಮ್ಮ ಸಂಘಟನಾ ಕಾರ್ಯವೈಖರಿ, ಜನಸಂಪರ್ಕ ಹಾಗೂ ರಾಜಕೀಯ ಕಾರ್ಯತಂತ್ರಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ರೂಪಿಸಿಕೊಳ್ಳುವ ಜವಾಬ್ದಾರಿಯನ್ನು ಹೆಚ್ಚಿಸಿದೆ.

ಮತದಾರರ ತೀರ್ಪನ್ನು ಗೌರವಪೂರ್ವಕವಾಗಿ ಸ್ವೀಕರಿಸುತ್ತೇವೆ. ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಶ್ರಮಿಸಿದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಚುನಾವಣಾ ಫಲಿತಾಂಶದ ಕುರಿತು ಪಕ್ಷದ ಎಲ್ಲ ಹಂತಗಳಲ್ಲಿ ಸಮಗ್ರ ಪರಾಮರ್ಶೆ ನಡೆಸಿ, ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಮೂಲಕ ಶಿಕ್ಷಕರು, ಪದವೀಧರರು ಹಾಗೂ ಜನಸಾಮಾನ್ಯರ ವಿಶ್ವಾಸವನ್ನು ಗಳಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇವೆ.

@INCKarnataka

— Hariprasad.B.K. (@HariprasadBK2) October 28, 2026

Tags

BK Hariprasad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X