ಬೆಂಗಳೂರು: ಪಾನಮತ್ತ 36 ಶಾಲಾ ಬಸ್ ಚಾಲಕರ ವಿರುದ್ಧ ಪ್ರಕರಣ ದಾಖಲು

ಸಾಂದರ್ಭಿಕ ಚಿತ್ರ
ಬೆಂಗಳೂರು: ಮದ್ಯದ ಅಮಲಿನಲ್ಲಿ ಶಾಲಾ ಬಸ್ಗಳನ್ನು ಚಲಾಯಿಸುತ್ತಿದ್ದ 36 ಚಾಲಕರ ವಿರುದ್ಧ ಬೆಂಗಳೂರು ನಗರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ಅ.24ರ ಶುಕ್ರವಾರ ಬೆಳಗ್ಗೆ 7 ಗಂಟೆಯಿಂದ 9.30ರವರೆಗೆ ಬೆಂಗಳೂರಿನ ವಿವಿಧೆಡೆ ಏಕಕಾಲಕ್ಕೆ ವಿಶೇಷ ಕಾರ್ಯಾಚರಣೆ ನಡೆಸಿರುವ ಪೊಲೀಸರು, ಒಟ್ಟು 5,881 ಶಾಲಾ ಬಸ್ ಚಾಲಕರ ತಪಾಸಣೆ ಮಾಡಿದ್ದು, ಆ ಪೈಕಿ 36 ಮಂದಿ ಮದ್ಯ ಸೇವಿಸಿ ಬಸ್ ಚಾಲನೆ ಮಾಡಿರುವುದು ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ಸಂಚಾರ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಪಾನಮತ್ತ ಚಾಲಕರ ವಿರುದ್ಧ ಕೂಡಲೇ ಪ್ರಕರಣ ದಾಖಲಿಸಲಾಗಿದ್ದು, ಅವರ ಚಾಲನಾ ಪರವಾನಗಿ(ಡಿ.ಎಲ್.) ರದ್ದುಪಡಿಸುವಂತೆ ಪ್ರಾದೇಶಿಕ ಸಾರಿಗೆ ಕಚೇರಿ (ಆರ್ಟಿಒ)ಗೆ ಪತ್ರ ಬರೆಯಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
Next Story





