Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸೋನಂ ವಾಂಗ್ಚುಕ್ ರ ಹೋರಾಟವನ್ನು ಕೇಂದ್ರ...

ಸೋನಂ ವಾಂಗ್ಚುಕ್ ರ ಹೋರಾಟವನ್ನು ಕೇಂದ್ರ ಸರಕಾರ ಗಂಭೀರವಾಗಿ ಪರಿಗಣಿಸದಿರುವುದು ದುರಾದೃಷ್ಟಕರ: ನಟ ಕಿಶೋರ್

ವಾರ್ತಾಭಾರತಿವಾರ್ತಾಭಾರತಿ19 July 2026 11:42 PM IST
share
ಸೋನಂ ವಾಂಗ್ಚುಕ್ ರ ಹೋರಾಟವನ್ನು ಕೇಂದ್ರ ಸರಕಾರ ಗಂಭೀರವಾಗಿ ಪರಿಗಣಿಸದಿರುವುದು ದುರಾದೃಷ್ಟಕರ: ನಟ ಕಿಶೋರ್

ಬೆಂಗಳೂರು: ದಿಲ್ಲಿಯಲ್ಲಿ ಸೋನಂ ವಾಂಗ್ಚುಕ್ ನಡೆಸುತ್ತಿರುವ ಉಪವಾಸ ಸತ್ಯಾಗ್ರಹವನ್ನು ಕೇಂದ್ರ ಸರಕಾರ ಗಂಭೀರವಾಗಿ ಪರಿಗಣಿಸದಿರುವುದು ದುರಾದೃಷ್ಟಕರ ಎಂದು ಚಿತ್ರನಟ ಕಿಶೋರ್ ಬೇಸರ ವ್ಯಕ್ತಪಡಿಸಿದ್ದಾರೆ.

ರವಿವಾರ ನಗರದ ಫ್ರೀಡಂಪಾರ್ಕ್‍ನಲ್ಲಿ ಸೋನಂ ಬೆಂಬಲಿಸಿ ಕರ್ನಾಟಕ ಹೋರಾಟ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ‘ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಖಂಡಿಸಿ ಹಾಗೂ ದಿಲ್ಲಿಯ ಜಂತರ್ ಮಂತರ್‍ನಲ್ಲಿ ಹೋರಾಟಗಾರ ಸೋನಂ ವಾಂಗ್ಚುಕ್ ನಡೆಸುತ್ತಿರುವ ಅನಿರ್ದಿಷ್ಠಾವಧಿ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸುವ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿದರು.

ದೇಶದ ನಾಯಕತ್ವವು ಸೋನಂ ವಾಂಗ್ಚುಕ್ ಮತ್ತು ಯುವ ಜನತೆ ನಡೆಸುತ್ತಿರುವ ಹೋರಾಟದ ಬಗ್ಗೆ ಸ್ಪಂದಿಸಿ ವಿದ್ಯಾರ್ಥಿಗಳ ಆತಂಕಗಳಿಗೆ ಉತ್ತರ ನೀಡಬೇಕಾಗಿತ್ತು. ಆದರೆ ಹೋರಾಟದ ಬಗ್ಗೆ ಮೌನ ವಹಿಸಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ದೇಶದ ಯುವಜನತೆ ಇಂತಹ ಅನ್ಯಾಯಗಳ ವಿರುದ್ಧ ಎಚ್ಚೆತ್ತುಕೊಂಡಿದ್ದು, ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹಾಗೂ ಹೊಣೆಗಾರಿಕೆ ಸ್ಥಾಪನೆಯಾಗುವವರೆಗೆ ಹೋರಾಟವನ್ನು ಮುಂದುವರಿಸಬೇಕಾಗಿದೆ ಎಂದು ಕಿಶೋರ್ ಕರೆ ನೀಡಿದರು.

ಕೆಆರ್ ಎಸ್ ಪಕ್ಷದ ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಮಾತನಾಡಿ, ಗಾಂಧಿ ಮಾರ್ಗದಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಂ ವಾಂಗ್ಚುಕ್ ಹೋರಾಟವನ್ನು ಕೇಂದ್ರ ಸರಕಾರ ನಿರ್ಲಕ್ಷಿಸಿರುವುದು ಖಂಡನೀಯ. ಸುಮಾರು 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡಿರುವ ಕೇಂದ್ರ ಸರಕಾರ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧಮೇರ್ಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು. ಯುವಜನತೆ ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳ ಬಗ್ಗೆ ಅರಿವು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ಮಾತನಾಡಿ, ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡುತ್ತಾ ಪರೀಕ್ಷಾ ಅಕ್ರಮಗಳನ್ನು ತಡೆಯಲು ವಿಫಲವಾಗಿರುವ ಕೇಂದ್ರ ಸರಕಾರಕ್ಕೆ ನಾಚಿಕೆಯಾಗಬೇಕು. ಶಿಕ್ಷಣ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸವನ್ನು ಹಾಳು ಮಾಡಿರುವ ಕೇಂದ್ರ ಸರಕಾರದ ನೈತಿಕ ಹೊಣೆಗಾರಿಕೆಯ ಭಾಗವಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ನೀಟ್ ಪರೀಕ್ಷಾ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸಬೇಕು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಧರಣಿ ಸತ್ಯಾಗ್ರಹದಲ್ಲಿ ಹಿರಿಯ ಪತ್ರಕರ್ತ ಜಾಣಗೆರೆ ವೆಂಕಟರಾಮಯ್ಯ, ಕರವೇ ಶಿವರಾಮೇಗೌಡ, ಹಿರಿಯ ವಕೀಲ ಬಾಲನ್, ಕೆ.ಎನ್.ಜಗದೀಶ್ ಕುಮಾರ್ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.










Tags

Sonam WangchukKishore
share
ವಾರ್ತಾಭಾರತಿ
ವಾರ್ತಾಭಾರತಿ
Next Story
X