Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿದಡಿ ಟೌನ್‍ಶಿಪ್ ಯೋಜನೆ | BJP ಸರಕಾರ...

ಬಿದಡಿ ಟೌನ್‍ಶಿಪ್ ಯೋಜನೆ | BJP ಸರಕಾರ ಸಾವಿರ ಎಕರೆ ಸ್ವಾಧೀನ ಮಾಡಿಕೊಂಡಾಗ ಯಾಕೆ ಸುಮ್ಮನಿದ್ದರು?: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ15 Jun 2026 8:20 PM IST
share
ಬಿದಡಿ ಟೌನ್‍ಶಿಪ್ ಯೋಜನೆ | BJP ಸರಕಾರ ಸಾವಿರ ಎಕರೆ ಸ್ವಾಧೀನ ಮಾಡಿಕೊಂಡಾಗ ಯಾಕೆ ಸುಮ್ಮನಿದ್ದರು?: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

ಬೆಂಗಳೂರು: ಬಿಡದಿಯಲ್ಲಿ ಟೌನ್‍ಶಿಪ್ ನಿರ್ಮಾಣ ಮಾಡುವ ಸಂಬಂಧ ಹಿಂದಿನ ಬಿಜೆಪಿ ಸರಕಾರ ಒಂದು ಸಾವಿರ ಎಕರೆ ಜಮೀನನ್ನು ಸ್ವಾಧೀನ ಮಾಡಿಕೊಂಡಾಗ ಯಾಕೆ ಸುಮ್ಮನಿದ್ದರು? ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ಸೋಮವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮಹಾರಾಷ್ಟ್ರದಲ್ಲಿ 90 ಸಾವಿರ ಎಕರೆ, ತೆಲಂಗಾಣದಲ್ಲಿ 40 ಸಾವಿರ ಎಕರೆಯಲ್ಲಿ ಟೌನ್ ಶಿಪ್ ಮಾಡುತ್ತಿದ್ದಾರೆ. ಬಿಡದಿಯದು ನನ್ನ ಯೋಜನೆಯಲ್ಲ. ಕುಮಾರಸ್ವಾಮಿ ಈ ಯೋಜನೆಗೆ ಅಧಿಸೂಚನೆ ಹೊರಡಿಸಿದ್ದರು ಎಂದು ಹೇಳಿದರು.

ಹಿಂದಿನ ಬಿಜೆಪಿ ಸರಕಾರ ಈ ಜಾಗದಲ್ಲಿ ಒಂದು ಸಾವಿರ ಎಕರೆಯನ್ನು ಕೆಐಎಡಿಬಿಗೆ ಸ್ವಾಧೀನ ಪಡಿಸಿಕೊಟ್ಟಾಗ ಇವರು ಯಾಕೆ ಸುಮ್ಮನಿದ್ದರು? ಹಾರೋಹಳ್ಳಿ ಕೈಗಾರಿಕಾ ಪ್ರದೇಶ ಮಾಡಿದ್ದು ಯಾರು? ಆಗ ರೈತರನ್ನು ಕಳುಹಿಸಲಿಲ್ಲವೇ? ಇಲ್ಲಿ ರೈತರು ಜಮೀನು ನೀಡಲು ಮುಂದಾಗಿದ್ದಾರೆ. ಆದರೆ ಇವರಿಗೆ ರಾಜಕಾರಣ ಮಾಡಬೇಕು, ಮಾಡುತ್ತಿದ್ದಾರೆ ಎಂದು ಶಿವಕುಮಾರ್ ಹರಿಹಾಯ್ದರು.

ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬಲು ಗ್ಯಾರಂಟಿ:

ಆದಾಯ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬಲು, ನಮ್ಮ ಸರಕಾರ ಪ್ರೀತಿಯಿಂದ ಕೊಟ್ಟಿರುವ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.

ವಿರೋಧ ಪಕ್ಷಗಳು ಇರುವುದೆ ಟೀಕೆ ಮಾಡಲು. ನಾವು ಏನೇ ಒಳ್ಳೆಯದು ಮಾಡಲು ಮುಂದಾದರೂ ಅದಕ್ಕೆ ಅಡ್ಡಗಾಲು ಹಾಕುವುದಕ್ಕೆ ವಿರೋಧ ಪಕ್ಷಗಳಿರುವುದು. ಅವರ ಕೈಯಲ್ಲಿ ಆಗದಿದ್ದ ಕೆಲಸ ನಾವು ಮಾಡುತ್ತಿದ್ದೇವೆ. ಗ್ಯಾರಂಟಿ ಯೋಜನೆ ಅರ್ಹ ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳಲು ಸರಕಾರ ಮುಂದಾಗಿದೆ ಎಂದು ಅವರು ಹೇಳಿದರು.

ಆರಂಭದಲ್ಲಿ ಕೆಲವು ಫಲಾನುಭವಿಗಳು ಬೇರೆಯವರ ದೂರವಾಣಿ ಸಂಖ್ಯೆ ಹಾಗೂ ಇತರೆ ಮಾಹಿತಿ ನೀಡಿದ್ದಾರೆ. ಬೇರೆಯವರ ಖಾತೆಗೆ ಹಣ ಹೋಗುತ್ತಿರುವ ಬಗ್ಗೆ ನಮಗೆ ಮಾಹಿತಿ ಇದೆ. ಫಲಾನುಭವಿಗಳ ಖಾತೆಗೆ ಹಣ ಹೋಗುವಂತೆ ಮಾಡುವುದು ಸರಕಾರದ ಉದ್ದೇಶ ಎಂದು ಶಿವಕುಮಾರ್ ತಿಳಿಸಿದರು.

ಸರಕಾರವು ಕರ್ನಾಟಕದವರಿಗೆ ಈ ಯೋಜನೆ ನೀಡುತ್ತಿದ್ದು, ಅನ್ಯ ರಾಜ್ಯದವರಿಗೆ ಈ ಯೋಜನೆ ನೀಡುವುದಿಲ್ಲ. ಉಚಿತ ವಿದ್ಯುತ್ ಅನ್ನು ನಮ್ಮ ರಾಜ್ಯದ ಮತದಾರರಿಗೆ ನೀಡಬೇಕೆ ಹೊರತು, ಬೇರೆ ರಾಜ್ಯದವರಿಗೆ ಯಾಕೆ ಕೊಡಬೇಕು? ಹೀಗಾಗಿ ಫಲಾನುಭವಿಗಳಿಗೆ ಗುರುತಿನ ಚೀಟಿ ನೀಡಲು ಸಚಿವ ಸಂಪುಟದಲ್ಲಿ ತೀರ್ಮಾನಿಸಿದ್ದೇವೆ. ಆ ಪ್ರಕ್ರಿಯೆ ನಡೆಯುತ್ತಿದೆ ಎಂದು ಅವರು ಹೇಳಿದರು.

ಯೋಜನೆ ನಿಲ್ಲಿಸುವುದು ನಮ್ಮ ಉದ್ದೇಶವಲ್ಲ. ನಮ್ಮ ಗ್ಯಾರಂಟಿ ದೇಶಕ್ಕೆ ಮಾದರಿ. ಮಹಾರಾಷ್ಟ್ರ, ಮಧ್ಯಪ್ರದೇಶ, ಆಂಧ್ರಪ್ರದೇಶ ಸೇರಿದಂತೆ ಬೇರೆ ರಾಜ್ಯಗಳು ನಮ್ಮ ಮಾದರಿ ಅನುಸರಿಸಿವೆ. ಕೆಲವರು ಗೃಹಲಕ್ಷ್ಮಿ ಹಣವನ್ನು ನಕಲಿ ಫೈನಾನ್ಸ್ ವ್ಯವಹಾರಕ್ಕೆ ಬಳಸುತ್ತಿದ್ದಾರೆ. ಬೆಳಗಾವಿಯ ಪ್ರಕರಣವನ್ನು ನೋಡಿದ್ದೇವಲ್ಲ. ಇದಕ್ಕಾಗಿ ಗ್ರಾಮ ಪಂಚಾಯಿತಿಯಿಂದ ತಾಲೂಕು ಪಂಚಾಯಿತಿವರೆಗೆ ಎಲ್ಲೆಲ್ಲಿ ಇಂತಹ ಯೋಜನೆಗಳಿವೆಯೋ ಅವುಗಳಿಗೆ ಕಡಿವಾಣ ಹಾಕಲು ನಾವು ನಿರ್ದೇಶನ ನೀಡಿದ್ದೇವೆ ಎಂದು ಅವರು ಹೇಳಿದರು.


Tags

D.K. ShivakumarH.D. Kumaraswamy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X