ರಾಜ್ಯ ಪತ್ರಕರ್ತರ ಸಮ್ಮೇಳನದ ಲಾಂಛನ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೀದರ್ ಜಿಲ್ಲೆಯಲ್ಲಿ ಮಾರ್ಚ್‍ನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆಯಲಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಗುರುವಾರ ಅನಾವರಣ ಮಾಡಿದ್ದಾರೆ.
ಇದೇ ವೇಳೆ ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಿದರು.
ಈ ಸಂದರ್ಭದಲ್ಲಿ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಎಚ್.ಬಿ.ಮದನಗೌಡ, ಪ್ರದಾನ ಕಾರ್ಯದರ್ಶಿ ಲೋಕೇಶ್, ಕಾರ್ಯದರ್ಶಿ ಸೋಮಶೇಖರ ಕೆರಗೋಡು, ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಆನಂದ್ ದೇವಪ್ಪ, ಬಾಬುವಾಲಿ, ಶಿವಕುಮಾರಸ್ವಾಮಿ, ಪೃಥ್ವಿ ಮತ್ತಿತರರು ಹಾಜರಿದ್ದರು.
Next Story





