Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು ನಾಗರಿಕರಿಗೆ ʼಭೂ ಗ್ಯಾರಂಟಿʼ:...

ಬೆಂಗಳೂರು ನಾಗರಿಕರಿಗೆ ʼಭೂ ಗ್ಯಾರಂಟಿʼ: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ13 May 2026 7:17 PM IST
share
ಬೆಂಗಳೂರು ನಾಗರಿಕರಿಗೆ ʼಭೂ ಗ್ಯಾರಂಟಿʼ: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ
► 'ನನ್ನ ಖಾತೆ, ನನ್ನ ಹಕ್ಕು' ಅಭಿಯಾನಕ್ಕೆ ಮೇ 16 ರಂದು ಚಾಲನೆ ► 'ಬಿ' ಯಿಂದ 'ಎ' ಖಾತೆ: 100 ದಿನದಲ್ಲಿ ಶುಲ್ಕ ಪಾವತಿಸಿದರೆ ಶೇ.60 ರಷ್ಟು ರಿಯಾಯಿತಿ

ಬೆಂಗಳೂರು: "ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿಯಾದ 'ಭೂ ಗ್ಯಾರಂಟಿ' ಮೂಲಕ ಬೆಂಗಳೂರು ನಾಗರಿಕರಿಗೆ 'ಇ' ಖಾತಾ ವಿತರಣೆ, ಕಟ್ಟಡ ಉಲ್ಲಂಘನೆ ವಿನಾಯಿತಿ ಮಿತಿ ಶೇ.5 ರಿಂದ ಶೇ.15 ಕ್ಕೆ ಹೆಚ್ಚಳ, 100 ದಿನದಲ್ಲಿ 'ಎ' ಯಿಂದ 'ಬಿ' ಖಾತಾ ಶುಲ್ಕ ಪಾವತಿಸಿದರೆ ಶೇ. 60 ರಷ್ಟು ರಿಯಾಯಿತಿ, ಶಿವರಾಂ ಕಾರಂತ ಬಡಾವಣೆಯ ಭೂ ಮಾಲೀಕರಿಗೆ 18 ಸಾವಿರ ನಿವೇಶನ ಹಂಚಿಕೆ, ʼಗ್ರೀನ್ ಬೆಂಗಳೂರುʼ ಕಾರ್ಯಕ್ರಮ, ಬಿಡಿಎ ಮನೆಗಳ ಮಾರಾಟ ಸೇರಿದಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ನಾಗರಿಕರಿಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಘೋಷಿಸಿದ್ದಾರೆ.

ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಕೇಂದ್ರ ಕಚೇರಿಯಲ್ಲಿ ಬುಧವಾರ ಮಾಧ್ಯಮಗೋಷ್ಠಿ ನಡೆಸಿ ಬೆಂಗಳೂರು ಅನೇಕ ನಾಗರಿಕಸ್ನೇಹಿ ಘೋಷಣೆಗಳನ್ನು ಮಾಡಿದರು.

“ಬೆಂಗಳೂರು ಅಭಿವೃದ್ದಿಗೆ ಸುಮಾರು 150 ಯೋಜನೆಗಳಿದ್ದು ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಈ ಬಗ್ಗೆ ಪ್ರತ್ಯೇಕ ಮಾಹಿತಿ ನೀಡಲಾಗುವುದು. ಮೊದಲಿಗೆ 'ನನ್ನ ಖಾತೆ, ನನ್ನ ಹಕ್ಕು' ಅಭಿಯಾನ ಮೂರು ತಿಂಗಳ ಕಾಲ ಶನಿವಾರ ನಡೆಯಲಿದೆ. “ಪ್ರತಿ ಶನಿವಾರ ಬೆಂಗಳೂರಿನ ಐದು ಪಾಲಿಕೆಗಳ ವ್ಯಾಪ್ತಿಯಲ್ಲಿ ತಲಾ 10 ರಂತೆ 50 ಸ್ಥಳಗಳಲ್ಲಿ ಈ ಅಭಿಯಾನ (ಇ-ಖಾತಾ ಸಿಟಿಜನ್ ಓಪನ್ ಹೌಸ್) ಕಾರ್ಯಕ್ರಮ ನಡೆಯಲಿದೆ. ಮೇ 16 ರಿಂದ ಇದಕ್ಕೆ ಚಾಲನೆ ನೀಡಲಾಗುವುದು. ಬೆಳಿಗ್ಗೆ 10 ಕ್ಕೆ ಪ್ರಾರಂಭವಾಗಿ ಸಂಜೆವರೆಗೆ ನಡೆಯುವ ಈ ಅಭಿಯಾನದ ಸ್ಥಳಗಳನ್ನು ಮುಂಚಿತವಾಗಿ ತಿಳಿಸಲಾಗುವುದು” ಎಂದರು.

ʼಭೂ ಗ್ಯಾರಂಟಿ; ಬೆಂಗಳೂರಿನ ನಾಗರಿಕರಿಗೆ ಸುರಕ್ಷಿತ ಡಿಜಿಟಲ್ ಆಸ್ತಿ ಹಕ್ಕು

“ನಾವು ಜಾರಿಗೆ ತಂದಿರುವ 'ಇ' ಖಾತಾ ಆಂದೋಲನ ಭಾರತದ ಅತಿದೊಡ್ಡ ಸಮಗ್ರ ಡಿಜಿಟಲ್ ನಗರ ಆಸ್ತಿ ದಾಖಲೆ ವ್ಯವಸ್ಥೆಯಾಗಿದ್ದು , 23 ಲಕ್ಷಕ್ಕೂ ಅಧಿಕ ಆಸ್ತಿ ದಾಖಲೆಗಳನ್ನು ಆನ್ಲೈನ್ ಮೂಲಕ ನೇರವಾಗಿ ನಾಗರಿಕರ ಕೈಗೆ ತಲುಪಿಸಿದೆ. ಹಳೆಯ, ಅಸ್ಪಷ್ಟ ಹಾಗೂ ಕೈಪಿಡಿ ವ್ಯವಸ್ಥೆಯನ್ನು https://BBMPeAasthi.karnataka.gov.in ರಲ್ಲಿ ಪಡೆದುಕೊಳ್ಳಬಹುದು” ಎಂದರು.

“ನಗರದಲ್ಲಿ ದಾಖಲೆಗಳು ಸರಿ ಇರುವ ಸುಮಾರು 16 ಲಕ್ಷ 'ಎ' ಖಾತೆಗಳಿವೆ. 7 ಲಕ್ಷ 'ಬಿ' ಖಾತೆಗಳಿವೆ. “ಭೂ ಗ್ಯಾರಂಟಿ”ಮೂಲಕ ಬೆಂಗಳೂರಿನ ಪ್ರತಿಯೊಬ್ಬ ನೈಜ ಆಸ್ತಿ ಮಾಲೀಕರಿಗೂ ಸುರಕ್ಷಿತ, ವಿಶ್ವಾಸಾರ್ಹ ಹಾಗೂ ಎಲ್ಲೆಡೆಯೂ ಲಭ್ಯವಾಗುವ ಡಿಜಿಟಲ್ ಆಸ್ತಿ ದಾಖಲೆಗಳನ್ನು ಒದಗಿಸಲಾಗುವುದು. ಇದನ್ನು ಪಾರದರ್ಶಕ, ಸುರಕ್ಷಿತ ಹಾಗೂ ನಾಗರಿಕ ಕೇಂದ್ರಿತ ಡಿಜಿಟಲ್ ಸ್ವರೂಪಕ್ಕೆ ಪರಿವರ್ತಿಸಲಾಗಿದೆ” ಎಂದರು.

100 ದಿನಗಳಲ್ಲಿ ಶುಲ್ಕ ಪಾವತಿ ಮಾಡಿದರೆ ಶೇ.60 ರಷ್ಟು ರಿಯಾಯಿತಿ

'ಬಿ' ಖಾತೆಯಿಂದ 'ಎ' ಖಾತೆ ಬದಲಾವಣೆಗೆ ಅರ್ಜಿ ಸಲ್ಲಿಸಿದ್ದವರು ದಾಖಲೆಗಳನ್ನು ಸರಿಯಾಗಿ ನೀಡಿದ್ದರೆ ಈಗ ಗೈಡೆನ್ಸ್ ವ್ಯಾಲ್ಯೂನ ಶೇ. 5 ರಷ್ಟನ್ನು ಕಟ್ಟಬೇಕಿದೆ. ಆದರೆ 100 ದಿನಗಳ ಒಳಗಾಗಿ ಶುಲ್ಕ ಪಾವತಿಸಿದರೆ ಶೇ. 2 ರಷ್ಟು ಕಟ್ಟಿದರೆ ಸಾಕು. ಅಂದರೆ ಶೇ.60 ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ಅಂದರೆ 1 ಕೋಟಿ ಆಸ್ತಿಯ ಬೆಲೆ ಇದ್ದರೆ 5 ಲಕ್ಷ ಶುಲ್ಕ ಪಾವತಿ ಮಾಡಬೇಕಿತ್ತು. ಈಗ 2 ಲಕ್ಷ ಕಟ್ಟಿದರೆ ಸಾಕು. ಇದರಿಂದ 7 ಲಕ್ಷ ಆಸ್ತಿ ಮಾಲೀಕರಿಗೆ ಉಪಯೋಗವಾಗಲಿದೆ” ಎಂದರು.

“100 ದಿನಗಳಲ್ಲಿ ಇದರ ಉಪಯೋಗ ಪಡೆಯಲಿಲ್ಲ ಎಂದರೆ ನಂತರ ಶೇ.5 ರಷ್ಟೇ ಶುಲ್ಕ ಪಾವತಿ ಮಾಡಬೇಕಾಗುತ್ತದೆ. ಪ್ರತಿಯೊಂದು ಆಸ್ತಿ ದಾಖಲೆಗಳಲ್ಲಿ ಜಿಪಿಎಸ್, ಮಾಲೀಕರ ಫೋಟೋ ಇರುತ್ತದೆ. ಒಂದೇ ಒಂದು ರೂಪಾಯಿ ಲಂಚ ಇಲ್ಲದಂತೆ ಮನೆ ಬಾಗಿಲಿಗೆ ದಾಖಲೆಗಳನ್ನು ತಲುಪಿಸುವ ವ್ಯವಸ್ಥೆ ಮಾಡಲಾಗಿದೆ. ಗ್ಯಾರಂಟಿ ಅನುಷ್ಠಾನ ಸಮಿತಿಯವರು, ಅಧಿಕಾರಿಗಳು ಇದರ ಜವಾಬ್ದಾರಿ ಹೊತ್ತಿರುತ್ತಾರೆ. ಜೊತೆಗೆ ಆನ್ ಲೈನ್ ಅಲ್ಲೂ ಡೌನ್ ಲೋಡ್ ಮಾಡಿಕೊಳ್ಳಬಹುದು” ಎಂದರು.

“ಈ ಯೋಜನೆ ಬಗ್ಗೆ ಪ್ರತಿ ಮನೆಗೂ ಮಾಹಿತಿ ತಲುಪಿಸಲಾಗುವುದು. ವಾಟ್ಸಪ್ ಸೇರಿದಂತೆ ಇತರೇ ಮಾಧ್ಯಮಗಳ ಮೂಲಕ ಮಾಹಿತಿ ರವಾನಿಸಲಾಗುವುದು. ಇಂಗ್ಲೀಷ್ ಹಾಗೂ ಕನ್ನಡದಲ್ಲಿ ಮಾಹಿತಿ ನೀಡಲಾಗುವುದು. ದಾಖಲೆಗಳು ಕನ್ನಡದಲ್ಲಿ ಇರುತ್ತವೆ” ಎಂದರು.

ಕಟ್ಟಡ ಉಲ್ಲಂಘನೆ ವಿನಾಯಿತಿ ಮಿತಿ ಶೇ.5 ರಿಂದ ಶೇ.15 ಕ್ಕೆ ಹೆಚ್ಚಳ

“ಕಟ್ಟಡದ ಉಲ್ಲಂಘನೆ ವಿನಾಯಿತಿ ಮಿತಿಯನ್ನು (ಎತ್ತರ, ಎಫ್ ಎಆರ್, ಸೆಟ್ ಬ್ಯಾಕ್) ಶೇ.5 ರ ಬದಲಾಗಿ ಶೇ.15 ಕ್ಕೆ ಹೆಚ್ಚಿಸಲಾಗಿದೆ. ಶೇ.15 ರಷ್ಟು ಪ್ರಮಾಣದ ಉಲ್ಲಂಘನೆಗಳಿಗೆ ದಂಡ ಪಾವತಿಸಿಕೊಂಡು ಸ್ವಾಧೀನಾನುಭವ ಪ್ರಮಾಣ ಪತ್ರ ನೀಡಲು ಒಪ್ಪಿಗೆ ನೀಡಲಾಗಿದೆ. ಸುಪ್ರೀಂ ಕೋರ್ಟ್ ಸ್ವಾಧೀನಾನುಭವ ಪ್ರಮಾಣ ಪತ್ರ ಪಡೆಯದ ಕಟ್ಟಡಗಳಿಗೆ ವಿದ್ಯುತ್ ಹಾಗೂ ನೀರು ಸರಬರಾಜು ಸೌಕರ್ಯ ಒದಗಿಸಬಾರದೆಂದು ಆದೇಶಿಸಿದೆ. ಈ ಸಮಸ್ಯೆ ನಿವಾರಿಸಲು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಇದರ ಬಗ್ಗೆ ತೀರ್ಮಾನ ಮಾಡಲಾಗುತ್ತಿದೆ” ಎಂದು ಹೇಳಿದರು.

“ನಾವು ಅಕ್ರಮ ಅಕ್ರಮ ಮಾಡುತ್ತಿಲ್ಲ. ನಗರದಲ್ಲಿ ಭೂಮಿಯ ತೀವ್ರ ಬೇಡಿಕೆಯಿಂದ ಹಾಗೂ ದಿನೇ ದಿನೇ ಬೆಳವಣಿಗೆಗಳ ಒತ್ತಡದಿಂದ ನಿವೇಶನ/ ಸ್ವತ್ತಿನ ಮಾಲೀಕರು ನಿಯಮಾನುಸಾರ ಸೆಟ್ ಬ್ಯಾಕ್ ಬಿಡದೆ ನಕ್ಷೆ ಉಲ್ಲಂಘನೆ ಮಾಡಿ ಕಟ್ಟಡಗಳನ್ನು ನಿರ್ಮಾಣ ಮಾಡಿದ್ದಾರೆ. 20/30, 30/40, 40/60 ಅಳತೆಯ ನಿವೇಶನಗಳಿಗೆ ಗರಿಷ್ಟ ಶೇ. 50 ರಷ್ಟು ಸೆಟ್ ಬ್ಯಾಕ್ ರಿಯಾಯಿತಿ ನೀಡಲು ಕಾಯ್ದೆಯಲ್ಲಿ ಅವಕಾಶವಿದೆ. ನಾವೀಗ ಶೇ. 15 ರಷ್ಟು ವಿನಾಯಿತಿ ನೀಡಿದ್ದೇವೆ” ಎಂದರು.

2020 ರಲ್ಲಿ ಬಿಜೆಪಿ ಸರ್ಕಾರ '38 ಡಿ' ಎನ್ನುವ ಕಾನೂನು ಜಾರಿಗೆ ತಂದಿತ್ತು. ಸುಮಾರು 1 ಲಕ್ಷಕ್ಕೂ ಹೆಚ್ಚು ಜನ ಬಿಡಿಎ ಲೇಔಟ್ ಗಳಲ್ಲಿ ಮನೆಗಳನ್ನು ಕಟ್ಟಿಕೊಂಡಿದ್ದರು. ಇದರಲ್ಲಿ 570 ಜನ ಮಾತ್ರ ಅರ್ಜಿ ಸಲ್ಲಿಸಿದ್ದರು. 200 ರಿಂದ 600 ಅಡಿವರೆಗೆ ಶೇ.10 ರಷ್ಟು, 600 ರಿಂದ 900 ಅಡಿವರೆಗೆ ಶೇ.25 ರಷ್ಟು, 1200 ರಿಂದ 2400 ವರೆಗೆ ಶೇ.40 ರಷ್ಟು, 2400 ರಿಂದ 4000 ವರೆಗೂ ಶೇ.50 ರಷ್ಟು ಗೈಡೆನ್ಸ್ ವ್ಯಾಲ್ಯೂ ಮೇಲೆ ಶುಲ್ಕ ಕಟ್ಟಲು ಕಾನೂನಿನಲ್ಲಿ ಅವಕಾಶ ಮಾಡಿದ್ದರು. ಆಗ 6 ತಿಂಗಳ ಕಾಲ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಆದರೆ ಯಾರೂ ಕೂಡ ಶುಲ್ಕ ಕಟ್ಟಲು ಮುಂದೆ ಬರಲಿಲ್ಲ. ಶುಲ್ಕ ಹೆಚ್ಚಾಯಿತು ಎಂದು ಯೋಜನೆ ಪ್ರಯೋಜನ ಪಡೆಯಲಿಲ್ಲ. ಈಗಲೂ ಈ ದಾಖಲೆಗಳು ಬರೀ ಸರ್ಕಾರಿ ದಾಖಲೆಗಳಾಗಿ ಉಳಿದುಕೊಂಡಿವೆ" ಎಂದರು.

ಈಗ ಅರ್ಜಿ ಹಾಕಲು ಜೂನ್ 15 ರಿಂದ ಒಟ್ಟು ಮೂರು ತಿಂಗಳ ಕಾಲ ಅವಕಾಶ ಕಲ್ಪಿಸಿಕೊಡಲಾಗುವುದು. ಓಟಿಎಸ್ ಜಾರಿ ಮಾಡಲಾಗುವುದು. ಮೊದಲ 100 ದಿನ ಅರ್ಜಿ ಸಲ್ಲಿಸಲು, 100 ದಿನ ಅರ್ಜಿ ಪರಿಶೀಲನೆಗೆ, ನಂತರ ಪಾವತಿಗೆ ಅವಕಾಶ ನೀಡಲಾಗವುದು. 1 ವರ್ಷ ಕಾಲಮಿತಿಯೊಳಗೆ ಅಂದರೆ 2027 ರ ಜೂನ್ ಗೆ ಈ ಯೋಜನೆ ಮುಕ್ತಾಯಗೊಳಿಸಲಾಗವುದು” ಎಂದರು.

“ಮೂರು ತಿಂಗಳ ಒಳಗೆ ಅರ್ಜಿ ಸಲ್ಲಿಸಿದವರು ಶೇ 10 ರ ಬದಲು ಶೇ. 5 ರಷ್ಟು ಮಾತ್ರ ಪಾವತಿ ಮಾಡಬಹುದು. ಅವರಿಗೆ ಶೇ.50 ರಷ್ಟು ರಿಯಾಯಿತಿ ದೊರೆಯಲಿದೆ. ಕಾನೂನಿನ ಚೌಕಟ್ಟಿನಲ್ಲಿಯೇ ರಿಯಾಯಿತಿ ನೀಡಲಾಗಿದೆ. ಗೈಡೆನ್ಸ್ ವ್ಯಾಲ್ಯೂ ಪೈಕಿ ಶೇ. 25 ಇರುವ ಕಡೆ ಶೇ 12.5, ಶೇ.40 ಇರುವ ಕಡೆ ಶೇ.20 ರಷ್ಟು, ಶೇ.50 ಇರುವ ಕಡೆ ಶೇ.25 ರಷ್ಟು ರಿಯಾಯಿತಿ ನೀಡಲಾಗುವುದು. ಈ ಬಗ್ಗೆ ಮುಖ್ಯಮಂತ್ರಿಯವರು ಸೇರಿದಂತೆ ಸಚಿವರ ಬಳಿಯೂ ಚರ್ಚೆ ನಡೆಸಲಾಗಿದೆ” ಎಂದರು.

“ಈ ಯೋಜನೆಯ ಸೌಲಭ್ಯ ಬಳಸಿಕೊಳ್ಳದೇ ಇದ್ದರೆ ಕಾನೂನು ರೀತಿ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಈಗಾಗಲೇ ಬಿಡಿಎ 2 ಸಾವಿರ ಕೋಟಿ ಮೌಲ್ಯದ ಆಸ್ತಿಗಳನ್ನು ವಶಕ್ಕೆ ಪಡೆದಿದೆ” ಎಂದರು.

ಶಿವರಾಂ ಕಾರಂತ ಬಡಾವಣೆಯ ಭೂ ಮಾಲೀಕರಿಗೆ 18 ಸಾವಿರ ನಿವೇಶನ ಹಂಚಿಕೆ:

“3,052 ಭೂ ಮಾಲಕರು ತಮ್ಮ ಆಸ್ತಿಯನ್ನು ಶಿವರಾಂ ಕಾರಂತ ಬಡಾವಣೆಗೆ ನೀಡಿದ್ದರು. ಅನೇಕ ಆಸ್ತಿ ಮಾಲಕರು ಬೇರೆಯವರಿಗೆ ಆಸ್ತಿ ಮಾರಾಟ ಮಾಡಿದ್ದು ಸೇರಿದಂತೆ ಅನೇಕ ತೊಡಕುಗಳಿದ್ದವು. ಈಗ ನ್ಯಾಯಾಲಯದ ಅನುಮತಿ ಪಡೆದು 18 ಸಾವಿರ ನಿವೇಶನಗಳನ್ನು ಭೂ ಮಾಲೀಕರಿಗೆ ನೀಡಲಾಗುತ್ತಿದೆ. ಮೇ 15 ನೇ ತಾರೀಕಿನಿಂದಲೇ ನಿವೇಶನ ಪಡೆದುಕೊಳ್ಳಲು ಅವಕಾಶ ನೀಡಲಾಗಿದೆ. ಕೇಂದ್ರಿಯ ಇ ಗವರ್ನೆನ್ಸ್ ನಿಂದ ಸಾಫ್ಟವೇರ್ ಅಭಿವೃದ್ಧಿಪಡಿಸಿ ಅದರ ಮೂಲಕ ಹಂಚಿಕೆ ವ್ಯವಸ್ಥೆ ಮಾಡಲಾಗಿದೆ” ಎಂದರು.

“1, 2 ಎಕರೆ ಅಥವಾ ಹೆಚ್ಚು ಭೂಮಿ ಹೊಂದಿದ್ದ ಮಾಲೀಕರಿಗೆ ಪ್ರತ್ಯೇಕ ಅವಕಾಶ ಕಲ್ಪಿಸಲಾಗಿದೆ. ಒಂದೇ ಜಾಗದಲ್ಲಿ ದೊಡ್ಡ ನಿವೇಶನ ಬೇಕು ಎಂದವರಿಗೂ ಅವಕಾಶ ನೀಡುತ್ತೇವೆ ಎಂದು ಹೇಳಿದ್ದೆವು. ಇದಕ್ಕೆ 7 ಜನರು ಮಾತ್ರ ಅರ್ಜಿ ಸಲ್ಲಿಕೆ ಮಾಡಿದ್ದಾರೆ. 1 ಎಕರೆ ಜಮೀನು ಇದ್ದರೆ ಒಂದೇ ಜಾಗದಲ್ಲಿ 9,583 ಚದರ ಅಡಿ ಜಾಗ ನೀಡಲಾಗುವುದು. ಇದರ ಮೂಲಕ ಎತ್ತರದ ಕಟ್ಟಡಗಳಿಗೆ ಅವಕಾಶ ಮಾಡಿಕೊಡಲು ಈ ರೀತಿ ಅನುಕೂಲ ಕಲ್ಪಿಸಲಾಗಿದೆ" ಎಂದು ವಿವರಿಸಿದರು.

1.44 ಕೋಟಿಗೆ ಬಿಡಿಎ ಮನೆ:

“ವೈಟ್ ಫೀಲ್ಡ್ ನಲ್ಲಿ 1,900 ಮನೆಗಳನ್ನು ಕಟ್ಟಲಾಗಿದೆ. 1 ಬಿಎಚ್ ಕೆ ಮನೆ 760 ಚದರ ಅಡಿಯಿದೆ. ಇದನ್ನು 6,686 ರೂಪಾಯಿಗೆ ನೀಡಲಾಗುತ್ತಿದೆ. ಇದಕ್ಕೆ ಮೇ 15 ನೇ ತಾರೀಕಿನಿಂದ ಅರ್ಜಿ ಕರೆಯಲಾಗುತ್ತಿದೆ. 1,733 ಚದರ ಅಡಿಯ 3 ಬಿಎಚ್ ಕೆ ಮನೆಗಳಿಗೆ 8,309 ರಂತೆ 1.44ಕೋಟಿ ರೂಪಾಯಿಗೆ ನೀಡಲಾಗುತ್ತಿದೆ” ಎಂದರು.

“ಚೆನ್ನೈ, ಹೈದರಾಬಾದ್, ದೆಹಲಿ, ಮುಂಬೈ ಎಲ್ಲಾ ಕಡೆಯೂ ಸಂಚಾರ ದಟ್ಟಣೆ ಇದ್ದೇ ಇದೆ. ಹೆಬ್ಬಾಳದ ಬಳಿ ಸ್ವಲ್ಪ ಒತ್ತಡವನ್ನು ಕಡಿಮೆ ಮಾಡಿದ್ದೇವೆ. ಇನ್ನೂ ಸರಳ ಮಾಡಬೇಕು ಎಂದು ಮುಂದುವರೆದಿದ್ದೇವೆ. ಈಗ ಕಡಿಮೆ ಅಂತರದ ಸುರಂಗ ರಸ್ತೆಯನ್ನು ಮಾಡುತ್ತಿದ್ದೇವೆ. ಹೆಬ್ಬಾಳ ಜಂಕ್ಷನ್ ಬಳಿಯಿಂದ ಕೃಷಿ ವಿವಿ ಬಳಿ ಹಾದು ಹೋಗಲಿದೆ. ಇಲ್ಲಿ ಮೂರು ಲೈನ್ ಗಳ ಕಟ್ ಅಂಡ್ ಕರ್ವ್ ಟನಲ್ ಬರಲಿದೆ. ಒಟ್ಟು ಈ ಸುರಂಗ ಮಾರ್ಗ ಆರು ಪಥಗಳನ್ನು ಹೊಂದಿರುತ್ತದೆ. ಇದು 2.2 ಕಿಮೀ ಉದ್ದ ಇರಲಿದೆ. ಈ ಯೋಜನೆಯನ್ನು ಋತ್ವಿಕ್ ಟನಲ್ ಗೆ ನೀಡಿದ್ದು 18 ತಿಂಗಳಲ್ಲಿ ಇದನ್ನು ಪೂರ್ಣಗೊಳಿಸಬೇಕು ಎಂದು ತಿಳಿಸಲಾಗಿದೆ. ಮೇಕ್ರಿ ವೃತ್ತದ ಬಳಿ 1.7 ಕಿಮೀ ಉದ್ದದ 4 ಪಥ ಹೊಂದಿರುವ ಎಲಿವೇಟೆಡ್ ಕಾಡಿಡಾರ್ ನಿರ್ಮಾಣ ಮಾಡಲಾಗುತ್ತದೆ. ಈ ತಿಂಗಳ ಕೊನೆಗೆ ಈ ಎರಡು ಯೋಜನೆಗಳಿಗೆ ಭೂಮಿ ಪೂಜೆ ನೆರವೇರಿಸಲಾಗುವುದು” ಎಂದರು.

“ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 631 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ 10.77 ಕಿಮೀ ಉದ್ದದ ರಸ್ತೆಯನ್ನು ಮುಂದಿನ 15 ದಿನಗಳಲ್ಲಿ ಲೋಕಾರ್ಪಣೆಗೊಳಿಸಲಾಗುವುದು. ಈ ರಸ್ತೆ ನೋಡಿದರೆ ಎಲ್ಲರಿಗೂ ಆಶ್ಚರ್ಯವಾಗುತ್ತದೆ” ಎಂದರು.

Tags

CongressDK ShivkumarBhu Guarantee
share
ವಾರ್ತಾಭಾರತಿ
ವಾರ್ತಾಭಾರತಿ
Next Story
X